ಮನು ಭಾಕರ್ ಮಸ್ತ್ ಡ್ಯಾನ್ಸ್ ವಿಡಿಯೋ ವೈರಲ್

Updated on: Aug 21, 2024 | 2:37 PM

Manu Bhaker: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಮನು ಭಾಕರ್ ಒಟ್ಟು ಮೂರು ಸ್ಪರ್ಧೆಗಳಲ್ಲಿ ಕಾಣಿಸಿಕೊಂಡಿದ್ದರು. ಈ ಮೂರು ಸ್ಪರ್ಧೆಗಳಲ್ಲೂ ಭಾರತೀಯ ಶೂಟರ್ ಫೈನಲ್​ ತಲುಪಿರುವುದು ವಿಶೇಷ. ಅಲ್ಲದೆ ಎರಡು ಸ್ಪರ್ಧೆಗಳಲ್ಲಿ ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಇನ್ನು 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕೂದಲೆಳೆಯ ಅಂತರದಲ್ಲಿ ಪದಕ ಕೈ ತಪ್ಪಿತ್ತು.

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಎರಡು ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿದ ಮನು ಭಾಕರ್​ಗೆ ಸನ್ಮಾನ ಕಾರ್ಯಕ್ರಮ ಮುಂದುವರೆದಿದೆ.  ಮಂಗಳವಾರ ಚೆನ್ನೈನ ವೆಲಮ್ಮಾಲ್ ಮಾಲ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮನು ಭಾಕರ್ ಅವರನ್ನು ಸನ್ಮಾನಿಸಲಾಗಿತ್ತು. ಇದೇ ವೇಳೆ ವೇಲಮ್ಮಾಳ್ ಗ್ರೂಪ್​ನ ಶಾಲಾ ವಿದ್ಯಾರ್ಥಿಗಳು ಭಾರತೀಯ ಶೂಟರ್ ಜೊತೆ ಡ್ಯಾನ್ಸ್ ಮಾಡಲು ಮನವಿ ಮಾಡಿದ್ದಾರೆ. ಈ ಕೋರಿಕೆಯನ್ನು ಪೂರೈಸಲು ಮನು ಭಾಕರ್ ವಿದ್ಯಾರ್ಥಿಗಳ ಜೊತೆ ಡ್ಯಾನ್ಸ್ ಮಾಡಿದರು. ಬಾಲಿವುಡ್​ನ ಕಾಲಾ ಚಸ್ಮಾ ಹಾಡಿಗೆ ಹೆಜ್ಜೆ ಹಾಕಿದ ಭಾಕರ್ ಅವರ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಎರಡು ಪದಕಗಳನ್ನು ಗೆಲ್ಲುವ ಮೂಲಕ ಮನು ಭಾಕರ್ ಹೊಸ ಇತಿಹಾಸ ನಿರ್ಮಿಸಿದ್ದರು. ಅದು ಸಹ ಎರಡು ಪದಕಗಳನ್ನು ಗೆಲ್ಲುವ ಮೂಲಕ ಎಂಬುದು ವಿಶೇಷ. ಅಂದರೆ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತದ ಯಾವುದೇ ಸ್ಪರ್ಧಿ ಒಂದೇ ಆವೃತ್ತಿಯಲ್ಲಿ 2 ಪದಕ ಗೆದ್ದಿರಲಿಲ್ಲ. ಆದರೆ ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಎರಡು ಪದಕಗಳನ್ನು ಗೆಲ್ಲುವ ಮೂಲಕ ಮನು ಭಾಕರ್ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಮೊದಲು ಮಹಿಳಾ ಸಿಂಗಲ್ಸ್​ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಅಲಂಕರಿಸುವ ಮೂಲಕ ಕಂಚಿನ ಪದಕ ಗೆದ್ದಿದ್ದ ಮನು ಭಾಕರ್, ಆ ಬಳಿಕ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಫರ್ಧೆದಲ್ಲಿ ಸರಬ್ಜೋತ್ ಸಿಂಗ್ ಜೊತೆಗೂಡಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. ಈ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಮನು ಭಾಕರ್ ಪಾತ್ರರಾಗಿದ್ದಾರೆ.

 

 

Published on: Aug 21, 2024 02:37 PM
Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More