AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಗೇಮ್ಸ್‌ನಿಂದ ನೀರಜ್ ಚೋಪ್ರಾ ಔಟ್!

Neeraj Chopra: 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕದ ಬಹುದೊಡ್ಡ ಭರವಸೆಯಾಗಿದ್ದ ಹಾಲಿ ಚಾಂಪಿಯನ್‌ ನೀರಜ್ ಚೋಪ್ರಾ ಕ್ರೀಡಾಕೂಟ ಆರಂಭಕ್ಕೂ ಮುನ್ನವೇ ಹೊರಬಿದ್ದಿದ್ದಾರೆ. ಸತತ ಯಶಸ್ಸಿನ ಹಾದಿಯಲ್ಲಿದ್ದ ಚಾಂಪಿಯನ್ ಅಥ್ಲೀಟ್ ಗಾಯದ ಕಾರಣ ಅನಿವಾರ್ಯವಾಗಿ ಕಣದಿಂದ ದೂರ ಸರಿಯುವಂತಾಗಿದೆ. ಹೀಗಾಗಿ ಈ ಬಾರಿಯ ಏಷ್ಯನ್ ಗೇಮ್ಸ್​ನಲ್ಲಿ ನೀರಜ್ ಚೋಪ್ರಾ ಕಾಣಿಸಿಕೊಳ್ಳುವುದಿಲ್ಲ.

ಏಷ್ಯನ್ ಗೇಮ್ಸ್‌ನಿಂದ ನೀರಜ್ ಚೋಪ್ರಾ ಔಟ್!
Neeraj Chopra
ಝಾಹಿರ್ ಯೂಸುಫ್
|

Updated on:Aug 30, 2026 | 8:10 AM

Share

ಭಾರತದ ಹೆಮ್ಮೆಯ ಜಾವೆಲಿನ್ ತಾರೆ, ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಗಾಯದ ಸಮಸ್ಯೆಯಿಂದಾಗಿ 2026ರ ಏಷ್ಯನ್ ಗೇಮ್ಸ್ ಸೇರಿದಂತೆ ಮುಂಬರುವ ಎಲ್ಲಾ ಪ್ರಮುಖ ಕ್ರೀಡಾಕೂಟಗಳಿಂದ ಅಧಿಕೃತವಾಗಿ ಹೊರಬಿದ್ದಿದ್ದಾರೆ. ಇತ್ತೀಚೆಗಷ್ಟೇ ಲೌಸೇನ್ ಡೈಮಂಡ್ ಲೀಗ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದ ನೀರಜ್, ತರಬೇತಿ ಅವಧಿಯಲ್ಲಿ ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ಈ ಗಾಯದ ಕಾರಣ ಇದೀಗ ಏಷ್ಯನ್ ಗೇಮ್ಸ್​ನಿಂದ ಹೊರಗುಳಿಯುವ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ.

ಕಣಕಾಲಿಗೆ ಗಾಯ!

ಇತ್ತೀಚೆಗಷ್ಟೇ ಲೌಸೇನ್ ಡೈಮಂಡ್ ಲೀಗ್‌ನಲ್ಲಿ 88.05 ಮೀಟರ್ ದೂರ ಜಾವೆಲಿನ್ ಎಸೆದು ಈ ಸೀಸನ್‌ನ ಅತ್ಯುತ್ತಮ ಪ್ರದರ್ಶನ ನೀಡಿದ್ದ ನೀರಜ್ ಚೋಪ್ರಾ, ತದನಂತರದ ತರಬೇತಿ ಅವಧಿಯಲ್ಲಿ ತೀವ್ರ ಕಣಕಾಲು ಗಾಯಕ್ಕೆ ಒಳಗಾಗಿದ್ದಾರೆ. ವೈದ್ಯರ ಸಲಹೆಯ ಮೇರೆಗೆ ಅವರು ಸಂಪೂರ್ಣ ವಿಶ್ರಾಂತಿ ಮತ್ತು ಚಿಕಿತ್ಸೆಗೆ ಒಳಗಾಗಬೇಕಾಗಿರುವುದರಿಂದ, 2026ರ ಅಥ್ಲೆಟಿಕ್ಸ್ ಸೀಸನ್‌ನಿಂದ ಸಂಪೂರ್ಣವಾಗಿ ಹೊರಗುಳಿಯಲು ನಿರ್ಧರಿಸಿದ್ದಾರೆ.

ಪ್ರಮುಖ ಕ್ರೀಡಾಕೂಟಗಳಿಗೆ ಅಲಭ್ಯ!

ಏಷ್ಯನ್ ಗೇಮ್ಸ್​ನಲ್ಲಿ ಹಾಲಿ ಚಾಂಪಿಯನ್ ಆಗಿದ್ದ ನೀರಜ್ ಚೋಪ್ರಾ ಅವರ ಅನುಪಸ್ಥಿತಿಯಿಂದಾಗಿ ಭಾರತಕ್ಕೆ ಜಾವೆಲಿನ್‌ನಲ್ಲಿ ದೊಡ್ಡ ಹಿನ್ನಡೆಯಾಗಿದೆ. ಈ ಗಾಯದಿಂದಾಗಿ ಅವರು ಈ ಕೆಳಗಿನ ಪ್ರಮುಖ ಟೂರ್ನಿಗಳಿಂದ ಹೊರಗುಳಿಯಲಿದ್ದಾರೆ.

  • ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ 2026ರ ಏಷ್ಯನ್ ಗೇಮ್ಸ್.
  • ಬ್ರಸೆಲ್ಸ್‌ನಲ್ಲಿ ನಡೆಯಲಿರುವ ಡೈಮಂಡ್ ಲೀಗ್ ಫೈನಲ್.
  • ಬುಡಾಪೆಸ್ಟ್‌ನಲ್ಲಿ ಚೊಚ್ಚಲ ಬಾರಿಗೆ ಆಯೋಜನೆಯಾಗಿರುವ ವರ್ಲ್ಡ್ ಅಥ್ಲೆಟಿಕ್ಸ್ ಅಲ್ಟಿಮೇಟ್ ಚಾಂಪಿಯನ್‌ಶಿಪ್.

“ಮತ್ತೆ ಬಲಿಷ್ಠವಾಗಿ ಮರಳುವೆ”

ತಮ್ಮ ಗಾಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬೇಸರ ಹಂಚಿಕೊಂಡಿರುವ 28 ವರ್ಷದ ನೀರಜ್ ಚೋಪ್ರಾ, “ಪ್ರಮುಖ ಕ್ರೀಡಾಕೂಟಗಳು ಹತ್ತಿರವಿರುವಾಗ ಹೀಗಾಗಿರುವುದು ನಿಜಕ್ಕೂ ನಿರಾಶಾದಾಯಕ. ಆದರೆ ಸದ್ಯಕ್ಕೆ ಸಂಪೂರ್ಣ ಚೇತರಿಕೆಯತ್ತ ಗಮನಹರಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಮುಂದಿನ ಸೀಸನ್‌ನಲ್ಲಿ ಮತ್ತಷ್ಟು ಬಲಿಷ್ಠವಾಗಿ ಕಣಕ್ಕೆ ಮರಳುವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಟೀಮ್ ಇಂಡಿಯಾದ ಏಷ್ಯಾಕಪ್ ಅಭಿಯಾನ ಶುರು

ನೀರಜ್ ಅಲಭ್ಯತೆಯಲ್ಲಿ ಈಗ ಭಾರತದ ಜಾವೆಲಿನ್ ಸವಾಲನ್ನು ಮುನ್ನಡೆಸುವ ಪ್ರಮುಖ ಜವಾಬ್ದಾರಿ ರೋಹಿತ್ ಯಾದವ್ ಅವರ ಮೇಲಿದೆ. ಭರ್ಜರಿ ಫಾರ್ಮ್​ನಲ್ಲಿರುವ ರೋಹಿತ್ ಯಾದವ್, ಇತ್ತೀಚಿನ ಸರಣಿಯಲ್ಲಿ 87.68 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ತಮ್ಮ ವೈಯಕ್ತಿಕ ಶ್ರೇಷ್ಠ  ಪ್ರದರ್ಶನ ನೀಡಿದ್ದಾರೆ. ಈ ಸಾಧನೆಯೊಂದಿಗೆ ಅವರು ಭಾರತದ ಸಾರ್ವಕಾಲಿಕ ಎರಡನೇ ಅತ್ಯುತ್ತಮ ಜಾವೆಲಿನ್ ಎಸೆತಗಾರನಾಗಿ ಹೊರಹೊಮ್ಮಿದ್ದು, ಪ್ರಸಕ್ತ ಸೀಸನ್‌ನಲ್ಲಿ ಏಷ್ಯಾದಲ್ಲೇ 3ನೇ ಅತ್ಯುತ್ತಮ ಪ್ರದರ್ಶನ ಇವರದ್ದಾಗಿದೆ. ಹೀಗಾಗಿ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಪದಕ ತಂದುಕೊಡುವ ದೊಡ್ಡ ಭರವಸೆಯಾಗಿ ರೋಹಿತ್ ಯಾದವ್ ಕಾಣಿಸಿಕೊಂಡಿದ್ದಾರೆ.

Published On - 8:09 am, Sun, 30 August 26

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ
ಹಬ್ಬ ಹಿನ್ನೆಲೆ ಕೆ. ಆರ್ ಮಾರ್ಕೆಟ್​ನಲ್ಲಿ ಖರೀದಿ ಭರಾಟೆ ಜೋರು!
ಹಬ್ಬ ಹಿನ್ನೆಲೆ ಕೆ. ಆರ್ ಮಾರ್ಕೆಟ್​ನಲ್ಲಿ ಖರೀದಿ ಭರಾಟೆ ಜೋರು!