AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಗೇಮ್ಸ್​ಗೆ ಅದ್ಧೂರಿ ಚಾಲನೆ; ಭಾರತದ ಧ್ವಜದಾರಿಗಳಾದ ಮನು, ಪವನ್

ನಗೋಯಾದಲ್ಲಿ 20ನೇ ಏಷ್ಯನ್ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 4 ರವರೆಗೆ ನಡೆಯುವ ಈ ಕ್ರೀಡಾಕೂಟದಲ್ಲಿ 45 ರಾಷ್ಟ್ರಗಳಿಂದ ಸುಮಾರು 11,000 ಕ್ರೀಡಾಪಟುಗಳು 43 ಸ್ಪರ್ಧೆಗಳಲ್ಲಿ 469 ಚಿನ್ನದ ಪದಕಗಳಿಗಾಗಿ ಸ್ಪರ್ಧಿಸಲಿದ್ದಾರೆ. ಭಾರತ 501 ಸದಸ್ಯರ ತಂಡದೊಂದಿಗೆ ಕಳೆದ ಬಾರಿಯ 106 ಪದಕಗಳ ಸಾಧನೆಯನ್ನು ಮೀರಿಸುವ ಗುರಿ ಹೊಂದಿದೆ. ಮಹಿಳಾ ಕ್ರಿಕೆಟ್ ಈಗಾಗಲೇ ಸೆಮಿಫೈನಲ್ ತಲುಪಿದೆ.

ಏಷ್ಯನ್ ಗೇಮ್ಸ್​ಗೆ ಅದ್ಧೂರಿ ಚಾಲನೆ; ಭಾರತದ ಧ್ವಜದಾರಿಗಳಾದ ಮನು, ಪವನ್
ಏಷ್ಯನ್ ಗೇಮ್ಸ್​ಗೆ ಚಾಲನೆ
ಪೃಥ್ವಿಶಂಕರ
|

Updated on: Sep 19, 2026 | 9:00 PM

Share

20 ನೇ ಆವೃತ್ತಿಯ ಏಷ್ಯನ್ ಕ್ರೀಡಾಕೂಟಕ್ಕೆ ಸೆಪ್ಟೆಂಬರ್ 19 ರಿಂದ ಅಂದರೆ ಇಂದಿನಿಂದ ನಗೋಯಾದ ಮಿಜುಹೊ ಪಾರ್ಕ್ ಅಥ್ಲೆಟಿಕ್ ಕ್ರೀಡಾಂಗಣದಲ್ಲಿ ನಡೆದ ವರ್ಣರಂಜಿತ ಉದ್ಘಾಟನಾ ಸಮಾರಂಭದೊಂದಿಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಜಪಾನ್‌ನ ಚಕ್ರವರ್ತಿ ನರುಹಿಟೊ ಕುಟುಂಬದ ಸದಸ್ಯರು, ಏಷ್ಯಾ ಒಲಿಂಪಿಕ್ ಮಂಡಳಿಯ ಅಧ್ಯಕ್ಷ ಶೇಖ್ ಜೋವಾನ್ ಬಿನ್ ಹಮದ್ ಅಲ್ ಥಾನಿ ಮತ್ತು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಅವರ ಸಮ್ಮುಖದಲ್ಲಿ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಜಪಾನ್‌ನ ರಾಷ್ಟ್ರಗೀತೆ ನುಡಿಸುವಿಕೆಯೊಂದಿಗೆ ಪ್ರಾರಂಭವಾದ ಸುಂದರ ಮತ್ತು ವರ್ಣಮಯ ಉದ್ಘಾಟನಾ ಸಮಾರಂಭವು ನಗೋಯಾ ನಗರದ ಮಿಜುಹೋ ಪಾರ್ಕ್ ಅಥ್ಲೆಟಿಕ್ ಕ್ರೀಡಾಂಗಣದಲ್ಲಿ ಸುಮಾರು ಎರಡು ಗಂಟೆಗಳ ಕಾಲ ನಡೆಯಿತು. ಈ ಉದ್ಘಾಟನ ಸಮಾರಂಭದ ಮೆರವಣಿಗೆಯಲ್ಲಿ ಒಟ್ಟು 46 ತಂಡಗಳು ಭಾಗವಹಿಸಿದ್ದವು. ಕ್ರೀಡಾಪಟುಗಳ ಮೆರವಣಿಗೆ ಅಫ್ಘಾನಿಸ್ತಾನ ತಂಡದೊಂದಿಗೆ ಪ್ರಾರಂಭವಾಯಿತು. ಒಲಿಂಪಿಕ್ಸ್ ಪದಕ ವಿಜೇತ ಭಾರತೀಯ ಶೂಟರ್ ಮನು ಭಾಕರ್ ಮತ್ತು ಕಬಡ್ಡಿ ಆಟಗಾರ ಪವನ್ ಸೆಹ್ರಾವತ್ ಮೆರವಣಿಗೆಯಲ್ಲಿ ಭಾರತೀಯ ತಂಡವನ್ನು ಮುನ್ನಡೆಸಿದರು. ಇಬ್ಬರೂ ಸಾಂಪ್ರದಾಯಿಕ ನೌಕಾ ನೀಲಿ ಉಡುಪನ್ನು ಧರಿಸಿದ್ದರು.

ತಜಿಂದರ್‌ಪಾಲ್​ಗೆ ಕೈತಪ್ಪಿದ ಅವಕಾಶ

ಶಾಟ್ ಪುಟ್ ಪಟು ತಜಿಂದರ್‌ಪಾಲ್ ಸಿಂಗ್ ತೂರ್‌ಗೆ ಸಮಯಕ್ಕೆ ಸರಿಯಾಗಿ ಕಿಟ್ ಸಿಗದ ಕಾರಣ ಸೆಹ್ರಾವತ್ ಅವರನ್ನು ಧ್ವಜಧಾರಿಯಾಗಿ ನೇಮಿಸಲಾಯಿತು. ಭಾರತದ 501 ಸದಸ್ಯರ ತಂಡವು 2023 ರ ಹ್ಯಾಂಗ್‌ಝೌ ಏಷ್ಯನ್ ಕ್ರೀಡಾಕೂಟದಲ್ಲಿ ತನ್ನ ಅತ್ಯುತ್ತಮ ಪ್ರದರ್ಶನವನ್ನು ಪುನರಾವರ್ತಿಸುವ ಗುರಿಯನ್ನು ಹೊಂದಿದೆ. ಕಳೆದ ಆವೃತ್ತಿಯಲ್ಲಿ ಭಾರತ 28 ಚಿನ್ನ ಸೇರಿದಂತೆ ಒಟ್ಟು 106 ಪದಕಗಳನ್ನು ಗೆದ್ದು ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿತ್ತು.

ಕೆಲವು ಈವೆಂಟ್‌ಗಳು ಈಗಾಗಲೇ ಪ್ರಾರಂಭ

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲವು ಈವೆಂಟ್‌ಗಳು ಪ್ರಾರಂಭವಾಗಿವೆ. ಮಹಿಳಾ ಕ್ರಿಕೆಟ್‌ನಲ್ಲಿ, ಹರ್ಮನ್ಪ್ರೀತ್ ಕೌರ್ ನೇತೃತ್ವದ ಭಾರತೀಯ ತಂಡವು ಶುಕ್ರವಾರ ಆತಿಥೇಯ ಜಪಾನ್ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿ ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ. ಏಷ್ಯನ್ ಕ್ರೀಡಾಕೂಟದಲ್ಲಿ ಪಾದಾರ್ಪಣೆ ಮಾಡುತ್ತಿರುವ ಟ್ಯಾಗ್‌ಬಾಲ್‌ನಲ್ಲೂ ಭಾರತ ಪದಕಕ್ಕಾಗಿ ಪೈಪೋಟಿಯಲ್ಲಿದೆ. ಶನಿವಾರ ನಡೆದ ಮಹಿಳಾ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ಸೋತ ಕ್ವಿಮ್ಸಿ ಡಿ’ಸೋಜಾ ಈಗ ಕಂಚಿನ ಪದಕಕ್ಕಾಗಿ ಸ್ಪರ್ಧಿಸಲಿದ್ದಾರೆ.

ಏಷ್ಯನ್ ಗೇಮ್ಸ್​ಗೆ ಟೀಂ ಇಂಡಿಯಾದಲ್ಲಿ 1 ಬದಲಾವಣೆ

43 ಸ್ಪರ್ಧೆಗಳಲ್ಲಿ 469 ಚಿನ್ನದ ಪದಕಗಳು

ಏಷ್ಯನ್ ಕ್ರೀಡಾಕೂಟ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 4 ರವರೆಗೆ ನಡೆಯಲಿದೆ. ನಾಗೋಯಾ ನಗರದ ಮಿಜುಹೊ ಪಾರ್ಕ್ ಅಥ್ಲೆಟಿಕ್ ಕ್ರೀಡಾಂಗಣವು ಉದ್ಘಾಟನಾ ಮತ್ತು ಸಮಾರೋಪ ಸಮಾರಂಭಗಳನ್ನು ಆಯೋಜಿಸಲಿದೆ. ಈ ವರ್ಷ, 45 ದೇಶಗಳಿಂದ ಸುಮಾರು 11,000 ಕ್ರೀಡಾಪಟುಗಳು ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. 43 ಸ್ಪರ್ಧೆಗಳಲ್ಲಿ 469 ಚಿನ್ನದ ಪದಕಗಳಿಗಾಗಿ ಕ್ರೀಡಾಪಟುಗಳು ಸ್ಪರ್ಧಿಸಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ