AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPL ಮೋಸದಾಟ: ಮಾಜಿ ರಣಜಿ ಆಟಗಾರ CCB ವಶಕ್ಕೆ

ಬೆಂಗಳೂರು: ಕೆಪಿಎಲ್ ಕ್ರಿಕೆಟ್​ ಬೆಟ್ಟಿಂಗ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ ರಿಂಗ್ ಮಾಸ್ಟರ್ ಸುಧೀಂದ್ರ ಶಿಂಧೆನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದಿರಾ ನಗರದಲ್ಲಿರುವ ಮಾಜಿ ರಣಜಿ ಆಟಗಾರ ಸುಧೀಂದ್ರ ಶಿಂಧೆ ಅವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಶಿಂಧೆ, ಹಾಲಿ ಕೆಎಸ್​ಸಿಎ ಆಡಳಿತ ಮಂಡಳಿ ಸದಸ್ಯ ಹಾಗೂ ಅಂಡರ್ 19 ತಂಡದ ಕೋಚ್ ಮತ್ತು ಬೆಳಗಾವಿ ಪ್ಯಾಂಥರ್ಸ್​ ಕೋಚ್ ಸಹ ಆಗಿದ್ದರು. ಕೆಪಿಎಲ್ ಟೂರ್ನಿಗೆ ಆಟಗಾರರ ಆಯ್ಕೆಯಲ್ಲೂ ಹಣ ಪಡೆದಿದ್ದಾರೆಂದು […]

KPL ಮೋಸದಾಟ: ಮಾಜಿ ರಣಜಿ ಆಟಗಾರ CCB ವಶಕ್ಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 04, 2019 | 10:34 AM

Share

ಬೆಂಗಳೂರು: ಕೆಪಿಎಲ್ ಕ್ರಿಕೆಟ್​ ಬೆಟ್ಟಿಂಗ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ ರಿಂಗ್ ಮಾಸ್ಟರ್ ಸುಧೀಂದ್ರ ಶಿಂಧೆನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದಿರಾ ನಗರದಲ್ಲಿರುವ ಮಾಜಿ ರಣಜಿ ಆಟಗಾರ ಸುಧೀಂದ್ರ ಶಿಂಧೆ ಅವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಶಿಂಧೆ, ಹಾಲಿ ಕೆಎಸ್​ಸಿಎ ಆಡಳಿತ ಮಂಡಳಿ ಸದಸ್ಯ ಹಾಗೂ ಅಂಡರ್ 19 ತಂಡದ ಕೋಚ್ ಮತ್ತು ಬೆಳಗಾವಿ ಪ್ಯಾಂಥರ್ಸ್​ ಕೋಚ್ ಸಹ ಆಗಿದ್ದರು. ಕೆಪಿಎಲ್ ಟೂರ್ನಿಗೆ ಆಟಗಾರರ ಆಯ್ಕೆಯಲ್ಲೂ ಹಣ ಪಡೆದಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ.

ಹಣ ನೀಡಿದವರನ್ನ ಮಾತ್ರ ಆಯ್ಕೆ ಮಾಡ್ತಿದ್ದ: ಆಟಗಾರರು ಗ್ರೌಂಡ್​ಗೆ ಇಳಿಯಬೇಕೆಂದ್ರೆ ಶಿಂಧೆಗೆ ಹಣ ನೀಡಬೇಕಿತ್ತು. ಹಣ ನೀಡಿದವರನ್ನಷ್ಟೇ ಸುಧೀಂದ್ರ ಶಿಂಧೆ ಆಯ್ಕೆ ಮಾಡ್ತಿದ್ದ. ಕೆಎಸ್​ಸಿಎ ಮಾನ್ಯತೆ ಪಡೆದ ಕ್ಲಬ್​ಗಳ ಮಾರಾಟದಲ್ಲಿ ದೊಡ್ಡ ದಂಧೆ ಇದೆ ಎನ್ನಲಾಗಿದೆ. ಬೇರೆ ಬೇರೆ ತಂಡದ ಆಟಗಾರರನ್ನ ಸಂಪರ್ಕ ಮಾಡಿ ಮ್ಯಾಚ್ ಫಿಕ್ಸಿಂಗ್ ಮಾಡ್ತಿದ್ದ. ಆಟಗಾರರಿಗೆ ದುಡ್ಡು, ಪಾರ್ಟಿ, ಸ್ಟೇಯಿಂಗ್ ಸೇರಿದಂತೆ ಸಕಲ ವ್ಯವಸ್ಥೆ ಮಾಡ್ತಿದ್ದ ಎಂಬ ಆರೋಪಗಳು ಕೇಳಿಬಂದಿವೆ.

Published On - 3:14 pm, Mon, 2 December 19

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್