Khel Ratna Award: ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿಗೆ ಹಾಕಿ ಮಾಂತ್ರಿಕ ಧ್ಯಾನ್​ ಚಂದ್​ ಹೆಸರಿಟ್ಟ ಪ್ರಧಾನಿ ಮೋದಿ; ಟ್ವಿಟರ್​​ನಲ್ಲಿ ಘೋಷಣೆ

Major Dhyan Chand Khel Ratna Award: ಕ್ರೀಡಾಕ್ಷೇತ್ರದ ಸಾಧಕರಿಗೆ ನೀಡುವ ಈ ಖೇಲ್​ ರತ್ನ ಪ್ರಶಸ್ತಿಗೆ ಭಾರತದ ಹಾಕಿ ಮಾಂತ್ರಿಕ ಧ್ಯಾನ್​ ಚಂದ್​ ನಾಮಕರಣ ಮಾಡುವಂತೆ ಅನೇಕರು ಪ್ರಧಾನಿ ಮೋದಿಗೆ ಮನವಿ ಮಾಡಿದ್ದರು. ಹಾಗಾಗಿ ಇಷ್ಟು ದಿನ ರಾಜೀವ್ ಗಾಂಧಿ ಹೆಸರಿನಲ್ಲಿದ್ದ ಪ್ರಶಸ್ತಿಗೆ ಧ್ಯಾನ್​ ಚಂದ್​ ಹೆಸರಿಡಲಾಗಿದೆ.

Khel Ratna Award: ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿಗೆ ಹಾಕಿ ಮಾಂತ್ರಿಕ ಧ್ಯಾನ್​ ಚಂದ್​ ಹೆಸರಿಟ್ಟ ಪ್ರಧಾನಿ ಮೋದಿ; ಟ್ವಿಟರ್​​ನಲ್ಲಿ ಘೋಷಣೆ
ಹಾಕಿ ಮಾಂತ್ರಿಕ ಧ್ಯಾನ್​ ಚಂದ್​
Follow us
TV9 Web
| Updated By: Lakshmi Hegde

Updated on:Aug 06, 2021 | 1:03 PM

ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿ (Rajeev Gandhi Khel Ratna Award) ಇನ್ನು ಮುಂದೆ ಮೇಜರ್​ ಧ್ಯಾನ್ ಚಂದ್​ ಖೇಲ್​ರತ್ನ ಪ್ರಶಸ್ತಿ (Dhyan Chand Khel Ratna Award) ಯಾಗಿ ಕೊಡಲ್ಪಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಘೋಷಿಸಿದರು. ಟ್ವೀಟ್ ಮಾಡಿರುವ ಅವರು, ಖೇಲ್ ರತ್ನ ಪ್ರಶಸ್ತಿಗೆ, ಭಾರತೀಯ ಹಾಕಿ ದಿಗ್ಗಜ ಮೇಜರ್​ ಧ್ಯಾನ್​ ಚಂದ್ (Dhyan Chand) ಹೆಸರಿಡುವಂತೆ ಅನೇಕ ನಾಗರಿಕರಿಂದ ನನಗೆ ಮನವಿ ಬಂದಿತ್ತು. ಆ ಕೋರಿಕೆಗಳನ್ನು ಪುರಸ್ಕರಿಸಲಾಗುವುದು. ಖೇಲ್​ ರತ್ನ ಪ್ರಶಸ್ತಿಗೆ ಧ್ಯಾನ್ ಚಂದ್​ ಹೆಸರಿಡಲಾಗುವುದು. ಇನ್ನು ಮುಂದೆ ಮೇಜರ್​ ಧ್ಯಾನ್​ ಚಂದ್​ ಖೇಲ್​ ರತ್ನ ಎಂಬ ಹೆಸರಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ. ಹಾಗೇ ಇಂಥದ್ದೊಂದು ವಿಚಾರವನ್ನು ಹಂಚಿಕೊಂಡ ಪ್ರತಿಯೊಬ್ಬರಿಗೂ ಧನ್ಯವಾದ ಎಂದು ಹೇಳಿದ್ದಾರೆ. 

ರಾಜೀವ್​ ಗಾಂಧಿ ಖೇಲ್​ರತ್ನ ಪ್ರಶಸ್ತಿ ಕ್ರೀಡಾಕ್ಷೇತ್ರದ ಅತ್ಯುನ್ನತ ಗೌರವವಾಗಿದೆ. ಇಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುತ್ತದೆ. ಹಾಕಿ ದಿಗ್ಗಜ ಸರ್ದಾರ್​ ಸಿಂಗ್​, ಟೆನ್ನಿಸ್​ ಆಟಗಾರ್ತಿ ಸಾನಿಯಾ ಮಿರ್ಜಾ, ಕ್ರಿಕೆಟರ್ಸ್​ಗಳಾದ ಮಹೇಂದ್ರ ಸಿಂಗ್​ ಧೋನಿ, ಸಚಿನ್​ ತೆಂಡೂಲ್ಕರ್​, ವಿರಾಟ್ ಕೊಹ್ಲಿ ಮತ್ತಿತರರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಷ್ಟು ದಿನಗಳಿಂದ ಇದು ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿ ಎಂದು ಕೊಡಲ್ಪಡುತ್ತಿತ್ತು. ಆದರೀಗ ರಾಜೀವ್​ ಗಾಂಧಿ ಹೆಸರನ್ನು ತೆಗೆದು, ಹಾಕಿ ದಿಗ್ಗಜ ಧ್ಯಾನ್​ ಚಂದ್​ ನಾಮಕರಣ ಮಾಡಲಾಗಿದೆ.

ಧ್ಯಾನ್​ಚಂದ್​ ಅವರು ಭಾರತದ ಅಗ್ರಗಣ್ಯ ಕ್ರೀಡಾಪಟುಗಳಲ್ಲಿಒಬ್ಬರು. ಅವರು ಭಾರತಕ್ಕೆ ಗೌರವ, ಹೆಮ್ಮೆಯನ್ನು ತಂದಿದ್ದಾರೆ. ನಮ್ಮ ರಾಷ್ಟ್ರದ ಕ್ರೀಡಾಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಖೇಲ್​ ರತ್ನಕ್ಕೆ ಅವರ ಹೆಸರನ್ನಿಡುವುದು ತುಂಬ ಸರಿಯಾದ ಕೆಲಸ. ಹೀಗೊಂದು ದೃಷ್ಟಿಕೋನವನ್ನು ನನಗೆ ತಿಳಿಸಿದವರಿಗೆ ಕೃತಜ್ಞತೆಗಳು ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ ಎಸ್ಪಿ ಕೋನವಂಶಿ ಕೃಷ್ಣಗೆ ನೂತನ ಸಚಿವ ಎಂಟಿಬಿ ನಾಗರಾಜ್ ಫುಲ್​ ಕ್ಲಾಸ್

ಕೊರೊನಾ ನಿಯಂತ್ರಣಕ್ಕೆ ಮತ್ತೆ ಕಠಿಣ ನಿಯಮಾವಳಿ; ತಾಂತ್ರಿಕ ಸಲಹಾ ಸಮಿತಿಯಿಂದ ಶಿಫಾರಸು

Published On - 12:47 pm, Fri, 6 August 21

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ