ನಿಮಿಷಗಳ ಅಂತರದಲ್ಲಿ 3 ಪ್ರಮುಖ ಹುದ್ದೆಗಳಿಗೆ ರಾಜೀನಾಮೆ ನೀಡಿದ ನರಿಂದರ್ ಬಾತ್ರಾ

2016 ರಲ್ಲಿ ಅಂತರಾಷ್ಟ್ರೀಯ ಹಾಕಿ ಫೆಡರೇಶನ್ (ಎಫ್‌ಐಹೆಚ್) ಮುಖ್ಯಸ್ಥರಾಗಿದ್ದ ಬಾತ್ರಾ ಕಳೆದ ವರ್ಷ ಎರಡನೇ ಅವಧಿಗೆ ಆಯ್ಕೆಯಾಗಿದ್ದರು.

ನಿಮಿಷಗಳ ಅಂತರದಲ್ಲಿ 3 ಪ್ರಮುಖ ಹುದ್ದೆಗಳಿಗೆ ರಾಜೀನಾಮೆ ನೀಡಿದ ನರಿಂದರ್ ಬಾತ್ರಾ
Narinder Batra
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jul 18, 2022 | 1:54 PM

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(ಐಒಎ) ಅಧ್ಯಕ್ಷ ನರಿಂದರ್ ಬಾತ್ರಾ (Narinder Batra) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಐಒಎಗೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ 65 ವರ್ಷದ ಬಾತ್ರಾ ಅವರು ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಕೌನ್ಸಿಲ್ ಸದಸ್ಯ ಸ್ಥಾನದಿಂದಲೂ ಕೆಳಗಿಳಿದಿದ್ದಾರೆ. ಇದಾಗಿ ಸ್ವಲ್ಪ ಹೊತ್ತಿನಲ್ಲೇ ಅಂತರರಾಷ್ಟ್ರೀಯ ಹಾಕಿ ಫೆಡರೇಶನ್ (ಎಫ್‌ಐಹೆಚ್) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ. ಅಂದರೆ ನಿಮಿಷಗಳ ಅಂತರದಲ್ಲಿ ನರಿಂದರ್ ಬಾತ್ರಾ ಕ್ರೀಡಾ ಕ್ಷೇತ್ರದ ಮೂರು ಪ್ರಮುಖ ಸ್ಥಾನಗಳಿಂದ ಕೆಳಗಿಳಿದಿದ್ದಾರೆ.

ವೈಯಕ್ತಿಕ ಕಾರಣಗಳಿಂದಾಗಿ, ನಾನು 2017 ರಲ್ಲಿ ಆಯ್ಕೆಯಾದ ಅಧ್ಯಕ್ಷ ಸ್ಥಾನಕ್ಕೆ ನನ್ನ ರಾಜೀನಾಮೆಯನ್ನು ಸಲ್ಲಿಸುತ್ತೇನೆ. ನಿಮ್ಮ ಬೆಂಬಲ ಮತ್ತು ಮಾರ್ಗದರ್ಶನಕ್ಕಾಗಿ ಧನ್ಯವಾದಗಳು ಎಂದು ರಾಜೀನಾಮೆ ಪತ್ರದಲ್ಲಿ ಬಾತ್ರಾ ಉಲ್ಲೇಖಿಸಿದ್ದಾರೆ. ಇದಾಗ್ಯೂ ಏಕಾಏಕಿ ಮೂರು ಪ್ರಮುಖ ಹುದ್ದೆಗಳಿಂದ ಕೆಳಗಿಳಿಯಲು ಅಸಲಿ ಕಾರಣವೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಕಳೆದ ಕೆಲ ತಿಂಗಳಿಂದ ಭಾರತೀಯ ಒಲಿಂಪಿಕ್ ಅಸೋಸಿಯೇಷನ್​ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳು.

ಏಕೆಂದರೆ ಕಳೆದ ತಿಂಗಳಷ್ಟೇ​ ನರೀಂದರ್ ಬಾತ್ರಾ ಅವರಿಗೆ ಭಾರತೀಯ ಒಲಿಂಪಿಕ್ ಅಸೋಸಿಯೇಷನ್​ ನಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸದಂತೆ ದೆಹಲಿ ಹೈಕೋರ್ಟ್ ಸೂಚಿಸಿತ್ತು. ಅಲ್ಲದೆ ತಮ್ಮ ಉನ್ನತ ಹುದ್ದೆಯನ್ನು ತ್ಯಜಿಸುವಂತೆ ಆದೇಶಿಸಲಾಗಿತ್ತು. ಇದಾಗ್ಯೂ ಬಾತ್ರಾ ತಮ್ಮ ಸ್ಥಾನದಲ್ಲೇ ಮುಂದುವರೆದಿದ್ದರು.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
Image
Steve Smith: ಬರೋಬ್ಬರಿ 30 ಕೋಟಿ ಲಾಭ ಪಡೆದ ಸ್ಟೀವ್ ಸ್ಮಿತ್..!
Image
Cricket Records: ಕ್ರಿಕೆಟ್ ಇತಿಹಾಸದ ಈ ಅದ್ಭುತ ದಾಖಲೆಗಳನ್ನು ಎಂದಿಗೂ ಮುರಿಯಲಾಗುವುದಿಲ್ಲ!
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!

2016 ರಲ್ಲಿ ಅಂತರಾಷ್ಟ್ರೀಯ ಹಾಕಿ ಫೆಡರೇಶನ್ (ಎಫ್‌ಐಹೆಚ್) ಮುಖ್ಯಸ್ಥರಾಗಿದ್ದ ಬಾತ್ರಾ ಕಳೆದ ವರ್ಷ ಎರಡನೇ ಅವಧಿಗೆ ಆಯ್ಕೆಯಾಗಿದ್ದರು. ಆದರೆ ಪ್ರಮುಖ ಹುದ್ದೆಗೇರಲು ಬಾತ್ರಾ ಚುನಾವಣೆಯಲ್ಲಿ ಅಕ್ರಮಗಳು ಮತ್ತು ಸುಳ್ಳು ಆಶ್ವಾಸನೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಹಾಗೆಯೇ ಹಾಕಿ ಇಂಡಿಯಾದ ಫಂಡ್​ನಿಂದ 35 ಲಕ್ಷ ರೂ. ಅನ್ನು ಬಾತ್ರಾ  ವೈಯಕ್ತಿಕ ಪ್ರಯೋಜನಗಳಿಗಾಗಿ ಖರ್ಚು ಮಾಡಿದ್ದಾರೆ ಎಂಬ ಆರೋಪವಿದೆ. ಹೀಗಾಗಿ ಅವರ ಪದಚ್ಯುತಿಗೆ ಕೆಲ ಸದಸ್ಯರು ಕೂಡ ಆಗ್ರಹಿಸಿದ್ದರು. ಇದಾಗ್ಯೂ ಬಾತ್ರಾ ಅವರು ತಮ್ಮ ಸ್ಥಾನದಿಂದ ಕೆಳಗಿಳಿಯಲು ಮುಂದಾಗಿರಲಿಲ್ಲ.

ಹೀಗಾಗಿ ಒಲಿಂಪಿಕ್ ಅಸೋಸಿಯೇಷನ್ ಹಾಗೂ ಹಾಕಿ ಫೆಡರೇಷನ್​ನ ಕೆಲ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು. ಒಲಿಂಪಿಯನ್ ಮತ್ತು ಹಾಕಿ ವಿಶ್ವಕಪ್ ವಿಜೇತ ತಂಡದ ಆಟಗಾರ ಅಸ್ಲಾಂ ಶೇರ್ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಕಳೆದ ತಿಂಗಳು ಬಾತ್ರಾ ಅವರಿಗೆ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸದಂತೆ ಸೂಚಿಸಿತ್ತು. ಅಲ್ಲದೆ 65 ವರ್ಷದ ಬಾತ್ರಾ ಅವರ ಲೈಫ್ ಮೆಂಬರ್ ಹುದ್ದೆಯನ್ನು ಸಹ ದೆಹಲಿ ಹೈಕೋರ್ಟ್ ರದ್ದುಗೊಳಿಸಿತ್ತು.

ಅಂದರೆ ಲೈಫ್ ಟೈಮ್ ಮೆಂಬರ್ ಆಯ್ಕೆಯ ಮೂಲಕ 65ನೇ ವಯಸ್ಸಿನಲ್ಲೂ ಕ್ರೀಡಾ ಕ್ಷೇತ್ರದ ಪ್ರಮುಖ ಹುದ್ದೆಯಲ್ಲಿ ಮುಂದುವರೆಯಲು ಬಾತ್ರಾ ಬಯಸಿದ್ದರು ಎನ್ನಲಾಗಿದೆ. ಆದರೆ ಇತ್ತ ಹೈಕೋರ್ಟ್ ತೀರ್ಪು ನರಿಂದರ್​ ಬಾತ್ರಾ ವಿರುದ್ದ ಬಂದ ಹಿನ್ನೆಲೆಯಲ್ಲಿ ಇದೀಗ ಮೂರು ಪ್ರತ್ಯೇಕ ಪತ್ರಗಳ ಮೂಲಕ ಕ್ರಮವಾಗಿ IOA, IOC ಮತ್ತು FIH ನ ಹುದ್ದೆಗಳಿಗೆ  ರಾಜೀನಾಮೆ ಸಲ್ಲಿಸಿದ್ದಾರೆ.

Published On - 1:44 pm, Mon, 18 July 22

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ