PR Sreejesh: ಪಿಆರ್​ ಶ್ರೀಜೇಶ್​ಗೆ 2 ಕೋಟಿ ರೂ. ಬಹುಮಾನ ಘೋಷಿಸಿದ ಕೇರಳ ಸರ್ಕಾರ

ಪಿಆರ್​ ಶ್ರೀಜೇಶ್ ಭಾರತದ ಪರ ಒಟ್ಟು 336 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಗೋಲ್ ಕೀಪರ್ ಆಗಿ ಕಾಣಿಸಿಕೊಂಡಿದ್ದ ಅವರು ಹಲವು ಪಂದ್ಯಗಳಲ್ಲಿ ಭಾರತ ತಂಡದ ಗೆಲುವಿನ ರೂವಾರಿಯಾಗಿದ್ದರು. ಅದರಲ್ಲೂ ಟೋಕಿಯೋ ಒಲಿಂಪಿಕ್ಸ್ ಹಾಗೂ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಟೀಮ್ ಇಂಡಿಯಾ ಕಂಚಿನ ಪದಕ ಗೆಲ್ಲುವಲ್ಲಿ ಶ್ರೀಜೇಶ್ ಪ್ರಮುಖ ಪಾತ್ರವಹಿಸಿದ್ದರು.

PR Sreejesh: ಪಿಆರ್​ ಶ್ರೀಜೇಶ್​ಗೆ 2 ಕೋಟಿ ರೂ. ಬಹುಮಾನ ಘೋಷಿಸಿದ ಕೇರಳ ಸರ್ಕಾರ
PR Sreejesh
Follow us
ಝಾಹಿರ್ ಯೂಸುಫ್
|

Updated on: Aug 22, 2024 | 12:31 PM

ಭಾರತ ಹಾಕಿ ತಂಡದ ಮಾಜಿ ಗೋಲ್​ ಕೀಪರ್ ಪಿಆರ್​ ಶ್ರೀಜೇಶ್​ ಅವರಿಗೆ ಕೇರಳ ಸರ್ಕಾರವು 2 ಕೋಟಿ ರೂ. ನಗದು ಬಹುಮಾನ ಘೋಷಿಸಿದೆ. ಭಾರತೀಯ ಹಾಕಿಗೆ ಶ್ರೀಜಿತ್ ನೀಡಿದ ಕೊಡುಗೆಯನ್ನು ಪರಿಗಣಿಸಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಿಎಂಒ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೇರಳ ಮೂಲದ ಪಿಆರ್​ ಶ್ರೀಜೇಶ್ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತ ಹಾಕಿ ತಂಡದ ಗೋಲ್ ಕೀಪರ್ ಆಗಿ ಕಾಣಿಸಿಕೊಂಡಿದ್ದರು. ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ ಶ್ರೀಜೇಶ್ ಭಾರತ ತಂಡವು ಕಂಚಿನ ಪದಕ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಗೆಲುವಿನೊಂದಿಗೆ ಅವರು ಹಾಕಿ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದರು.

ಇದೀಗ ನಿವೃತ್ತರಾಗಿ ಹೊಸ ಇನಿಂಗ್ಸ್ ಆರಂಭಿಸಲು ಮುಂದಾಗಿರುವ ಪಿಆರ್​ ಶ್ರೀಜೇಶ್ ಅವರಿಗೆ ಕೇರಳ ಸರ್ಕಾರವು 2 ಕೋಟಿ ರೂ. ನಗದು ಬಹುಮಾನ ನೀಡಲು ಮುಂದಾಗಿದೆ.

  • ಪಿಆರ್​ ಶ್ರೀಜೇಶ್ ಪ್ಯಾರಿಸ್ ಒಲಿಂಪಿಕ್ಸ್‌ 2024 ರಲ್ಲಿ ಹಾಗೂ ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಕಂಚಿನ ಪದಕ ಗೆದ್ದ ಭಾರತ ತಂಡದ ಗೋಲ್ ಕೀಪರ್ ಆಗಿದ್ದರು.
  • ಒಲಿಂಪಿಕ್ಸ್​ನಲ್ಲಿ 52 ವರ್ಷಗಳಲ್ಲಿ ಭಾರತವು ಬ್ಯಾಕ್ ಟು ಬ್ಯಾಕ್ ಪದಕ ಗೆಲ್ಲುವಲ್ಲಿ ಪಿಆರ್​ ಶ್ರೀಜೇಶ್ ಪ್ರಮುಖ ಪಾತ್ರವಹಿಸಿದ್ದರು.
  • ಕೇರಳ ಮೂಲದ ಅಥ್ಲೀಟ್ ಹಲವಾರು ವರ್ಷಗಳಿಂದ ಭಾರತೀಯ ಹಾಕಿ ತಂಡದ ಅವಿಭಾಜ್ಯ ಅಂಗವಾಗಿದ್ದಾರೆ. ಅದ್ಭುತ ಪ್ರದರ್ಶನ ಮತ್ತು ಮತ್ತು ನಾಯಕತ್ವದೊಂದಿಗೆ ಟೀಮ್ ಇಂಡಿಯಾ ಗೆಲುವಿಗೆ ಕಾರಣಕರ್ತರಾಗಿದ್ದಾರೆ.

ಶ್ರೀಜೇಶ್ ಹೊಸ ಇನಿಂಗ್ಸ್​:

ಪ್ಯಾರಿಸ್ ಒಲಿಂಪಿಕ್ಸ್ ಬೆನ್ನಲ್ಲೇ ನಿವೃತ್ತಿ ಘೋಷಿಸಿರುವ ಶ್ರೀಜೇಶ್ ಅವರನ್ನು ಜೂನಿಯರ್ ಪುರುಷರ ತಂಡದ ಮುಖ್ಯ ಕೋಚ್ ಆಗಿ ಭಾರತೀಯ ಹಾಕಿ ಫೆಡರೇಷನ್ ನೇಮಿಸಿದೆ. ಈ ವರ್ಷದ ಅಕ್ಟೋಬರ್‌ನಲ್ಲಿ ನಡೆಯಲಿರುವ ಸುಲ್ತಾನ್ ಆಫ್ ಜೋಹರ್ ಕಪ್ ಮೂಲಕ ಶ್ರೀಜೇಶ್ ಕೋಚ್ ಆಗಿ ಕಾರ್ಯಾರಂಭ ಮಾಡಲಿದ್ದು, ಈ ಮೂಲಕ ಹೊಸ ಸಾಧನೆ ಮಾಡುವ ತವಕದಲ್ಲಿದ್ದಾರೆ.

ಶ್ರೀಜೇಶ್ ಸಾಧನೆ:

  • ಶ್ರೀಜೇಶ್ ಒಲಿಂಪಿಕ್ಸ್‌ನಲ್ಲಿ (2020 ಮತ್ತು 2024) ಎರಡು ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ.
  • 2016 ರ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಕ್ವಾರ್ಟರ್ ಫೈನಲ್‌ಗೆ ಮುನ್ನಡೆಸಿದ್ದರು.
  • ಶ್ರೀಜೇಶ್ ಮೂರು ಬಾರಿ ಏಷ್ಯನ್ ಗೇಮ್ಸ್ ಪದಕ (2 ಚಿನ್ನ, 1 ಕಂಚು) ಗೆದ್ದುಕೊಂಡಿದ್ದಾರೆ.
  • ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಎರಡು ಬಾರಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ.
  • ಐದು ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪದಕಗಳನ್ನು, ಒಂದು ಏಷ್ಯಾ ಕಪ್ ಪದಕ ಮತ್ತು ಎರಡು ಚಾಂಪಿಯನ್ಸ್ ಟ್ರೋಫಿ ಪದಕಗಳನ್ನು ಗೆದ್ದಿದ್ದಾರೆ.
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ