Khel Ratna award: ಮನು ಭಾಕರ್, ಡಿ ಗುಕೇಶ್ ಸೇರಿದಂತೆ ನಾಲ್ವರು ಕ್ರೀಡಾ ಸಾಧಕರಿಗೆ ಖೇಲ್ ರತ್ನ ಪ್ರಶಸ್ತಿ

ಒಲಿಂಪಿಕ್ಸ್‌ ಪದಕ ವಿಜೇತೆ ಮಹಿಳಾ ಶೂಟರ್ ಮನು ಭಾಕರ್ ಅವರಿಗೆ ಸರ್ಕಾರ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಇವರಲ್ಲದೆ ಚೆಸ್ ಚಾಂಪಿಯನ್‌ ಗುಕೇಶ್, ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಕೂಡ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Khel Ratna award: ಮನು ಭಾಕರ್, ಡಿ ಗುಕೇಶ್ ಸೇರಿದಂತೆ ನಾಲ್ವರು ಕ್ರೀಡಾ ಸಾಧಕರಿಗೆ ಖೇಲ್ ರತ್ನ ಪ್ರಶಸ್ತಿ
ಮನು ಬಾಕರ್, ಡಿ ಗುಕೇಶ್
Follow us
ಪೃಥ್ವಿಶಂಕರ
|

Updated on:Jan 02, 2025 | 3:15 PM

ಕಳೆದ ವರ್ಷ ನಡೆದಿದ್ದ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ದೇಶಕ್ಕಾಗಿ ಎರಡು ಕಂಚಿನ ಪದಕಗಳನ್ನು ಗೆದ್ದುಕೊಟ್ಟಿದ್ದ ಮಹಿಳಾ ಶೂಟರ್ ಮನು ಭಾಕರ್ ಅವರನ್ನು ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇವರೊಂದಿಗೆ ವಿಶ್ವ ಚೆಸ್ ಚಾಂಪಿಯನ್​ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದ 18 ವರ್ಷದ ಚೆಸ್ ಚತುರ ಡಿ ಗುಕೇಶ್ ಹಾಗೂ ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಕೂಡ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜನವರಿ 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ವಿಶೇಷವಾಗಿ ಆಯೋಜಿಸಲಾಗುವ ಸಮಾರಂಭದಲ್ಲಿ ಈ ನಾಲ್ವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

ಆರಂಭದಲ್ಲಿ ವಿವಾದ

ವಾಸ್ತವವಾಗಿ, ಆರಂಭದಲ್ಲಿ ಖೇಲ್ ರತ್ನ ಪ್ರಶಸ್ತಿಗೆ ಮನು ಭಾಕರ್ ಅವರ ಹೆಸರನ್ನು ಪರಿಗಣಿಸಿಲ್ಲ ಎಂಬ ಸುದ್ದಿ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಇದರಿಂದಾಗಿ ತೀರ ಅಸಮಾಧಾನಗೊಂಡಿದ್ದ ಮನು ಭಾಕರ್ ಅವರ ತಂದೆ ಯಾರೂ ಕೂಡ ನಿಮ್ಮ ಮಕ್ಕಳನ್ನು ಕ್ರೀಡೆಗೆ ಪ್ರೋತ್ಸಾಹಿಸಬೇಡಿ, ನಾವು ಅರ್ಜಿ ಸಲ್ಲಿಸಿದ್ದರೂ ಅದನ್ನು ಕಡೆಗಣಿಸಲಾಗಿದೆ ಎಂದಿದ್ದರು. ಇತ್ತ ತಾಳ್ಮೆಯ ಉತ್ತರ ನೀಡಿದ್ದ ಮನು, ನನ್ನ ಅರ್ಜಿ ಸಲ್ಲಿಕೆಯಲ್ಲಿ ಲೋಪ ದೋಷಗಳಾಗಿರಬೇಕು. ಆದಾಗ್ಯೂ ನನ್ನನ್ನು ಈ ಪ್ರಶಸ್ತಿಗೆ ಪರಿಗಣಿಸುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದರು. ಇದೀಗ ಅವರ ನಂಬಿಕೆಯಂತೆ ಒಲಿಂಪಿಕ್ಸ್‌ ಪದಕ ವಿಜೇತೆಯನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮನು ಭಾಕರ್, ಕಳೆದ ವರ್ಷ ನಡೆದಿದ್ದ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮತ್ತು 25 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕ ಗೆದ್ದಿದ್ದರು. ಇದಲ್ಲದೆ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಚೆಸ್ ಚತುರನಿಗೂ ಗೌರವ

ಕಳೆದ ಡಿಸೆಂಬರ್ 12 ರಂದು ಸಿಂಗಾಪುರದಲ್ಲಿ ನಡೆದಿದ್ದ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಫೈನಲ್​ನಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಚಾಂಪಿಯನ್‌ ಕಿರೀಟ ತೊಟ್ಟಿದ್ದ ಡಿ ಗುಕೇಶ್ ಅವರಿಗೂ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಕೇವಲ 18 ನೇ ವಯಸ್ಸಿನಲ್ಲಿ ವಿಶ್ವ ಚೆಸ್ ಚಾಂಪಿಯನ್ ಗೆಲ್ಲುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದ ಗುಕೇಶ್ ಇದೀಗ ದೇಶದ ಅತಿದೊಡ್ಡ ಕ್ರೀಡಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಹರ್ಮನ್‌ಪ್ರೀತ್- ಪ್ರವೀಣ್​ಗೂ ಖೇಲ್ ರತ್ನ

ಮನು ಭಾಕರ್ ಹಾಗೂ ಡಿ ಗುಕೇಶ್ ಅಲ್ಲದೆ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ರವೀಣ್ ಕುಮಾರ್ ಕೂಡ ಖೇಲ್ ರತ್ನ ಪ್ರಶಸ್ತಿಯನ್ನು ಪಡೆದಿದ್ದಾರೆ. ಪ್ರಸ್ತುತ ಭಾರತ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಅವರ ನಾಯಕತ್ವದಲ್ಲಿ ಭಾರತ ತಂಡ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದುಕೊಂಡಿತ್ತು. ಹಾಗೆಯೇ ಕಳೆದ ವರ್ಷ ನಡೆದಿದ್ದ ಪ್ಯಾರಾಲಿಂಪಿಕ್ಸ್​ನಲ್ಲಿ ಹೈಜಂಪ್ ಟಿ64 ಸ್ಪರ್ಧೆಯಲ್ಲಿ ದೇಶಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದ ಪ್ರವೀಣ್ ಕುಮಾರ್ ಅವರಿಗೂ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Thu, 2 January 25

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ