PT Usha: ಭಾರತದ ಗೋಲ್ಡನ್ ಗರ್ಲ್ ಪಿಟಿ ಉಷಾ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ ಕೇರಳ ಪೊಲೀಸರು

PT Usha: ಉಷಾ ಬಿಲ್ಡರ್ ಜೊತೆ ಸೇರಿ ತನಗೆ ಮೋಸ ಮಾಡಿದ್ದಾರೆ ಎಂದು ಜೋಸೆಫ್ ಆರೋಪಿಸಿದ್ದಾರೆ. ಅವರ ದೂರನ್ನು ಕೋಝಿಕ್ಕೋಡ್ ಪೊಲೀಸ್ ಮುಖ್ಯಸ್ಥ ಎವಿ ಜಾರ್ಜ್ ಅವರಿಗೆ ವಿವರವಾದ ವಿಚಾರಣೆಗಾಗಿ ಕಳುಹಿಸಲಾಗಿದೆ.

PT Usha: ಭಾರತದ ಗೋಲ್ಡನ್ ಗರ್ಲ್ ಪಿಟಿ ಉಷಾ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ ಕೇರಳ ಪೊಲೀಸರು
ಪಿಟಿ ಉಷಾ
Follow us
TV9 Web
| Updated By: ಪೃಥ್ವಿಶಂಕರ

Updated on: Dec 19, 2021 | 3:30 PM

ಭಾರತದ ಅಥ್ಲೀಟ್, ಚಿನ್ನದ ಪದಕ ವಿಜೇತೆ ಪಿಟಿ ಉಷಾ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಾಜಿ ಅಥ್ಲೀಟ್ ಗೆಮ್ಮಾ ಜೋಸೆಫ್ ದೂರಿನ ಮೇರೆಗೆ ಕೋಝಿಕೋಡ್ ಪೊಲೀಸರು ಉಷಾ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಷಾ ಸೇರಿ ಆರು ಮಂದಿಯ ವಿರುದ್ಧ ಐಪಿಸಿ ಸೆಕ್ಷನ್ 420ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮನೆ ನಿರ್ಮಾಣಕ್ಕೆ ಇಂತಿಷ್ಟು ಹಣ ನೀಡಿದ್ದರೂ, ಆದರೆ ಗ್ಯಾರಂಟಿ ಗಡುವಿನೊಳಗೆ ಮನೆ ಪೂರ್ಣಗೊಳಿಸಿಲ್ಲ ಎಂದು ದೂರುದಾರ ಗೆಮ್ಮಾ ದೂರಿದ್ದಾರೆ.

ಜೆಮ್ಮಾ ಜೋಸೆಫ್ ಕೋಝಿಕ್ಕೋಡ್‌ನಲ್ಲಿ ಬಿಲ್ಡರ್‌ನಿಂದ 1,012 ಚದರ ಅಡಿ ಫ್ಲಾಟ್ ಖರೀದಿಸಿದರು. ಜೋಸೆಫ್ ಒಟ್ಟು ರೂ. 46 ಲಕ್ಷ ಪಾವತಿಸಿದ್ದಾರೆ. ಆದರೆ, ಗಡುವು ಮುಗಿದಿದ್ದರು ಬಿಲ್ಡರ್ ಜೋಸೆಫ್​ಗೆ ಫ್ಲಾಟ್ ಹಸ್ತಾಂತರಿಸಿರಲಿಲ್ಲ. ಆದರೆ, ವ್ಯವಹಾರಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ಮೂಲಕ ಪೆಟ್ಟಿ ಉಷಾ ಬಿಲ್ಡರ್‌ಗೆ ಆ ಎಲ್ಲ ಹಣವನ್ನು ಪಾವತಿಸಿದ್ದಾರೆ. ಆದರೆ ಫ್ಲಾಟ್ ವಿತರಣೆಯಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಜೋಸೆಫ್ ದೂರಿದ್ದಾರೆ. ಉಷಾ ಬಿಲ್ಡರ್ ಜೊತೆ ಸೇರಿ ತನಗೆ ಮೋಸ ಮಾಡಿದ್ದಾರೆ ಎಂದು ಜೋಸೆಫ್ ಆರೋಪಿಸಿದ್ದಾರೆ. ಅವರ ದೂರನ್ನು ಕೋಝಿಕ್ಕೋಡ್ ಪೊಲೀಸ್ ಮುಖ್ಯಸ್ಥ ಎವಿ ಜಾರ್ಜ್ ಅವರಿಗೆ ವಿವರವಾದ ವಿಚಾರಣೆಗಾಗಿ ಕಳುಹಿಸಲಾಗಿದೆ.

ದೂರುದಾರರು ಕೇರಳ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಮೊರೆ ಹೋಗಿದ್ದು, ಸಮಸ್ಯೆ ಬಗೆಹರಿಸಲು ಮುಂದಾಗಿದ್ದರು. ಆದರೆ, ಬಿಲ್ಡರ್ ಆಗಲಿ, ಪಿಟಿ ಉಷಾ ಆಗಲಿ ಹಣ ಮರುಪಾವತಿ ಮಾಡಲು ಒಪ್ಪಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹೀಗಾಗಿ, ಉಷಾ ಮತ್ತು ಇತರ ಆರು ಮಂದಿ ವಿರುದ್ಧ ಐಪಿಸಿ 420 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶೀಘ್ರದಲ್ಲೇ ತನಿಖೆ ಆರಂಭವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಲ್ಡರ್​ಗಳ ಮೇಲೆ ನಿಗಾ ಇಡುವ ಕೇರಳ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ