AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತಿಹಾಸ ಸೃಷ್ಟಿಸಿದ ಮನಿಷಾ ಭಾನ್ವಾಲಾ; ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಪಡೆದ ಭಾರತದ ಮೊದಲ ಮಹಿಳಾ ಕುಸ್ತಿಪಟು!

ಭಾರತೀಯ ಕ್ರೀಡಾ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ದಾಖಲಾಗಿದೆ. ಭಾರತದ ಕುಸ್ತಿಪಟು ಮನಿಷಾ ಭಾನ್ವಾಲಾ ಇಂದು ನಡೆದ ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಮಹಿಳಾ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಿಶ್ವ ಮಟ್ಟದಲ್ಲಿ ಭಾರತದ ಧ್ವಜವನ್ನು ಎತ್ತಿಹಿಡಿದಿರುವ ಮನಿಷಾ, ದೇಶದ ಕ್ರೀಡಾಕ್ಷೇತ್ರದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಈ ಹಿಂದೆ ಭಾರತದ ಹಲವು ಪ್ರಮುಖ ಮಹಿಳಾ ಕುಸ್ತಿಪಟುಗಳು ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಗೆದ್ದಿದ್ದರೂ, ಚಿನ್ನದ ಪದಕವನ್ನು ಗೆದ್ದು ಇತಿಹಾಸ ನಿರ್ಮಿಸಿದ ಶ್ರೇಯಸ್ಸು ಮನಿಷಾ ಭಾನ್ವಾಲಾ ಅವರಿಗೆ ಸಲ್ಲುತ್ತದೆ.

ಇತಿಹಾಸ ಸೃಷ್ಟಿಸಿದ ಮನಿಷಾ ಭಾನ್ವಾಲಾ; ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಪಡೆದ ಭಾರತದ ಮೊದಲ ಮಹಿಳಾ ಕುಸ್ತಿಪಟು!
ಮನಿಷಾ ಭಾನ್ವಾಲಾ
ಸುಷ್ಮಾ ಚಕ್ರೆ
|

Updated on:Oct 30, 2026 | 8:59 PM

Share

ಮುಖ್ಯಾಂಶಗಳು

  • ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಸ್ವರ್ಣ ಪದಕ ಗೆದ್ದ ಮೊದಲ ಮಹಿಳಾ ಕುಸ್ತಿಪಟು ಮನಿಷಾ ಭಾನ್ವಾಲಾ
  • ಮಹಿಳೆಯರ 59 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ ಅಮೆರಿಕದ ಎಲಿಜಬೆತ್ ನೆಟ್ಟೆ ಅವರನ್ನು 8-6 ಅಂತರದಿಂದ ಸೋಲಿಸಿದ ಮನಿಷಾ
  • ಏಷ್ಯನ್ ಗೇಮ್ಸ್‌ನಲ್ಲಿ ಎದುರಾಗಿದ್ದ ಹಿನ್ನಡೆಯನ್ನು ಮರೆತು ಕಂಬ್ಯಾಕ್ ಮಾಡಿದ ಮನಿಷಾ ಭಾನ್ವಾಲಾ

ನವದೆಹಲಿ, ಅಕ್ಟೋಬರ್ 30: ಭಾರತದ ಕ್ರೀಡಾಲೋಕಕ್ಕೆ ಇಂದು ಹೆಮ್ಮೆಯ ಕ್ಷಣ. ಏಕೆಂದರೆ, ಕಜಕಸ್ತಾನ್‌ನ ಅಸ್ತಾನಾದಲ್ಲಿ ನಡೆಯುತ್ತಿರುವ ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಭಾರತದ 29 ವರ್ಷದ ಕುಸ್ತಿಪಟು ಮನಿಷಾ ಭಾನ್ವಾಲಾ ಚಿನ್ನದ ಪದಕ ಪಡೆಯುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇಂದು ನಡೆದ ಮಹಿಳೆಯರ 59 ಕೆಜಿ ವಿಭಾಗದ ರೋಚಕ ಫೈನಲ್ ಪಂದ್ಯದಲ್ಲಿ ಅಮೆರಿಕದ ಎಲಿಜಬೆತ್ ನೆಟ್ಟೆ ಅವರನ್ನು 8-6 ಅಂತರದಿಂದ ಸೋಲಿಸುವ ಮೂಲಕ ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಮನಿಷಾ ಭಾನ್ವಾಲಾ ಪಾತ್ರರಾಗಿದ್ದಾರೆ.

59 ಕೆಜಿ ವಿಭಾಗವು ಒಲಿಂಪಿಕ್​ಯೇತರ ವಿಭಾಗವಾಗಿದ್ದರೂ, ಭಾರತದ ಯಾವುದೇ ಮಹಿಳಾ ಕುಸ್ತಿಪಟು ಇದುವರೆಗೆ ವಿಶ್ವ ಚಾಂಪಿಯನ್ ಪಟ್ಟಕ್ಕೇರದ ಕಾರಣ ಈ ಗೆಲುವು ಭಾರತದ ಕ್ರೀಡಾ ಇತಿಹಾಸದಲ್ಲೇ ಅತ್ಯಂತ ಪ್ರಮುಖ ಮೈಲಿಗಲ್ಲಾಗಿದೆ.

ಏಷ್ಯನ್ ಗೇಮ್ಸ್‌ನಲ್ಲಿ ಎದುರಾಗಿದ್ದ ಹಿನ್ನಡೆಯನ್ನು ಮರೆತು ಮನಿಷಾ ಭಾನ್ವಾಲಾ ಈ ಬಾರಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ದೇಶದ ಹಿರಿಮೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ. ಏಷ್ಯನ್ ಗೇಮ್ಸ್‌ನಲ್ಲಿ 57 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ಮನಿಷಾ ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ಅಕಾರಿ ಫ್ಯೂಜಿನಾಮಿ ವಿರುದ್ಧ ಸೋತಿದ್ದರು. ಆದರೆ, ವಿಶ್ವ ಚಾಂಪಿಯನ್‌ಷಿಪ್‌ಗಾಗಿ 59 ಕೆಜಿ ವಿಭಾಗಕ್ಕೆ ಬದಲಾದ ಅವರ ನಿರ್ಧಾರ ಅವರನ್ನು ಚಿನ್ನದ ಪದಕದತ್ತ ಕೊಂಡೊಯ್ದಿತು.

ಇದನ್ನೂ ಓದಿ: ಪ್ರಸಿದ್ಧ್ ಕೃಷ್ಣ ಬದಲಿಗೆ ಸಿರಾಜ್‌ಗೆ ಹೆಚ್ಚಿನ ಜವಾಬ್ದಾರಿ; ಬಿಸಿಸಿಐ ಮಹತ್ವದ ಅಪ್‌ಡೇಟ್

ಫೈನಲ್‌ಗೆ ತಲುಪುವ ಮುನ್ನ ಮನಿಷಾ ಕೆನಡಾದ ಲಾರೆನ್ಸ್ ಬೊರೆಗಾರ್ಡ್, ಮಂಗೋಲಿಯಾದ ಬೊಲೊರ್ತುಯಾ ಖುರೆಲ್ಖೂ ಮತ್ತು ಕಜಕಸ್ತಾನ್‌ನ ಅಲ್ಟಿನ್ ಶಾಗಾಯೇವಾ ಅವರನ್ನು ಸೋಲಿಸಿದ್ದರು.

ಅಮೆರಿಕದ ಪ್ಯಾನ್ ಅಮೆರಿಕನ್ ಚಾಂಪಿಯನ್ ಎಲಿಜಬೆತ್ ನೆಟ್ಟೆ ವಿರುದ್ಧದ ಫೈನಲ್‌ನ ಮೊದಲಾರ್ಧದಲ್ಲಿ ಮನಿಷಾ 1-5ರಿಂದ ಹಿನ್ನಡೆಯಲ್ಲಿದ್ದರು. ಆದರೆ, ದ್ವಿತೀಯಾರ್ಧದಲ್ಲಿ 8-6 ಅಂತರದಿಂದ ಜಯಭೇರಿ ಬಾರಿಸಿದರು.

ಅಭಿನಂದನೆಗಳ ಮಹಾಪೂರ:

ಭಾರತೀಯ ಕುಸ್ತಿ ಫೆಡರೇಶನ್, ಕ್ರೀಡಾ ಸಚಿವಾಲಯ ಹಾಗೂ ಪ್ರಮುಖ ಕ್ರೀಡಾಪಟುಗಳು ಮನಿಷಾ ಅವರ ಈ ಅಭೂತಪೂರ್ವ ಸಾಧನೆಗೆ ದೇಶದಾದ್ಯಂತ ತೀವ್ರ ಮೆಚ್ಚುಗೆ ವ್ಯಕ್ತಪಡಿಸಿದ್ದು, ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಐತಿಹಾಸಿಕ ಗೆಲುವು ಭಾರತೀಯ ಮಹಿಳಾ ಕುಸ್ತಿಯ ಹೊಸ ಯುಗಕ್ಕೆ ನಾಂದಿ ಹಾಡಿದ್ದು, ಮುಂಬರುವ ಒಲಿಂಪಿಕ್ಸ್ ಹಾಗೂ ಪ್ರಮುಖ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತಕ್ಕೆ ಮತ್ತಷ್ಟು ಪದಕಗಳ ಭರವಸೆಯನ್ನು ಮೂಡಿಸಿದೆ.

ಇದನ್ನೂ ಓದಿ: WPLನಲ್ಲಿ ಹೊಸ ಇತಿಹಾಸ: ಯಾರು ಈ ಉಮಾ ಕಾಶ್ವಿ?

ಅಂದಹಾಗೆ, ಈ ಬಾರಿಯ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಅನೇಕ ಮಹಿಳಾ ಪಟುಗಳು ಅಭೂತಪೂರ್ವ ಪ್ರದರ್ಶನ ನೀಡಿದ್ದಾರೆ.  ನೀಲಮ್ ಸಿರೋಹಿ (50 ಕೆಜಿ) ಮತ್ತು ಕಾಜಲ್ ಧೋಚಕ್ (76 ಕೆಜಿ) ಫೈನಲ್ ತಲುಪಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಹಿಂದೆ 2021ರಲ್ಲಿ ಅಂಶು ಮಲಿಕ್ (57 ಕೆಜಿ) ಫೈನಲ್ ತಲುಪಿ ಬೆಳ್ಳಿ ಗೆದ್ದಿದ್ದರು. ವಿನೇಶ್ ಫೋಗಟ್ ಹಾಗೂ ಅಂತಿಮ್ ಪಂಗಲ್ ತಲಾ ಎರಡು ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದರು.

ಮನಿಷಾ ಭಾನ್ವಾಲಾ ಹಿನ್ನೆಲೆ:

ಹರ್ಯಾಣದ ಜಿಂದ್ ಜಿಲ್ಲೆಯವರಾದ 29 ವರ್ಷದ ಮನಿಷಾ, ತಮ್ಮ ವೃತ್ತಿಜೀವನದಲ್ಲಿ 57 ಕೆಜಿಯಿಂದ 65 ಕೆಜಿವರೆಗಿನ ವಿವಿಧ ವಿಭಾಗಗಳಲ್ಲಿ ಹಾಗೂ 3 ವಿಶ್ವ ಚಾಂಪಿಯನ್‌ಷಿಪ್‌ಗಳಲ್ಲಿ ಸ್ಪರ್ಧಿಸಿದ ಅನುಭವವನ್ನು ಬಳಸಿಕೊಂಡು ಕ್ರೀಡಾ ಜೀವನದ ಬೃಹತ್ ಯಶಸ್ಸನ್ನು ದೇಶಕ್ಕೆ ತಂದುಕೊಟ್ಟಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:38 pm, Fri, 30 October 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಯಾರು
ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಯಾರು
ದೇವೇಗೌಡರ ಭೇಟಿಯಾದ ಯಡಿಯೂರಪ್ಪ: ಕುತೂಹಲ ಮೂಡಿಸಿದ ಮಾಜಿ CM ನಡೆ
ದೇವೇಗೌಡರ ಭೇಟಿಯಾದ ಯಡಿಯೂರಪ್ಪ: ಕುತೂಹಲ ಮೂಡಿಸಿದ ಮಾಜಿ CM ನಡೆ
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ?
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ?
‘ಪ್ರೇಮದ ಊರಲಿ ಪಾರ್ಟ್ 2’ ಬರುತ್ತ? ನೇರವಾಗಿ ಉತ್ತರ ನೀಡಿದ ನಿರ್ದೇಶಕ ಮನೋಜ್
‘ಪ್ರೇಮದ ಊರಲಿ ಪಾರ್ಟ್ 2’ ಬರುತ್ತ? ನೇರವಾಗಿ ಉತ್ತರ ನೀಡಿದ ನಿರ್ದೇಶಕ ಮನೋಜ್
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಶೋಕ್​​ ಸವಾಲು
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಶೋಕ್​​ ಸವಾಲು
‘ಕೆಲಸ ಮಾಡಲ್ಲ ಅಂದ್ರೆ ಮಾಡಲ್ಲ’: ಸೌಂದರ್ಯಾ ಜೊತೆ ಗಗನ್ ಜಗಳ
‘ಕೆಲಸ ಮಾಡಲ್ಲ ಅಂದ್ರೆ ಮಾಡಲ್ಲ’: ಸೌಂದರ್ಯಾ ಜೊತೆ ಗಗನ್ ಜಗಳ
ಬಿಗ್ ಬಾಸ್ ಮನೆಯಲ್ಲಿ ಸೋನಿಕಾ, ತಾಂಡವ್, ಗಗನ್ ಮದುವೆ ಮಾತುಕತೆ
ಬಿಗ್ ಬಾಸ್ ಮನೆಯಲ್ಲಿ ಸೋನಿಕಾ, ತಾಂಡವ್, ಗಗನ್ ಮದುವೆ ಮಾತುಕತೆ
ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರ: ಪೊಲೀಸರ ಜೊತೆಗೆ ಫೀಲ್ಡಿಗಿಳಿದ ಸಚಿವ
ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರ: ಪೊಲೀಸರ ಜೊತೆಗೆ ಫೀಲ್ಡಿಗಿಳಿದ ಸಚಿವ
​​ಸ್ಟಿಂಗ್ ಆಪರೇಷನ್​ ಕೇಸಿಗೆ ಸ್ಫೋಟಕ ತಿರುವು:ಕುತೂಹಲ ಮೂಡಿಸಿದ ಸಿಸಿಬಿ ನಡೆ
​​ಸ್ಟಿಂಗ್ ಆಪರೇಷನ್​ ಕೇಸಿಗೆ ಸ್ಫೋಟಕ ತಿರುವು:ಕುತೂಹಲ ಮೂಡಿಸಿದ ಸಿಸಿಬಿ ನಡೆ
ಸಿಎಂಗೆ ಮಹತ್ವದ ಮನವಿ ಮಾಡಿಕೊಂಡ ತನ್ವೀರ್ ಸೇಠ್
ಸಿಎಂಗೆ ಮಹತ್ವದ ಮನವಿ ಮಾಡಿಕೊಂಡ ತನ್ವೀರ್ ಸೇಠ್