KPL ಮೋಸದಾಟ: ಮಾಜಿ ರಣಜಿ ಆಟಗಾರ CCB ವಶಕ್ಕೆ

ಬೆಂಗಳೂರು: ಕೆಪಿಎಲ್ ಕ್ರಿಕೆಟ್​ ಬೆಟ್ಟಿಂಗ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ ರಿಂಗ್ ಮಾಸ್ಟರ್ ಸುಧೀಂದ್ರ ಶಿಂಧೆನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದಿರಾ ನಗರದಲ್ಲಿರುವ ಮಾಜಿ ರಣಜಿ ಆಟಗಾರ ಸುಧೀಂದ್ರ ಶಿಂಧೆ ಅವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಶಿಂಧೆ, ಹಾಲಿ ಕೆಎಸ್​ಸಿಎ ಆಡಳಿತ ಮಂಡಳಿ ಸದಸ್ಯ ಹಾಗೂ ಅಂಡರ್ 19 ತಂಡದ ಕೋಚ್ ಮತ್ತು ಬೆಳಗಾವಿ ಪ್ಯಾಂಥರ್ಸ್​ ಕೋಚ್ ಸಹ ಆಗಿದ್ದರು. ಕೆಪಿಎಲ್ ಟೂರ್ನಿಗೆ ಆಟಗಾರರ ಆಯ್ಕೆಯಲ್ಲೂ ಹಣ ಪಡೆದಿದ್ದಾರೆಂದು […]

KPL ಮೋಸದಾಟ: ಮಾಜಿ ರಣಜಿ ಆಟಗಾರ CCB ವಶಕ್ಕೆ
ಸಾಧು ಶ್ರೀನಾಥ್​

Updated on: Dec 04, 2019 | 10:34 AM

ಬೆಂಗಳೂರು: ಕೆಪಿಎಲ್ ಕ್ರಿಕೆಟ್​ ಬೆಟ್ಟಿಂಗ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ ರಿಂಗ್ ಮಾಸ್ಟರ್ ಸುಧೀಂದ್ರ ಶಿಂಧೆನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದಿರಾ ನಗರದಲ್ಲಿರುವ ಮಾಜಿ ರಣಜಿ ಆಟಗಾರ ಸುಧೀಂದ್ರ ಶಿಂಧೆ ಅವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಶಿಂಧೆ, ಹಾಲಿ ಕೆಎಸ್​ಸಿಎ ಆಡಳಿತ ಮಂಡಳಿ ಸದಸ್ಯ ಹಾಗೂ ಅಂಡರ್ 19 ತಂಡದ ಕೋಚ್ ಮತ್ತು ಬೆಳಗಾವಿ ಪ್ಯಾಂಥರ್ಸ್​ ಕೋಚ್ ಸಹ ಆಗಿದ್ದರು. ಕೆಪಿಎಲ್ ಟೂರ್ನಿಗೆ ಆಟಗಾರರ ಆಯ್ಕೆಯಲ್ಲೂ ಹಣ ಪಡೆದಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ.

ಹಣ ನೀಡಿದವರನ್ನ ಮಾತ್ರ ಆಯ್ಕೆ ಮಾಡ್ತಿದ್ದ:
ಆಟಗಾರರು ಗ್ರೌಂಡ್​ಗೆ ಇಳಿಯಬೇಕೆಂದ್ರೆ ಶಿಂಧೆಗೆ ಹಣ ನೀಡಬೇಕಿತ್ತು. ಹಣ ನೀಡಿದವರನ್ನಷ್ಟೇ ಸುಧೀಂದ್ರ ಶಿಂಧೆ ಆಯ್ಕೆ ಮಾಡ್ತಿದ್ದ. ಕೆಎಸ್​ಸಿಎ ಮಾನ್ಯತೆ ಪಡೆದ ಕ್ಲಬ್​ಗಳ ಮಾರಾಟದಲ್ಲಿ ದೊಡ್ಡ ದಂಧೆ ಇದೆ ಎನ್ನಲಾಗಿದೆ. ಬೇರೆ ಬೇರೆ ತಂಡದ ಆಟಗಾರರನ್ನ ಸಂಪರ್ಕ ಮಾಡಿ ಮ್ಯಾಚ್ ಫಿಕ್ಸಿಂಗ್ ಮಾಡ್ತಿದ್ದ. ಆಟಗಾರರಿಗೆ ದುಡ್ಡು, ಪಾರ್ಟಿ, ಸ್ಟೇಯಿಂಗ್ ಸೇರಿದಂತೆ ಸಕಲ ವ್ಯವಸ್ಥೆ ಮಾಡ್ತಿದ್ದ ಎಂಬ ಆರೋಪಗಳು ಕೇಳಿಬಂದಿವೆ.

Published On - 3:14 pm, Mon, 2 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us