ಮೆಲ್ಬೋರ್ನ್ ಟೆಸ್ಟ್‌ನಲ್ಲಿ ಆತಿಥೇಯ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಆಸೀಸ್ ಪಡೆ 474 ರನ್ಗಳ ಬೃಹತ್ ಮೊತ್ತ ಕಲೆಹಾಕಿದೆ. ತಂಡದ ಪರ ಉಸ್ಮಾನ್ ಖವಾಜಾ, ಸ್ಯಾಮ್ ಕೊನ್ಸ್ಟಾಸ್, ಮಾರ್ನಸ್ ಲಬುಶೆನ್ ಅರ್ಧಶತಕ ಗಳಿಸಿದರೆ ಸ್ಟೀವ್ ಸ್ಮಿತ್ ಶತಕ ಬಾರಿಸಿದರು. ಇತ್ತ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್ ಕೂಡ ಬೇಡದ ಶತಕವನ್ನು ತಮ್ಮ ಖಾತೆಗೆ ಹಾಕಿಕೊಂಡರು.