KPL​ ಮೋಸದಾಟದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆಟಗಾರ ಅರೆಸ್ಟ್

ಬೆಂಗಳೂರು: ಕೆಪಿಎಲ್​ನಲ್ಲಿ ಮ್ಯಾಚ್​ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆಟಗಾರನನ್ನು ಬಂಧಿಸಿದ್ದಾರೆ. ಕ್ರಿಕೆಟ್ ಬುಕ್ಕಿಗಳ ಜೊತೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಬ್ಲಾಸ್ಟರ್ಸ್​ ತಂಡದ ಬ್ಯಾಟ್ಸ್​ಮನ್ ನಿಶಾಂತ್ ಶೇಖಾವತ್​ನನ್ನು ಅರೆಸ್ಟ್ ಮಾಡಿದ್ದಾರೆ. ಈಗಾಗಲೇ ಬೆಳಗಾವಿ ಪ್ಯಾಂಥರ್ಸ್​ ತಂಡದ ಮಾಲೀಕ ಅಶ್ಪಕ್ ಅಲಿ, ಬೆಂಗಳೂರು ಬ್ಲಾಸ್ಟರ್ಸ್ ತಂಡದ ಕೋಚ್ ವಿಶ್ವನಾಥ್​, ಬೆಂಗಳೂರು ತಂಡದ ಆಟಗಾರ ವಿನುಪ್ರಸಾದ್ ಹಾಗೂ ಡ್ರಮ್ಮರ್​ ಭವೇಶ್​ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೀಗ ಬೆಂಗಳೂರು ಬ್ಲಾಸ್ಟರ್ಸ್ ತಂಡದ ನಿಶಾಂತ್ […]

KPL​ ಮೋಸದಾಟದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆಟಗಾರ ಅರೆಸ್ಟ್
ಸಾಧು ಶ್ರೀನಾಥ್​

Updated on: Nov 06, 2019 | 10:39 AM

ಬೆಂಗಳೂರು: ಕೆಪಿಎಲ್​ನಲ್ಲಿ ಮ್ಯಾಚ್​ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆಟಗಾರನನ್ನು ಬಂಧಿಸಿದ್ದಾರೆ.

ಕ್ರಿಕೆಟ್ ಬುಕ್ಕಿಗಳ ಜೊತೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಬ್ಲಾಸ್ಟರ್ಸ್​ ತಂಡದ ಬ್ಯಾಟ್ಸ್​ಮನ್ ನಿಶಾಂತ್ ಶೇಖಾವತ್​ನನ್ನು ಅರೆಸ್ಟ್ ಮಾಡಿದ್ದಾರೆ. ಈಗಾಗಲೇ ಬೆಳಗಾವಿ ಪ್ಯಾಂಥರ್ಸ್​ ತಂಡದ ಮಾಲೀಕ ಅಶ್ಪಕ್ ಅಲಿ, ಬೆಂಗಳೂರು ಬ್ಲಾಸ್ಟರ್ಸ್ ತಂಡದ ಕೋಚ್ ವಿಶ್ವನಾಥ್​, ಬೆಂಗಳೂರು ತಂಡದ ಆಟಗಾರ ವಿನುಪ್ರಸಾದ್ ಹಾಗೂ ಡ್ರಮ್ಮರ್​ ಭವೇಶ್​ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೀಗ ಬೆಂಗಳೂರು ಬ್ಲಾಸ್ಟರ್ಸ್ ತಂಡದ ನಿಶಾಂತ್ ಶೇಕಾವತ್​ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Published On - 8:22 pm, Tue, 5 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us