ಜಾವೆಲಿನ್ ಥ್ರೋ ವಿಭಾಗದಲ್ಲಿ ಕಾಮನ್‌ವೆಲ್ತ್‌, ಏಷ್ಯನ್ ಗೇಮ್ಸ್‌ಗೆ ಅರ್ಹತೆ ಪಡೆದ ಹಾಸನದ ಮನು ಶೆಟ್ಟಿ!

Javelin Throw: ಕೇರಳದ ತಿರುವನಂತಪುರಂ‌ನಲ್ಲಿ ನಡೆದ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್‌ನಲ್ಲಿ 82.43 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ 2022ರ ಕಾಮನ್‌ವೆಲ್ತ್‌ ಹಾಗೂ ಏಷ್ಯನ್ ಗೇಮ್ಸ್‌ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ.

ಜಾವೆಲಿನ್ ಥ್ರೋ ವಿಭಾಗದಲ್ಲಿ ಕಾಮನ್‌ವೆಲ್ತ್‌, ಏಷ್ಯನ್ ಗೇಮ್ಸ್‌ಗೆ ಅರ್ಹತೆ ಪಡೆದ ಹಾಸನದ ಮನು ಶೆಟ್ಟಿ!
ಕೋಚ್ ಕಾಶಿನಾಥ್ ಜೊತೆಗೆ ಮನು ಶೆಟ್ಟಿ
Follow us
TV9 Web
| Updated By: ಪೃಥ್ವಿಶಂಕರ

Updated on:Mar 14, 2022 | 10:32 PM

2020 ರಂದು ನಡೆದಿದ್ದ ಟೋಕಿಯೋ ಒಲಿಂಪಿಕ್ಸ್‌ (Tokyo Olympics) ಕ್ರೀಡಾಕೂಟದ ಅಥ್ಲೆಟಿಕ್ಸ್‌ ವಿಭಾಗದಲ್ಲಿ ಬರೋಬ್ಬರಿ 87.58 ಮೀಟರ್ ದೂರ ಜಾವಲಿನ್ ಥ್ರೋ (Javelin Throw) ಮಾಡುವ ಮೂಲಕ ದೇಶಕ್ಕೆ ಏಕೈಕ ಚಿನ್ನದ ಪದಕ ಗೆದ್ದು ಕೊಟ್ಟಿದ್ದ ಬಂಗಾರದ ಹುಡುಗ ನೀರಜ್‌ ಚೋಪ್ರಾ (Neeraj Chopra) ಬಗ್ಗೆ ನಿಮಗೆಲ್ಲ ಗೊತ್ತೆ ಇದೆ. ಈಗ ನೀರಜ್​ನಂತೆಯೇ ಜಾವಲಿನ್ ಥ್ರೋ ವಿಭಾಗದಲ್ಲಿ ಕರ್ನಾಟಕದ ಪ್ರತಿಭೆಯೊಂದು ಅಪ್ರತಿಮ ಸಾಧನೆ ತೋರಿದೆ. ಕೇರಳದ ತಿರುವನಂತಪುರಂ‌ನಲ್ಲಿ ನಡೆದ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್‌ನಲ್ಲಿ 82.43 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಮೊದಲ ಸ್ಥಾನ ಪಡೆದು ಮುಂದೆ ಬರುವ ಕಾಮನ್‌ವೆಲ್ತ್‌, ಏಷ್ಯನ್ ಗೇಮ್ಸ್‌ಗೆ ಕನ್ನಡಿಗ ಮನು ಶೆಟ್ಟಿ ಅರ್ಹತೆ ಪಡೆದಿದ್ದಾರೆ.

ಮೂಲತಃ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕುಪ್ಪಗೋಡು ನಾಗನಹಳ್ಳಿಯ ನಿವಾಸಿಯಾಗಿರುವ ಮನು ಶೆಟ್ಟಿ ಪ್ರಸ್ತುತ ಇಂಡಿಯನ್ ಆರ್ಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕೃಷಿಕ ಕುಟುಂಬದ ಕೇಶವ ಹಾಗೂ ಸುಜಾತ ದಂಪತಿಗಳಿಗೆ ಜನಿಸಿದ ಮನು ಶೆಟ್ಟಿ ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಹಾಸನದ ಬೇಲೂರಿನಲ್ಲಿ ಮುಗಿಸಿರುತ್ತಾರೆ. ನಂತರ ಪ್ರಥಮ ಪಿಯು ಓದುವಾಗಲೇ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗುವ ಮನುಶೆಟ್ಟಿ 2ನೇ ವರ್ಷದ ಪಧವಿ ಮುಗಿಯುವ ವೇಳೆಗೆ ಕ್ರೀಡಾ ವಿಭಾಗದಲ್ಲಿ ಇಂಡಿಯನ್ ಆರ್ಮಿಗೆ ಆಯ್ಕೆಯಾಗುತ್ತಾರೆ. ನಂತರ ಹಲವಾರು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪದಕ ಗೆದ್ದಿದ್ದಾರೆ. ಕಳೆದ ವರ್ಷ ಪಂಜಾಬ್​ನ ಪಟಿಯಾಲದಲ್ಲಿ ನಡೆದ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್‌ 2ರಲ್ಲಿ 75 ಮೀಟರ್ ಜಾವಲಿನ್ ಎಸೆದು 3ನೇ ಸ್ಥಾನ ಪಡೆದರು. ನಂತರ ತೆಲಂಗಾಣದಲ್ಲಿ ನಡೆದಿದ್ದ ಓಪನ್ ನ್ಯಾಷನಲ್ ಕ್ರೀಡಾಕೂಟದಲ್ಲಿ 2ನೇ ಸ್ಥಾನಕ್ಕೆ ಮನುಶೆಟ್ಟಿ ತೃಪ್ತಿ ಪಡಬೇಕಾಯಿತು.

ಬಳಿಕ ಒಲಂಪಿಕ್ ಹೀರೋ ನೀರಜ್ ಚೋಪ್ರಾಗೆ ತರಬೇತಿ ನೀಡಿದ್ದ ಕಾಶೀನಾಥ್ ನಾಯ್ಕ್ ಬಳಿ ಕಠಿಣ ತರಬೇತಿ ಪಡೆಯುತ್ತಿರುವ ಮನು ಶೆಟ್ಟಿ, ಕೇರಳದ ತಿರುವನಂತಪುರಂ‌ನಲ್ಲಿ ನಡೆದ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್‌ನಲ್ಲಿ 82.43 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ 2022ರ ಕಾಮನ್‌ವೆಲ್ತ್‌ ಹಾಗೂ ಏಷ್ಯನ್ ಗೇಮ್ಸ್‌ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ. ಈ ಗ್ರಾಮೀಣ ಪ್ರತಿಭೆಗೆ ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ ಭರವಸೆ ನೀಡಿದ್ದಾರೆ. ಒಲಂಪಿಕ್ಸ್​ನಲ್ಲಿ ಚಿನ್ನ ಗೆದ್ದ ನೀರಜ್​ರಂತೆಯೇ ಮನು ಶೆಟ್ಟಿ ಕೂಡ ಕಾಮನ್‌ವೆಲ್ತ್‌ ಹಾಗೂ ಏಷ್ಯನ್ ಗೇಮ್ಸ್​ನಲ್ಲಿ ಪದಕ ಗೆದ್ದು ಒಲಂಪಿಕ್ಸ್​ನಲ್ಲಿ ಆಡುವಂತ್ತಾಗಲಿ ಎಂಬುದು ಎಲ್ಲರ ಹಾರೈಕೆಯಾಗಿದೆ.

ಇದನ್ನೂ ಓದಿ:IND vs SL: 28 ವರ್ಷಗಳ ನಂತರ ಶ್ರೀಲಂಕಾವನ್ನು ಕ್ಲೀನ್ ಸ್ವೀಪ್ ಮಾಡಿದ ಭಾರತ! ಸರಣಿ ಗೆಲುವಿಗೆ 5 ಕಾರಣಗಳಿವು

Published On - 9:33 pm, Mon, 14 March 22

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು