ಹಾರ್ದಿಕ್ ಮ್ಯಾಜಿಕ್: ನಿರ್ಣಾಯಕ ಪಂದ್ಯದಲ್ಲಿ ಮುಗ್ಗರಿಸಿದ ಕೆಕೆಆರ್
ಪ್ಲೇ ಆಫ್ಗೇರಲು ನಿರ್ಣಾಯಕವಾಗಿರುವ ಪಂದ್ಯದಲ್ಲಿ ಮುಂಬೈ ವಿರುದ್ಧ ಕೆಕೆಆರ್ ಟಾಸ್ ಸೋತು ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು. ಆರಂಭಿಕರಾಗಿ ಕಣಕ್ಕಿಳಿದ ಕ್ರಿಸ್ ಲಿನ್ ಹಾಗೂ ಶುಭ್ಮನ್ ಗಿಲ್ ಉತ್ತಮ ಆರಂಭ ಒದಗಿಸಿದ್ದರು. ಆದರೆ ಕಳೆದ ಪಂದ್ಯದಲ್ಲಿ ಮಿಂಚಿನ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದ ಗಿಲ್ ಈ ಬಾರಿ ಹೆಚ್ಚು ಹೊತ್ತು ನಿಲ್ಲಲಿಲ್ಲ. ಹಾರ್ದಿಕ್ ಪಾಂಡ್ಯ ಎಸೆತವನ್ನು ಗುರುತಿಸಲು ಎಡವಿದ ಗಿಲ್ (9) ಎಲ್ಬಿಡಬ್ಲ್ಯೂ ಆಗಿ ಹೊರ ನಡೆದರು. ಇದರ ಬೆನ್ನಲ್ಲೇ ಹಾರ್ದಿಕ್ ಎಸೆದ ಮ್ಯಾಜಿಕ್ ಬಾಲ್ಗೆ ಕೀಪರ್ಗೆ […]
ಪ್ಲೇ ಆಫ್ಗೇರಲು ನಿರ್ಣಾಯಕವಾಗಿರುವ ಪಂದ್ಯದಲ್ಲಿ ಮುಂಬೈ ವಿರುದ್ಧ ಕೆಕೆಆರ್ ಟಾಸ್ ಸೋತು ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು.
ಆರಂಭಿಕರಾಗಿ ಕಣಕ್ಕಿಳಿದ ಕ್ರಿಸ್ ಲಿನ್ ಹಾಗೂ ಶುಭ್ಮನ್ ಗಿಲ್ ಉತ್ತಮ ಆರಂಭ ಒದಗಿಸಿದ್ದರು. ಆದರೆ ಕಳೆದ ಪಂದ್ಯದಲ್ಲಿ ಮಿಂಚಿನ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದ ಗಿಲ್ ಈ ಬಾರಿ ಹೆಚ್ಚು ಹೊತ್ತು ನಿಲ್ಲಲಿಲ್ಲ. ಹಾರ್ದಿಕ್ ಪಾಂಡ್ಯ ಎಸೆತವನ್ನು ಗುರುತಿಸಲು ಎಡವಿದ ಗಿಲ್ (9) ಎಲ್ಬಿಡಬ್ಲ್ಯೂ ಆಗಿ ಹೊರ ನಡೆದರು.
ಇದರ ಬೆನ್ನಲ್ಲೇ ಹಾರ್ದಿಕ್ ಎಸೆದ ಮ್ಯಾಜಿಕ್ ಬಾಲ್ಗೆ ಕೀಪರ್ಗೆ ಕ್ಯಾಚಿತ್ತು ಕ್ರಿಸ್ ಲಿನ್ ವಿಕೆಟ್ ಒಪ್ಪಿಸಿದರು. 29 ಎಸೆತಗಳಲ್ಲಿ 2 ಬೌಂಡರಿ ಹಾಗೂ ನಾಲ್ಕು ಮನಮೋಹಕ ಸಿಕ್ಸರ್ ಸಿಡಿಸಿದ್ದ ಲಿನ್ ಆಟ 41 ರನ್ಗಳಿಗೆ ಸೀಮಿತವಾಯಿತು.
Published On - 6:11 pm, Thu, 25 April 19