Lionel Messi: ವಿಶ್ವಕಪ್ ಫೈನಲ್ ನನ್ನ ಕೊನೆಯ ಪಂದ್ಯ..! ನಿವೃತ್ತಿಗೆ ಮುಂದಾದ ಲಿಯೋನೆಲ್ ಮೆಸ್ಸಿ

Lionel Messi Retirement: ಫಿಫಾ ವಿಶ್ವಕಪ್​ನಲ್ಲಿ ತನ್ನ ಮಾಂತ್ರಿಕ ಪ್ರದರ್ಶನದಿಂದ ಅರ್ಜೆಂಟೀನಾ ತಂಡವನ್ನು ಫೈನಲ್​ಗೆ ಕರೆದೊಯ್ದಿರುವ ಫುಟ್ಬಾಲ್ ದೈತ್ಯ ಲಿಯೋನೆಲ್ ಮೆಸ್ಸಿ ಭಾನುವಾರ ತನ್ನ ಕೊನೆಯ ವಿಶ್ವಕಪ್ ಪಂದ್ಯವನ್ನು ಆಡುವುದಾಗಿ ಹೇಳಿಕೊಂಡಿದ್ದಾರೆ.

Lionel Messi: ವಿಶ್ವಕಪ್ ಫೈನಲ್ ನನ್ನ ಕೊನೆಯ ಪಂದ್ಯ..! ನಿವೃತ್ತಿಗೆ ಮುಂದಾದ ಲಿಯೋನೆಲ್ ಮೆಸ್ಸಿ
Lionel Messi
Follow us
TV9 Web
| Updated By: ಪೃಥ್ವಿಶಂಕರ

Updated on:Dec 14, 2022 | 12:12 PM

ಫಿಫಾ ವಿಶ್ವಕಪ್​ನಲ್ಲಿ (FIFA World Cup 2023) ತನ್ನ ಮಾಂತ್ರಿಕ ಪ್ರದರ್ಶನದಿಂದ ಅರ್ಜೆಂಟೀನಾ ತಂಡವನ್ನು ಫೈನಲ್​ಗೆ ಕರೆದೊಯ್ದಿರುವ ಫುಟ್ಬಾಲ್ ದೈತ್ಯ ಲಿಯೋನೆಲ್ ಮೆಸ್ಸಿ (Lionel Messi) ಭಾನುವಾರ ತನ್ನ ಕೊನೆಯ ವಿಶ್ವಕಪ್ ಪಂದ್ಯವನ್ನು ಆಡುವುದಾಗಿ ಹೇಳಿಕೊಂಡಿದ್ದಾರೆ. ಅರ್ಜೆಂಟೀನಾ (Argentina) ಪರ ಅದ್ಭುತ ಆಟ ಪ್ರದರ್ಶಿಸುವ ಮೂಲಕ ಇದುವರೆಗೆ ಐದು ಗೋಲುಗಳನ್ನು ಗಳಿಸಿರುವ ಮೆಸ್ಸಿ ಇದರೊಂದಿಗೆ ಗೋಲ್ಡನ್ ಪ್ರಶಸ್ತಿ ರೇಸ್​ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ. ಸೆಮಿಫೈನಲ್‌ನಲ್ಲಿ ಕ್ರೊವೇಷಿಯಾದಂತಹ ಬಲಿಷ್ಠ ತಂಡವನ್ನು 3-0 ಗೋಲುಗಳಿಂದ ಸೋಲಿಸುವುದರೊಂದಿಗೆ ಅರ್ಜೆಂಟೀನಾ ಫೈನಲ್ ಪ್ರವೇಶಿಸಿದೆ. ಈ ಪಂದ್ಯದಲ್ಲೂ ತಂಡದ ಪರ ಒಂದು ಗೋಲು ಬಾರಿಸುವಲ್ಲಿ ಮೆಸ್ಸಿ ಯಶಸ್ವಿಯಾದರು.

ಅರ್ಜೆಂಟೀನಾದ ಮಾಧ್ಯಮ ವರದಿಗಳ ಪ್ರಕಾರ, ಡಿಸೆಂಬರ್ 18 ರಂದು ನಡೆಯಲಿರುವ ವಿಶ್ವಕಪ್ ಫೈನಲ್ ಮೆಸ್ಸಿಯ ಕೊನೆಯ ಅಂತರರಾಷ್ಟ್ರೀಯ ಪಂದ್ಯವಾಗಿದೆ. ಸುದ್ದಿ ಪ್ರಕಾರ 35ರ ಹರೆಯದ ಮೆಸ್ಸಿ ಫೈನಲ್ ಬಳಿಕ ಅರ್ಜೆಂಟೀನಾ ತಂಡಕ್ಕೆ ವಿದಾಯ ಹೇಳಲಿದ್ದಾರೆ ಎಂದು ವರದಿಯಾಗಿದೆ.

ವಿಶ್ವಕಪ್ ಫೈನಲ್ ಬಳಿಕ ಮೆಸ್ಸಿ ನಿವೃತ್ತಿ

ಮಾಧ್ಯಮ ವರದಿಗಳ ಪ್ರಕಾರ, ಅರ್ಜೆಂಟೀನಾದ ಮಾಧ್ಯಮ ಸಂಸ್ಥೆ ಡಿಯಾರಿಯೊ ಡಿಪೋರ್ಟಿವೊ ಓಲೆ ಜೊತೆಗಿನ ಸಂವಾದದಲ್ಲಿ ಈ ಬಗ್ಗೆ ಮಾತನಾಡಿರುವ ಮೆಸ್ಸಿ, ನನ್ನ ಕೊನೆಯ ಪಂದ್ಯವನ್ನು ಫೈನಲ್‌ನಲ್ಲಿ ಆಡುವ ಮೂಲಕ ನನ್ನ ವಿಶ್ವಕಪ್ ಪ್ರಯಾಣವನ್ನು ಕೊನೆಗೊಳಿಸುತ್ತೇನೆ. ಈ ಸಾಧನೆ ನನಗೆ ಅತ್ಯಂತ ಖುಷಿ ನೀಡಿದೆ. ಅರ್ಜೆಂಟೀನಾ ಮತ್ತೊಮ್ಮೆ ವಿಶ್ವಕಪ್ ಫೈನಲ್ ತಲುಪಿದೆ. ಸತತ ಪ್ರಯತ್ನಗಳ ನಂತರ ಪ್ರಶಸ್ತಿ ತಮ್ಮದಾಗಿಸಿಕೊಳ್ಳಲು ನಾವು ಇನ್ನೊಂದು ಹೆಜ್ಜೆ ಹಿಂದಿದ್ದೇವೆ. ಈ ಪ್ರಶಸ್ತಿ ಗೆಲ್ಲಲು ನಾವು ಎಲ್ಲಾ ಪ್ರಯತ್ನ ಮಾಡಲಿದ್ದೇವೆ ಎಂದು ಮೆಸ್ಸಿ ಹೇಳಿಕೊಂಡಿದ್ದಾರೆ.

FIFA World Cup 2022: ಮೆಸ್ಸಿ ಮ್ಯಾಜಿಕ್​ಗೆ ಮಂಡಿಯೂರಿದ ಕ್ರೊಯೇಷಿಯಾ; 6ನೇ ಬಾರಿಗೆ ಫೈನಲ್​ಗೇರಿದ ಅರ್ಜೆಂಟೀನಾ!

ಅದ್ಭುತ ಅಂತಾರಾಷ್ಟ್ರೀಯ ದಾಖಲೆ

2005ರಲ್ಲಿ ಅರ್ಜೆಂಟೀನಾ ಪರ ರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡಿದ್ದ ಮೆಸ್ಸಿ, ಕಳೆದ 17 ವರ್ಷಗಳಲ್ಲಿ ಸಾಟಿಯಿಲ್ಲದ ಪ್ರದರ್ಶನ ನೀಡಿದ್ದಾರೆ. ಈ ಅನುಭವಿ ಆಟಗಾರ ಅರ್ಜೆಂಟೀನಾ ಪರ ಇದುವರೆಗೆ 96 ಗೋಲು ಗಳಿಸಿದ್ದಾರೆ. ವಿಶ್ವಕಪ್‌ನಲ್ಲಿ ಮೆಸ್ಸಿಯ ಸಾಧನೆಗೆ ಸಾಟಿಯೇ ಇಲ್ಲ. ಮೆಸ್ಸಿ 25 ವಿಶ್ವಕಪ್ ಪಂದ್ಯಗಳಲ್ಲಿ 19 ಗೋಲು/ಅಸಿಸ್ಟ್ ಗಳಿಸಿದ್ದಾರೆ. ಅಲ್ಲದೆ 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ದಾರೆ. ವಿಶ್ವಕಪ್‌ನಲ್ಲಿ ಮೆಸ್ಸಿ, ಅರ್ಜೆಂಟೀನಾ ಪರ ಒಟ್ಟು 11 ಗೋಲುಗಳನ್ನು ಗಳಿಸಿದ್ದು, ಈ ದೇಶದ ಪರ ಅತಿ ಹೆಚ್ಚು ಗೋಲುಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಅರ್ಜೆಂಟೀನಾ ಪರ ತಮ್ಮ ಕೊನೆಯ ಪಂದ್ಯವನ್ನು ಗೆದ್ದು ತಂಡವನ್ನು ವಿಶ್ವ ಚಾಂಪಿಯನ್ ಮಾಡಲು ಮೆಸ್ಸಿ ಭಾನುವಾರ ಕಣಕ್ಕಿಳಿಯಲಿದ್ದಾರೆ. ಅರ್ಜೆಂಟೀನಾ ಕೊನೆಯ ಬಾರಿಗೆ 1986 ರಲ್ಲಿ ವಿಶ್ವಕಪ್ ಗೆದ್ದುಕೊಂಡಿತು. ಈಗ 36 ವರ್ಷಗಳ ಪ್ರಶಸ್ತಿ ಬರಗಾಲ ಮೆಸ್ಸಿಯ ಕೊನೆಯ ಪಂದ್ಯದಲ್ಲಿ ಕೊನೆಗೊಳ್ಳಲ್ಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:03 pm, Wed, 14 December 22

ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ