Kho Kho World Cup 2025: ಖೋ- ಖೋ ವಿಶ್ವಕಪ್ ಗೆದ್ದ ಭಾರತ ಪುರುಷರ ತಂಡ

Kho Kho World Cup 2025: ಭಾರತ ಮತ್ತು ನೇಪಾಳ ಪುರುಷ ತಂಡಗಳ ನಡುವೆ ನಡೆದ ಖೋ-ಖೋ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿದೆ. ನೇಪಾಳವನ್ನು 54-36 ಅಂತರದಿಂದ ಸೋಲಿಸಿದ ಭಾರತ ತಂಡ ಚೊಚ್ಚಲ ಆವೃತ್ತಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದಕ್ಕೂ ಮುನ್ನ ನಡೆದಿದ್ದ ಮಹಿಳೆಯರ ಫೈನಲ್​ನಲ್ಲಿ ನೇಪಾಳವನ್ನು ಮಣಿಸುವಲ್ಲಿ ಭಾರತ ಯಶಸ್ವಿಯಾಗಿತ್ತು.

Kho Kho World Cup 2025: ಖೋ- ಖೋ ವಿಶ್ವಕಪ್ ಗೆದ್ದ ಭಾರತ ಪುರುಷರ ತಂಡ
ಖೋ- ಖೋ ವಿಶ್ವಕಪ್
Follow us
ಪೃಥ್ವಿಶಂಕರ
|

Updated on: Jan 19, 2025 | 9:14 PM

ದೆಹಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಖೋ- ಖೋ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮುಖಾಂತರ ಭಾರತದ ಮಹಿಳಾ ಹಾಗೂ ಪುರುಷ ತಂಡಗಳು ಚಾಂಪಿಯನ್ ಪಟ್ಟವನ್ನು ಅಲಂಕರಿಸಿವೆ. ಇಂದು ಮೊದಲಿಗೆ ನಡೆದ ಮಹಿಳೆಯರ ಫೈನಲ್ ಪಂದ್ಯದಲ್ಲಿ ನೇಪಾಳ ಮಹಿಳಾ ತಂಡವನ್ನು ಮಣಿಸಿದ್ದ ಭಾರತ ಮಹಿಳಾ ತಂಡ ಟ್ರೋಫಿಯನ್ನು ಎತ್ತಿ ಹಿಡಿದಿತ್ತು. ಇದೀಗ ನಡೆದ ಪುರುಷರ ಫೈನಲ್ ಪಂದ್ಯದಲ್ಲಿ ಭಾರತದ ಪುರುಷರ ತಂಡ ನೇಪಾಳ ಪುರುಷರ ತಂಡವನ್ನು ಮಣಿಸಿ ಪ್ರಶಸ್ತಿ ಗೆದ್ದುಕೊಂಡಿದೆ. ವಾಸ್ತವವಾಗಿ ಈ ಟೂರ್ನಿಯ ಮೊದಲ ಪಂದ್ಯವೂ ಈ ಎರಡು ತಂಡಗಳ ನಡುವೆ ನಡೆದಿತ್ತು. ಆಗಲೂ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು. ಇದೀಗ ನಡೆದ ಫೈನಲ್‌ನಲ್ಲಿಯೂ ಭಾರತ ತಂಡ ನೇಪಾಳವನ್ನು ಸೋಲಿಸಿ ಟ್ರೋಫಿಯನ್ನು ಗೆದ್ದುಕೊಂಡಿದೆ.