KPL ಮೋಸದಾಟದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆಟಗಾರ ಅರೆಸ್ಟ್
ಬೆಂಗಳೂರು: ಕೆಪಿಎಲ್ನಲ್ಲಿ ಮ್ಯಾಚ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆಟಗಾರನನ್ನು ಬಂಧಿಸಿದ್ದಾರೆ. ಕ್ರಿಕೆಟ್ ಬುಕ್ಕಿಗಳ ಜೊತೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡದ ಬ್ಯಾಟ್ಸ್ಮನ್ ನಿಶಾಂತ್ ಶೇಖಾವತ್ನನ್ನು ಅರೆಸ್ಟ್ ಮಾಡಿದ್ದಾರೆ. ಈಗಾಗಲೇ ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲೀಕ ಅಶ್ಪಕ್ ಅಲಿ, ಬೆಂಗಳೂರು ಬ್ಲಾಸ್ಟರ್ಸ್ ತಂಡದ ಕೋಚ್ ವಿಶ್ವನಾಥ್, ಬೆಂಗಳೂರು ತಂಡದ ಆಟಗಾರ ವಿನುಪ್ರಸಾದ್ ಹಾಗೂ ಡ್ರಮ್ಮರ್ ಭವೇಶ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೀಗ ಬೆಂಗಳೂರು ಬ್ಲಾಸ್ಟರ್ಸ್ ತಂಡದ ನಿಶಾಂತ್ […]
ಬೆಂಗಳೂರು: ಕೆಪಿಎಲ್ನಲ್ಲಿ ಮ್ಯಾಚ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆಟಗಾರನನ್ನು ಬಂಧಿಸಿದ್ದಾರೆ.
ಕ್ರಿಕೆಟ್ ಬುಕ್ಕಿಗಳ ಜೊತೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡದ ಬ್ಯಾಟ್ಸ್ಮನ್ ನಿಶಾಂತ್ ಶೇಖಾವತ್ನನ್ನು ಅರೆಸ್ಟ್ ಮಾಡಿದ್ದಾರೆ. ಈಗಾಗಲೇ ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲೀಕ ಅಶ್ಪಕ್ ಅಲಿ, ಬೆಂಗಳೂರು ಬ್ಲಾಸ್ಟರ್ಸ್ ತಂಡದ ಕೋಚ್ ವಿಶ್ವನಾಥ್, ಬೆಂಗಳೂರು ತಂಡದ ಆಟಗಾರ ವಿನುಪ್ರಸಾದ್ ಹಾಗೂ ಡ್ರಮ್ಮರ್ ಭವೇಶ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೀಗ ಬೆಂಗಳೂರು ಬ್ಲಾಸ್ಟರ್ಸ್ ತಂಡದ ನಿಶಾಂತ್ ಶೇಕಾವತ್ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Published On - 8:22 pm, Tue, 5 November 19