ಹೃದಯ ಸಂಬಂಧಿ ಚಿಕಿತ್ಸೆಗಾಗಿ ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್

ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಲಾಗಿ ಮುರಳೀಧರನ್ ಅವರ ಹೃದಯದಲ್ಲಿ ತೊಂದರೆ ಎಂದು ವರದಿಯಾಗಿದೆ. ಹೀಗಾಗಿ ಅವರ ಹೃದಯದಲ್ಲಿ ಸ್ಟೆಂಟ್ ಹಾಕಲಾಗುತ್ತದೆ.

ಹೃದಯ ಸಂಬಂಧಿ ಚಿಕಿತ್ಸೆಗಾಗಿ ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್
ಮುತ್ತಯ್ಯ ಮುರಳೀಧರನ್

ಶ್ರೀಲಂಕಾದ ಹಿರಿಯ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಹೃದಯದ ಸಮಸ್ಯೆಯಿಂದ ಅವರನ್ನು ಚೆನ್ನೈನ ಅಪೊಲೊ ಆಸ್ಪತ್ರೆಗೆ ಸಾಗಿಸಲಾಗಿದೆ. ಅವರು ಪ್ರಸ್ತುತ ಚೆನ್ನೈನಲ್ಲಿ ಐಪಿಎಲ್ ತಂಡ ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಬೌಲಿಂಗ್ ಕೋಚ್ ಆಗಿದ್ದಾರೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಮುರಳೀಧರನ್ ಅವರನ್ನು ಏಪ್ರಿಲ್ 18 ರಂದು ಸಂಜೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಲಾಗಿ ಮುರಳೀಧರನ್ ಅವರ ಹೃದಯದಲ್ಲಿ ತೊಂದರೆ ಎಂದು ವರದಿಯಾಗಿದೆ. ಹೀಗಾಗಿ ಅವರ ಹೃದಯದಲ್ಲಿ ಸ್ಟೆಂಟ್ ಹಾಕಲಾಗುತ್ತದೆ. ಏಪ್ರಿಲ್ 17 ರಂದು ನಡೆದ ಹೈದರಾಬಾದ್ ಪಂದ್ಯದ ವೇಳೆ ಮುರಳೀಧರನ್ ಮೈದಾನದಲ್ಲಿದ್ದರು.

ಟೆಸ್ಟ್ ಕ್ರಿಕೆಟ್‌ನಲ್ಲಿ 800 ವಿಕೆಟ್ 49 ವರ್ಷದ ಮುರಳೀಧರನ್ ಕ್ರಿಕೆಟ್‌ನ ಅತ್ಯಂತ ಯಶಸ್ವಿ ಬೌಲರ್‌ಗಳಲ್ಲಿ ಒಬ್ಬರು. ಶ್ರೀಲಂಕಾ ಪರ 133 ಟೆಸ್ಟ್ ಮತ್ತು 350 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 800 ವಿಕೆಟ್ ಮತ್ತು ಏಕದಿನ ಪಂದ್ಯಗಳಲ್ಲಿ 534 ವಿಕೆಟ್ ಪಡೆದಿದ್ದಾರೆ. ಅವರು ವಿಶ್ವಕಪ್ ನಂತರ 2011 ರಲ್ಲಿ ಕ್ರಿಕೆಟ್‌ನಿಂದ ನಿವೃತ್ತರಾದರು. ಐಪಿಎಲ್‌ನಲ್ಲೂ ಆಡಿದ್ದಾರೆ. ಇಲ್ಲಿ ಅವರು ಚೆನ್ನೈ ಸೂಪರ್ ಕಿಂಗ್ಸ್, ಕೊಚ್ಚಿ ಟಸ್ಕರ್ಸ್ ಕೇರಳ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭಾಗವಾಗಿದ್ದಾರೆ. ಈ ಸಮಯದಲ್ಲಿ ಅವರು 66 ಪಂದ್ಯಗಳನ್ನು ಆಡಿದ್ದಾರೆ ಮತ್ತು 63 ವಿಕೆಟ್ ಪಡೆದರು. 11 ರನ್‌ಗಳಿಗೆ ಮೂರು ವಿಕೆಟ್‌ಗಳು ಅವರ ಅತ್ಯುತ್ತಮ ಪ್ರದರ್ಶನ. ನಿವೃತ್ತಿಯ ನಂತರ ಅವರು ಸನ್‌ರೈಸರ್ಸ್ ಹೈದರಾಬಾದ್‌ಗೆ ತರಬೇತುದಾರರಾಗಿ ಸೇರಿಕೊಂಡರು.

ಬೌಲಿಂಗ್​ ವಿವಾದದಲ್ಲಿ ಬಳಲಿದ್ದ ಮುರಳೀಧರನ್ ಮುರಳೀಧರನ್ ಬೌಲಿಂಗ್ ಕ್ರಿಯೆಯಿಂದಾಗಿ ತಮ್ಮ ವೃತ್ತಿಜೀವನದ ಅವಧಿಯಲ್ಲಿ ಸಾಕಷ್ಟು ವಿವಾದಗಳನ್ನು ಎದುರಿಸಿದ್ದರು. ಪರೀಕ್ಷೆಯಲ್ಲಿ ಕ್ಲೀನ್ ಚಿಟ್ ಪಡೆದಿದ್ದರೂ ಸಹ ಅವರ ಕ್ರಮವನ್ನು ಕಾನೂನುಬಾಹಿರವೆಂದು ಘೋಷಿಸಲಾಯಿತು. ಅವರು ತಮ್ಮ ವೃತ್ತಿಜೀವನದಲ್ಲಿ 1711 ದಿನಗಳ ಕಾಲ ಟೆಸ್ಟ್ ಬೌಲರ್ ರ್ಯಾಂಕಿಂಗ್​ನಲ್ಲಿ ನಂಬರ್ ಒನ್ ಆಗಿದ್ದರು. ಅವರು ತಮ್ಮ ವೃತ್ತಿಜೀವನದಲ್ಲಿ ಹಲವಾರು ಬೌಲಿಂಗ್ ವಿಶ್ವ ದಾಖಲೆಗಳನ್ನು ಮಾಡಿದರು. ಇವುಗಳಲ್ಲಿ ಹೆಚ್ಚು ವಿಕೆಟ್‌ಗಳನ್ನು ಗಳಿಸಿದ ದಾಖಲೆ ಮತ್ತು ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ (ಟೆಸ್ಟ್‌ನಲ್ಲಿ 10 ವಿಕೆಟ್‌ಗಳು) ದಾಖಲೆಯೂ ಸೇರಿವೆ.

Click on your DTH Provider to Add TV9 Kannada