ಮನು ಭಾಕರ್ ಅವರ ಪದಕಗಳನ್ನು ಬದಲಿಸಲಿರುವ ಒಲಿಂಪಿಕ್ ಆಯೋಜಕರು

Manu Bhaker Medals: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಎರಡು ಪದಕಗಳನ್ನು ಗೆಲ್ಲುವ ಮೂಲಕ ಭಾರತದ ಶೂಟರ್ ಮನು ಭಾಕರ್ ಹೊಸ ಇತಿಹಾಸ ನಿರ್ಮಿಸಿದ್ದರು. ಅದು ಸಹ ಬ್ಯಾಕ್ ಟು ಬ್ಯಾಕ್ ಎರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಎಂಬುದು ವಿಶೇಷ. ಅಂದರೆ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತದ ಯಾವುದೇ ಸ್ಪರ್ಧಿ ಒಂದೇ ಆವೃತ್ತಿಯಲ್ಲಿ 2 ಪದಕ ಗೆದ್ದಿರಲಿಲ್ಲ.

ಮನು ಭಾಕರ್ ಅವರ ಪದಕಗಳನ್ನು ಬದಲಿಸಲಿರುವ ಒಲಿಂಪಿಕ್ ಆಯೋಜಕರು
Manu Bhaker
Follow us
ಝಾಹಿರ್ ಯೂಸುಫ್
|

Updated on:Jan 15, 2025 | 8:41 AM

ಪ್ಯಾರಿಸ್ ಒಲಿಂಪಿಕ್ಸ್ 2024ರ ಶೂಟಿಂಗ್​ ಸ್ಪರ್ಧೆಯಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದು ಮನು ಭಾಕರ್ ಇತಿಹಾಸ ನಿರ್ಮಿಸಿದ್ದರು. ಭಾರತದ ಕೀರ್ತಿ ಪಾತಾಕೆ ಮುಗಿಲೆತ್ತರಕ್ಕೇರಲು ಕಾರಣವಾಗಿದ್ದ ಈ ಪದಕಗಳನ್ನು ಹಿಂಪಡೆಯಲು ಒಲಿಂಪಿಕ್ಸ್ ಆಯೋಜಕರು ನಿರ್ಧರಿಸಿದ್ದಾರೆ. ಇದಕ್ಕೆ ಮುಖ್ಯ ಕಾರಣ ಪದಕಗಳ ಬಣ್ಣಗಳಲ್ಲಿ ಕಂಡು ಬರುತ್ತಿರುವ ಬದಲಾವಣೆ.

ಈ ಬಾರಿಯ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ನೀಡಲಾದ ಪದಕಗಳ ಬಣ್ಣಗಳು ಬದಲಾಗುತ್ತಿವೆ ಎಂಬ ದೂರು ಕೇಳಿ ಬಂದಿವೆ. ಹೀಗಾಗಿ ಮನು ಭಾಕರ್ ಸೇರಿದಂತೆ ವಿಶ್ವದ ಎಲ್ಲಾ ಕ್ರೀಡಾಪಟುಗಳಿಂದ ಪದಕಗಳನ್ನು ಹಿಂಪಡೆಯಲು ಒಲಿಂಪಿಕ್ಸ್ ಆಯೋಜಕರು ನಿರ್ಧರಿಸಿದ್ದಾರೆ. ಅಲ್ಲದೆ ಅದಕ್ಕೆ ಬದಲಾಗಿ ಹೊಸ ಪದಕಗಳನ್ನು ನೀಡುವುದಾಗಿ ತಿಳಿಸಿದ್ದಾರೆ.

ವಿಜೇತರಿಂದ ದೂರು:

ಈ ಬಾರಿ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದಿರುವ ಹಲವು ಕ್ರೀಡಾಪಟುಗಳ ಮೆಡಲ್​ಗಳ ಬಣ್ಣ ಬದಲಾಗಿವೆ. ಕಳಪೆ ಗುಣಮಟ್ಟದ ಪದಕಗಳ ಚಿತ್ರಗಳನ್ನು ಕೆಲ ಕ್ರೀಡಾಪಟುಗಳು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಗಮನ ಸೆಳೆದಿದ್ದರು.

ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪ್ಯಾರಿಸ್ ಒಲಿಂಪಿಕ್ಸ್ ಆಯೋಜಕರು ಪದಕಗಳನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ. ಅಲ್ಲದೆ ಹೊಚ್ಚಹೊಸದಾಗಿ ಮಾಡಿದ ನಂತರ ಆಟಗಾರರಿಗೆ ಪದಕಗಳನ್ನು ಹಿಂತಿರುಗಿಸಲಾಗುವುದು ಎಂದು ತಿಳಿಸಿದೆ.

ಪ್ಯಾರಿಸ್ ಒಲಿಂಪಿಕ್ ಸಂಘಟನಾ ಸಮಿತಿಯು ಮೊನೈ ಡಿ ಪ್ಯಾರಿಸ್‌ ಎನ್ನುವ ಕಂಪೆನಿಗೆ ಪದಕ ಮಾಡುವ ಗುತ್ತಿಗೆಯನ್ನು ನೀಡಿತ್ತು. ಇದು ಫ್ರಾನ್ಸ್‌ ದೇಶದ ನಾಣ್ಯಗಳು ಮತ್ತು ಇತರ ಕರೆನ್ಸಿಗಳನ್ನು ಉತ್ಪಾದಿಸುವ ಸರ್ಕಾರಿ ಸ್ವಾಮ್ಯದ ಕಂಪನಿಯಾಗಿದೆ. ಇದೀಗ ದೂರು ಬಂದ ಹಿನ್ನಲೆ ಮೊನೈ ಡಿ ಪ್ಯಾರಿಸ್‌ ಕಂಪೆನಿ  ಕ್ರೀಡಾಪಟುಗಳ ಹಾನಿಗೊಳಗಾದ ಪದಕಗಳನ್ನು ಬದಲಾಯಿಸಲು ನಿರ್ಧರಿಸಿದೆ.

ವಿಶೇಷ ಎಂದರೆ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ನೀಡಲಾದ ಪದಕಗಳಲ್ಲಿ ಐಫೆಲ್ ಟವರ್‌ನ ಕಬ್ಬಿಣದ ತುಂಡುಗಳನ್ನು ಬಳಸಲಾಗಿದೆ. ಈ ಮೂಲಕ ಒಟ್ಟು 5,084 ಪದಕಗಳನ್ನು ನಿರ್ಮಿಸಲಾಗಿತ್ತು. ಇದೀಗ ಪದಕಗಳ ಬಣ್ಣಗಳು ಬದಲಾಗುತ್ತಿರುವ ದೂರುಗಳು ಬಂದ ಹಿನ್ನಲೆಯಲ್ಲಿ, ಕ್ರೀಡಾಪಟುಗಳಿಂದ ಮೆಡಲ್ ಹಿಂಪಡೆದು ಹೊಸ ಪದಕಗಳನ್ನು ನೀಡಲು ಪ್ಯಾರಿಸ್ ಒಲಿಂಪಿಕ್ಸ್ ಆಯೋಜಕರು ನಿರ್ಧರಿಸಿದ್ದಾರೆ.

ಪ್ಯಾರಿಸ್​ನಲ್ಲಿ ಮನು ಭಾಕರ್ ಮಿಂಚಿಂಗ್:

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಮನು ಭಾಕರ್ ಭಾರತಕ್ಕೆ ಎರಡು ಕಂಚಿನ ಪದಕ ಗೆದ್ದುಕೊಟ್ಟಿದ್ದರು. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮೊದಲ ಕಂಚು ಗೆದ್ದ ಮನು, ಒಲಿಂಪಿಕ್ಸ್​ನಲ್ಲಿ ಈ ಸಾಧನೆ ಮಾಡಿದ ಭಾರತದ ಮೊದಲ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಇದನ್ನೂ ಓದಿ: 7 ವರ್ಷಗಳ ಬಳಿಕ ರಣಜಿ ಪಂದ್ಯವಾಡಲು ಸಜ್ಜಾದ ಟೀಮ್ ಇಂಡಿಯಾ ಆಟಗಾರ

ಇದಾದ ಬಳಿಕ ಮಿಶ್ರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಜೊತೆಗೂಡಿ ಮತ್ತೊಂದು ಕಂಚಿನ ಪದಕ ಗೆದ್ದಿದ್ದರು. ಈ ಮೂಲಕ ಸ್ವಾತಂತ್ರ್ಯದ ನಂತರ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಮನು ಭಾಕರ್ ಪಾತ್ರರಾಗಿದ್ದರು.

Published On - 8:40 am, Wed, 15 January 25

Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ