ಧೋನಿ ಬತ್ತಳಿಕೆಗೆ ಸೇರಿತು ಮತ್ತೊಂದು ‘ಅಸ್ತ್ರ’!

ರಾಂಚಿ: ತವರೂರಿನ ಜೆಎಸ್ ಸಿಎ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯ ನೋಡಲು ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಬರುತ್ತಾರೆ ಎಂದು ಕ್ರೀಡಾಭಿಮಾನಿಗಳು ಕಾಯುತ್ತಿದ್ದರು. ಆದರೆ ಧೋನಿ ಭಾರತೀಯ ಸೇನೆ ಬಳಸುವ ನಿಸ್ಸಾನ್ ಜೊಂಗಾವನ್ನು ಬೀದಿಗಳಲ್ಲಿ ಸವಾರಿ ಮಾಡುವುದರಲ್ಲಿ ಬ್ಯುಸಿಯಾಗಿದ್ದರು. ಕಾರುಗಳು ಮತ್ತು ಬೈಕುಗಳ ಖರೀದಿಯಲ್ಲಿ ಧೋನಿ ಅವರಿಗಿರುವ ಕ್ರೇಝ್ ಹೊಸದೇನಲ್ಲ. ಈಗಾಗಲೇ ಧೋನಿಯ ಬಳಿ ದುಬಾರಿ ಹಮ್ಮರ್ ಕಾರ್ ಸೇರಿದಂತೆ ಹಲವಾರು ಕಾರುಗಳಿವೆ. ಈಗ ಮತ್ತೊಂದು […]

ಧೋನಿ ಬತ್ತಳಿಕೆಗೆ ಸೇರಿತು ಮತ್ತೊಂದು 'ಅಸ್ತ್ರ'!
Follow us
ಸಾಧು ಶ್ರೀನಾಥ್​
|

Updated on:Oct 24, 2019 | 10:09 AM

ರಾಂಚಿ: ತವರೂರಿನ ಜೆಎಸ್ ಸಿಎ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯ ನೋಡಲು ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಬರುತ್ತಾರೆ ಎಂದು ಕ್ರೀಡಾಭಿಮಾನಿಗಳು ಕಾಯುತ್ತಿದ್ದರು. ಆದರೆ ಧೋನಿ ಭಾರತೀಯ ಸೇನೆ ಬಳಸುವ ನಿಸ್ಸಾನ್ ಜೊಂಗಾವನ್ನು ಬೀದಿಗಳಲ್ಲಿ ಸವಾರಿ ಮಾಡುವುದರಲ್ಲಿ ಬ್ಯುಸಿಯಾಗಿದ್ದರು.

ಕಾರುಗಳು ಮತ್ತು ಬೈಕುಗಳ ಖರೀದಿಯಲ್ಲಿ ಧೋನಿ ಅವರಿಗಿರುವ ಕ್ರೇಝ್ ಹೊಸದೇನಲ್ಲ. ಈಗಾಗಲೇ ಧೋನಿಯ ಬಳಿ ದುಬಾರಿ ಹಮ್ಮರ್ ಕಾರ್ ಸೇರಿದಂತೆ ಹಲವಾರು ಕಾರುಗಳಿವೆ. ಈಗ ಮತ್ತೊಂದು ಜೊಂಗಾ ಜೀಪ್ ಸೇರಿಕೊಂಡಿದೆ. ಅಲ್ಲದೆ ಸೆಪ್ಟೆಂಬರ್ ನಲ್ಲಿ ಧೋನಿ ಜೀಪ್ ಕಂಪಾಸ್ ಚೆರೋಕಿ ಟ್ರಾಕ್ ವಾಕ್ ಕಾರನ್ನು ಖರೀದಿಸಿದ್ದರು.

ಹೊಸ ಜೀಪ್ ಖರೀದಿಸಿದ ನಂತರ ಜೀಪ್ ನಲ್ಲಿ ರೈಡ್ ಮಾಡಿತ್ತಿದ್ದ ಧೋನಿ ಸ್ಥಳೀಯ ಪೆಟ್ರೋಲ್ ಬಂಕ್ ಗೆ ಬಂದಿದ್ದರು. ಈ ವೇಳೆ ಧೋನಿ ಅಭಿಮಾನಿಗಳು ಅವರ ಆಟೋಗ್ರಾಫ್ ಗೆ ಮುಗಿಬಿದ್ದಿದ್ದಾರೆ. ಅಭಿಮಾನಿಗಳಿಗೆ ನಿರಾಶೆಯಾಗಬಾರದೆಂದು ಧೋನಿ ಪ್ರತಿಯೊಬ್ಬರಿಗೂ ಆಟೋಗ್ರಾಫ್ ನೀಡಿ ಸೆಲ್ಫಿ ತೆಗೆಸಿಕೊಂಡಿದ್ದಾರೆ.

ವಿಶ್ವ ಕಪ್ ಬಳಿಕ ಧೋನಿಯ ನಿವೃತ್ತಿಯ ಕುರಿತು ಭಾರೀ ಚರ್ಚೆಗಳು ಆಗಿದ್ದವು. ಇದರ ನಡುವೆ ಬಿಸಿಸಿಐ ಬಾಂಗ್ಲಾದೇಶದ ಟೂರ್ನಿಗೂ ಧೋನಿಯನ್ನು ಆಯ್ಕೆ ಮಾಡಿರಲಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಧೋನಿ ಇಂಡಿಯಾ ಪರ ಆಡುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಕಾಡುತ್ತಿತ್ತು. ನಂತರ ಸೇನೆ ಸೇರಿ ಗಡಿ ಭಾಗ ಕಾಶ್ಮೀರದಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿ ಬಂದಿದ್ದಾರೆ.

https://www.instagram.com/p/B36r4ndHSOG/?utm_source=ig_web_copy_link

Published On - 3:23 pm, Tue, 22 October 19

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ