IPL 2021: ಉಳಿದ ಐಪಿಎಲ್ ಪಂದ್ಯಗಳನ್ನು ಇಂಗ್ಲೆಂಡ್​ನಲ್ಲಿ ಆಯೋಜಿಸುವುದು ಬೇಡ; ಇಂಗ್ಲೆಂಡ್ ಮಾಜಿ ಕ್ರಿಕೆಟಿಗನ ವಿರೋಧ

IPL 2021: ಐಪಿಎಲ್ ಇಂಗ್ಲೆಂಡ್‌ನಲ್ಲಿ ನಡೆಯಬಾರದು ಏಕೆಂದರೆ ಸೆಪ್ಟೆಂಬರ್‌ ತಿಂಗಳಲ್ಲಿ ಇಂಗ್ಲೆಂಡ್​ನಲ್ಲಿ ಸಾಕಷ್ಟು ಮಳೆ ಬೀಳುತ್ತದೆ. ಇದರಿಂದ ಐಪಿಎಲ್​ನ ರೋಚಕತೆ ಹಾಳಾಗುತ್ತದೆ

IPL 2021: ಉಳಿದ ಐಪಿಎಲ್ ಪಂದ್ಯಗಳನ್ನು ಇಂಗ್ಲೆಂಡ್​ನಲ್ಲಿ ಆಯೋಜಿಸುವುದು ಬೇಡ; ಇಂಗ್ಲೆಂಡ್ ಮಾಜಿ ಕ್ರಿಕೆಟಿಗನ ವಿರೋಧ
ಮುಂದಿನ ಸೀಸನ್​​ಗಾಗಿ ನಡೆಯಲಿರುವ ಮೆಗಾ ಹರಾಜಿಗಾಗಿ ಬಿಸಿಸಿಐ ಈಗಾಗಲೇ ರೂಪುರೇಷೆಗಳನ್ನು ಸಿದ್ದಪಡಿಸಿದೆ. ಅದರಂತೆ ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು.
Follow us
ಪೃಥ್ವಿಶಂಕರ
|

Updated on:May 24, 2021 | 6:48 PM

ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದಾಗಿ, ಐಪಿಎಲ್ -2021 ಅನ್ನು ಅನಿರ್ದಿಷ್ಟವಾಗಿ ಮುಂದೂಡಲಾಯಿತು. ಇಲ್ಲಿಯವರೆಗೆ, ಲೀಗ್ ಯಾವಾಗ ಪ್ರಾರಂಭವಾಗಲಿದೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಸೆಪ್ಟೆಂಬರ್ ತಿಂಗಳಲ್ಲಿ ಇದನ್ನು ಇಂಗ್ಲೆಂಡ್‌ನಲ್ಲಿ ಆಯೋಜಿಸುವ ಬಗ್ಗೆ ಬಿಸಿಸಿಐ ಯೋಚಿಸುತ್ತಿದೆ ಎಂಬ ವರದಿಗಳಿವೆ. ಆದರೆ ವಿರೋಧ ಇಂಗ್ಲೆಂಡ್‌ನಿಂದಲೇ ಪ್ರಾರಂಭವಾಗಿದೆ. ಸೆಪ್ಟೆಂಬರ್‌ನಲ್ಲಿ ಇಂಗ್ಲೆಂಡ್‌ನಲ್ಲಿ ಐಪಿಎಲ್‌ನ 14 ನೇ ಆವೃತ್ತಿಯ ಉಳಿದ ಪಂದ್ಯಗಳನ್ನು ಆಯೋಜಿಸುವ ಬಗ್ಗೆ ಬಿಸಿಸಿಐ ಯೋಚಿಸುತ್ತಿದ್ದರೆ, ಐಪಿಎಲ್‌ನ ಬ್ರಾಂಡ್ ಮೌಲ್ಯ ಹಾಳಾಗುತ್ತದೆ ಎಂದು ಇಂಗ್ಲೆಂಡ್‌ನ ಮಾಜಿ ಸ್ಪಿನ್ನರ್ ಮಾಂಟಿ ಪನೇಸರ್ ಹೇಳಿದ್ದಾರೆ. ಜೊತೆಗೆ ಇದಕ್ಕೆ ಸೂಕ್ತ ಕಾರಣವನ್ನು ನೀಡಿದ್ದಾರೆ.

ಸೆಪ್ಟೆಂಬರ್ 14 ರಂದು ಭಾರತವು ಇಂಗ್ಲೆಂಡ್‌ನಲ್ಲಿ ತಮ್ಮ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಮುಗಿಸಲಿದೆ ಮತ್ತು ಐಪಿಎಲ್‌ನ ಉಳಿದ 31 ಪಂದ್ಯಗಳನ್ನು ಆತಿಥ್ಯ ವಹಿಸಲು ಆ ಸರಣಿಯ ಅಂತ್ಯ ಮತ್ತು ಟಿ 20 ವಿಶ್ವಕಪ್ ನಡುವಿನ ಒಂದು ತಿಂಗಳ ಅವಧಿಯ ವಿಂಡೋ ಸೂಕ್ತವಾಗಿದೆ ಎಂಬ ಚರ್ಚೆಯಿದೆ.

ಐಪಿಎಲ್ ಮನರಂಜನೆ ಹಾಳಾಗುತ್ತದೆ ಸ್ಪೋರ್ಟ್ಸ್ ಯಾರಿ ಎಂಬ ಯೂಟ್ಯೂಬ್ ಕಾರ್ಯಕ್ರಮದಲ್ಲಿ ಮಾತಾನಾಡಿದ ಮಾಜಿ ಎಡಗೈ ಸ್ಪಿನ್ನರ್, ಐಪಿಎಲ್ ಇಂಗ್ಲೆಂಡ್‌ನಲ್ಲಿ ನಡೆಯಬಾರದು ಏಕೆಂದರೆ ಸೆಪ್ಟೆಂಬರ್‌ ತಿಂಗಳಲ್ಲಿ ಇಂಗ್ಲೆಂಡ್​ನಲ್ಲಿ ಸಾಕಷ್ಟು ಮಳೆ ಬೀಳುತ್ತದೆ. ಇದರಿಂದ ಐಪಿಎಲ್​ನ ರೋಚಕತೆ ಹಾಳಾಗುತ್ತದೆ ಎಂದು ಅವರು ಹೇಳಿದರು. ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಭಾರತಕ್ಕೆ ಸಾಧ್ಯವಾಗದಿದ್ದರೆ, ಹವಾಮಾನ ಪರಿಸ್ಥಿತಿಗಳು ಬಹಳ ದೊಡ್ಡ ಪಾತ್ರವನ್ನು ವಹಿಸುವುದರಿಂದ ಇದನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಯಲ್ಲಿ ನಡೆಸಬೇಕು ಎಂದಿದ್ದಾರೆ.

ಇಂಗ್ಲೆಂಡ್‌ನಲ್ಲಿ ಮಳೆಯಾದರೆ ಅದು ಪಂದ್ಯವನ್ನು ಹಾಳುಮಾಡುತ್ತದೆ. ಮಳೆಯಿಂದಾಗಿ ಟಿ 20 ಪಂದ್ಯವನ್ನು 15 ಓವರ್‌ಗಳಿಗೆ, 10 ಓವರ್‌ಗಳಿಗೆ ಇಳಿಸುವುದನ್ನು ನೀವು ನೋಡುತ್ತೀರಿ. ಇದರಿಂದ ಐಪಿಎಲ್ ತನ್ನ ಬ್ರಾಂಡ್ ಮೌಲ್ಯವನ್ನು ಕಳೆದುಕೊಳ್ಳುವ ಸಾಧ್ಯತೆಗಳಿವೆ ಆದರಿಂದ ಐಪಿಎಲ್ ಇಂಗ್ಲೆಂಡ್​ನಲ್ಲಿ ನಡೆಯಬಾರದು ಎಂದಿದ್ದಾರೆ.

ಬಿಸಿಸಿಐ ಈ ಯೋಜನೆಯನ್ನು ಹೊಂದಿದೆ ಐಪಿಎಲ್‌ಗೆ ಒಂದು ವಿಂಡೋವನ್ನು ಒದಗಿಸಲು ಟೆಸ್ಟ್ ಸರಣಿಯ ವೇಳಾಪಟ್ಟಿಯನ್ನು ಬದಲಾಯಿಸುವಂತೆ ಬಿಸಿಸಿಐ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಗೆ (ಇಸಿಬಿ) ಅನೌಪಚಾರಿಕ ವಿನಂತಿಯನ್ನು ನೀಡಿದೆ. ಆದಾಗ್ಯೂ, ಇದು ಸಂಭವಿಸುವ ಸಾಧ್ಯತೆಯಿಲ್ಲ. ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಭಾರತದ ಸರಣಿ ಮತ್ತು ಟಿ 20 ವಿಶ್ವಕಪ್ ನಡುವಿನ ಒಂದು ತಿಂಗಳ ಅವಧಿಯ ಮಧ್ಯದಲ್ಲಿ ಯುಎಇಯಲ್ಲಿ ಪಂದ್ಯಾವಳಿಯನ್ನು ನಡೆಸುವ ಆಯ್ಕೆಯನ್ನು ಬಿಸಿಸಿಐ ಹೊಂದಿದೆ. 2020 ರಲ್ಲಿಯೂ ಐಪಿಎಲ್​ ಅನ್ನು ಯುಎಇಯಲ್ಲಿ ನಡೆಸಿ ಬಿಸಿಸಿಐ ಯಶಸ್ವಿಯಾಗಿತ್ತು.

Published On - 6:45 pm, Mon, 24 May 21

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್