ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾದ ಈ ಯುವ ಆಟಗಾರ ಅಬ್ಬರಿಸಲಿದ್ದಾನೆ; ಎಂಎಸ್​ಕೆ ಪ್ರಸಾದ್

ಇಂದಿನ ಹುಡುಗರು ಹಿಂದಿನವರಿಗಿಂತ ಐದು ಪಟ್ಟು ಹೆಚ್ಚು ಆತ್ಮವಿಶ್ವಾಸ ಹೊಂದಿದ್ದಾರೆ. ಸೂರ್ಯಕುಮಾರ್ ಯಾದವ್ ಮೊದಲ ಎಸೆತದಲ್ಲಿಯೇ ಸಿಕ್ಸರ್ ಬಾರಿಸಿ ವಿಶ್ವದ ಅತ್ಯುತ್ತಮ ಬೌಲರ್ ಅನ್ನು ನಡುಗಿಸಿದರು.

ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾದ ಈ ಯುವ ಆಟಗಾರ ಅಬ್ಬರಿಸಲಿದ್ದಾನೆ; ಎಂಎಸ್​ಕೆ ಪ್ರಸಾದ್
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on: Jun 06, 2021 | 5:34 PM

ಭಾರತ ತಂಡವು ಜುಲೈ ತಿಂಗಳಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಇಲ್ಲಿ ಅವರು ಏಕದಿನ ಮತ್ತು ಟಿ 20 ಸರಣಿಗಳನ್ನು ಆಡಬೇಕಾಗಿದೆ. ಮುಖ್ಯ ಮುಖಗಳ ಹೊರತಾಗಿ, ಈ ಪ್ರವಾಸಕ್ಕಾಗಿ ಹೊಸ ಮುಖಗಳು ಆಯ್ಕೆಯಾಗಲಿವೆ. ಶ್ರೀಲಂಕಾ ಪ್ರವಾಸದ ಮೊದಲು, ಟೀಮ್ ಇಂಡಿಯಾದ ಮಾಜಿ ಆಯ್ಕೆ ಸಮಿತಿ ಸದಸ್ಯ ಎಂಎಸ್ಕೆ ಪ್ರಸಾದ್ ಈ ಪ್ರವಾಸದಲ್ಲಿ ಅಬ್ಬರಿಸುವ ಆಟಗಾರ ಯಾರು ಎಂದು ಹೇಳಿದ್ದಾರೆ. ಶ್ರೀಲಂಕಾ ವಿರುದ್ಧದ ಏಕದಿನ ಮತ್ತು ಟಿ 20 ಸರಣಿಗಳನ್ನು ಭಾರತ ತಂಡ ಗೆಲ್ಲುತ್ತದೆ ಎಂದು ಪ್ರಸಾದ್ ಹೇಳಿದ್ದಾರೆ. ಭಾರತದಲ್ಲಿ ಸಾಕಷ್ಟು ಸಮರ್ಥ ಆಟಗಾರರಿದ್ದಾರೆ ಎಂಬುದು ಪ್ರಸಾದ್ ವಾದವಾಗಿದೆ.

ಸೂರ್ಯಕುಮಾರ್ ಯಾದವ್ ಜೊತೆಗೆ ಇಶಾನ್ ಮತ್ತು ಸಂಜು ಇದೀಗ ಶ್ರೀಲಂಕಾ ಪ್ರವಾಸಕ್ಕಾಗಿ ಅಥವಾ ಪ್ರವಾಸದ ವೇಳಾಪಟ್ಟಿಗಾಗಿ ಟೀಮ್ ಇಂಡಿಯಾವನ್ನು ಘೋಷಿಸಲಾಗಿಲ್ಲ. ಮೂರು ಏಕದಿನ ಮತ್ತು ಟಿ 20 ಪಂದ್ಯಗಳನ್ನು ಆಡುವ ಮಾತುಕತೆ ಮುನ್ನೆಲೆಗೆ ಬಂದಿದ್ದರೂ. ಶ್ರೀಲಂಕಾ ಪ್ರವಾಸವು ಜುಲೈ 13 ರಿಂದ ಪ್ರಾರಂಭವಾಗಲಿದೆ ಎಂದು ಹೇಳಲಾಗಿದೆ. ಎಂಎಸ್ಕೆ ಪ್ರಸಾದ್ ಅವರು ಕ್ರೀಡಾ ವೆಬ್‌ಸೈಟ್ ಸ್ಪೋರ್ಟ್‌ಸ್ಟಾರ್‌ನೊಂದಿಗಿನ ಸಂವಾದದಲ್ಲಿ ಸೂರ್ಯಕುಮಾರ್ ಯಾದವ್ ಶ್ರೀಲಂಕಾ ಪ್ರವಾಸದಲ್ಲಿ ಹೆಚ್ಚು ಪ್ರಭಾವ ಬೀರುತ್ತಾರೆ ಎಂದು ಹೇಳಿದರು. ಸೂರ್ಯಕುಮಾರ್ ಯಾದವ್ ಜೊತೆಗೆ ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ಕೂಡ ಮಿಂಚುವ ಉತ್ತಮ ಅವಕಾಶವನ್ನು ಹೊಂದಿದ್ದಾರೆ. ನಾನು ಅವೇಶ್ ಖಾನ್ ಅವರನ್ನು ತಂಡದಲ್ಲಿ ನೋಡಲು ಬಯಸುತ್ತೇನೆ (ಅವೇಶ್ ಪ್ರಸ್ತುತ ಯುಕೆ ಪ್ರವಾಸವನ್ನು ಸ್ಟ್ಯಾಂಡ್ಬೈ ಆಟಗಾರನಾಗಿದ್ದಾರೆ). ಅವರು ಐಪಿಎಲ್‌ನಲ್ಲಿ ಅದ್ಭುತವಾಗಿ ಆಡಿದ್ದಾರೆ ಮತ್ತು ಎರಡು ಸರಣಿಗಳಲ್ಲಿ ಅವರು ಆಡಲು ಸಾಧ್ಯವಾಗದಿರುವುದು ದುರದೃಷ್ಟಕರ ಎಂದಿದ್ದಾರೆ.

ಸೂರ್ಯ ಮತ್ತು ಇಶಾನ್ ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧದ ಟಿ 20 ಸರಣಿಯಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದರು. ಇಬ್ಬರೂ ತಮ್ಮ ಮೊದಲ ಇನ್ನಿಂಗ್ಸ್‌ನಲ್ಲಿ ಅರ್ಧಶತಕಗಳನ್ನು ಗಳಿಸಿದ್ದರು. ಅಂತಹ ಪರಿಸ್ಥಿತಿಯಲ್ಲಿ, ಶ್ರೀಲಂಕಾ ಪ್ರವಾಸದ ಮೂಲಕ, ಇಬ್ಬರೂ ಟಿ 20 ವಿಶ್ವಕಪ್‌ಗೆ ಮುನ್ನ ತಮ್ಮ ಸಾಮಥ್ಯ್ರವನ್ನು ಮತ್ತಷ್ಟು ಬಲಪಡಿಸಬಹುದು.

ಇಂದಿನ ಆಟಗಾರರಲ್ಲಿ 5 ಪಟ್ಟು ಹೆಚ್ಚು ವಿಶ್ವಾಸ ಎಂಎಸ್‌ಕೆ ಪ್ರಸಾದ್ ಅವರು ಯುವ ಆಟಗಾರರನ್ನು ಹಳೆಯ ಆಟಗಾರರೊಂದಿಗೆ ಹೋಲಿಸಿ ಮಾತನಾಡಿದ್ದಾರೆ. ಕೌಶಲ್ಯಗಳು ಹಿಂದಿನ ಆಟಗಾರರು ಮತ್ತು ಇಂದಿನ ಆಟಗಾರರ ನಡುವೆ ಒಂದೇ ಆಗಿರುತ್ತದೆ. ಆದರೆ ಇಂದಿನ ಹುಡುಗರು ಹಿಂದಿನವರಿಗಿಂತ ಐದು ಪಟ್ಟು ಹೆಚ್ಚು ಆತ್ಮವಿಶ್ವಾಸ ಹೊಂದಿದ್ದಾರೆ. ಇದಕ್ಕೆ ಸ್ಪಷ್ಟ ಉದಾಹರಣೆಯೆಂದರೆ- ಸೂರ್ಯಕುಮಾರ್ ಯಾದವ್ ಮೊದಲ ಎಸೆತದಲ್ಲಿಯೇ ಸಿಕ್ಸರ್ ಬಾರಿಸಿ ವಿಶ್ವದ ಅತ್ಯುತ್ತಮ ಬೌಲರ್ ಅನ್ನು ನಡುಗಿಸಿದರು. ಹಾಗೆಯೇ ಚೊಚ್ಚಲ ಪಂದ್ಯದಲ್ಲಿ ಇಶಾನ್ ಕಿಶನ್ ಎದುರಾಳಿ ತಂಡದ ವಿರುದ್ದ ಅಬ್ಬರಿಸಿದ್ದರು. ಹೀಗಾಗಿ ಈ ಯುವ ಭಾರತೀಯ ತಂಡವು ಶ್ರೀಲಂಕಾದಲ್ಲಿ ನಡೆಯುವ ಸರಣಿಯನ್ನು ಗೆದ್ದರೆ ನನಗೆ ಯಾವುದೆ ಆಶ್ಚರ್ಯವಾಗುವುದಿಲ್ಲ ಎಂದು ಹೇಳಿದರು.

ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ