AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

Neeraj Chopra: ವರ್ಲ್ಡ್​ ಚಾಂಪಿಯನ್​ಶಿಪ್​ನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು. ಇದರ ಬೆನ್ನಲ್ಲೇ ನಡೆದ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಇದೀಗ ಏಷ್ಯನ್ ಗೇಮ್ಸ್​ ಮೂಲಕ ಮತ್ತೊಮ್ಮೆ ಬಂಗಾರಕ್ಕೆ ಪದಕಕ್ಕೆ ಕೊರೊಳೊಡ್ಡಿರುವುದು ವಿಶೇಷ.

ಏಷ್ಯನ್ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ
Neeraj Chopra
TV9 Web
| Edited By: |

Updated on:Oct 04, 2023 | 6:49 PM

Share

ಚೀನಾದ ಹ್ಯಾಂಗ್​ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಈ ಮೂಲಕ ಸತತ 2ನೇ ಬಾರಿ ಏಷ್ಯನ್ ಗೇಮ್ಸ್​ನಲ್ಲಿ ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಈ ಹಿಂದೆ 2018 ರ ಏಷ್ಯನ್ ಗೇಮ್ಸ್​ನಲ್ಲಿ ನೀರಜ್ ಬಂಗಾರದ ಪದಕಕ್ಕೆ ಮುತ್ತಿಕ್ಕಿದ್ದರು. ಇದೀಗ ಮತ್ತೊಮ್ಮೆ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ.

ಬುಧವಾರ ನಡೆದ ಏಷ್ಯನ್ ಗೇಮ್ಸ್​ ಜಾವೆಲಿನ್ ಫೈನಲ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಬರೋಬ್ಬರಿ 88.88 ಮೀಟರ್ ದೂರಕ್ಕೆ ಭರ್ಜಿ ಎಸೆಯುವ ಮೂಲಕ ಮೊದಲ ಸ್ಥಾನ ಅಲಂಕರಿಸಿದರು. ವಿಶೇಷ ಎಂದರೆ ಭಾರತದವರೇ ಆದ ಕಿಶೋರ್​ ಜೆನ್ನಾ 87.54 ಮೀಟರ್​ ದೂರಕ್ಕೆ ಜಾವೆಲಿನ್ ಎಸೆದು ದ್ವಿತೀಯ ಸ್ಥಾನ ಪಡೆದರು. ಈ ಮೂಲಕ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಹಾಗೂ ಕಿಶೋರ್ ಜೆನ್ನಾ ಭಾರತಕ್ಕೆ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ತಂದುಕೊಟ್ಟಿದ್ದಾರೆ.

ಇತ್ತೀಚೆಗಷ್ಟೇ ನಡೆದ ವರ್ಲ್ಡ್​ ಚಾಂಪಿಯನ್​ಶಿಪ್​ನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು. ಇದರ ಬೆನ್ನಲ್ಲೇ ನಡೆದ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಇದೀಗ ಏಷ್ಯನ್ ಗೇಮ್ಸ್​ ಮೂಲಕ ಮತ್ತೊಮ್ಮೆ ಬಂಗಾರಕ್ಕೆ ಪದಕಕ್ಕೆ ಕೊರೊಳೊಡ್ಡಿರುವುದು ವಿಶೇಷ.

ರಿಲೇನಲ್ಲೂ ಚಿನ್ನ ಓಟ: ಪುರುಷರ 4×400 ಮೀ ರಿಲೇಯಲ್ಲಿ ಭಾರತೀಯರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಅಮೋಜ್ ಜೇಕಬ್, ಮುಹಮ್ಮದ್ ಅನಸ್ ಯಾಹಿಯಾ, ರಾಜೇಶ್ ರಮೇಶ್ ಮತ್ತು ಮುಹಮ್ಮದ್ ಅಜ್ಮಲ್ ಅವರನ್ನೊಳಗೊಂಡ ಭಾರತ ತಂಡವು 3:01.58 ನಿಮಿಷದಲ್ಲಿ ಗುರಿ ಮುಟ್ಟುವ ಮೂಲಕ ಬಂಗಾರದ ಪದಕ ಗೆದ್ದುಕೊಂಡರು.

ರಿಲೇನಲ್ಲೂ ಚಿನ್ನ ಓಟ:

ಪುರುಷರ 4×400 ಮೀ ರಿಲೇಯಲ್ಲಿ ಭಾರತೀಯರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಅಮೋಜ್ ಜೇಕಬ್, ಮುಹಮ್ಮದ್ ಅನಸ್ ಯಾಹಿಯಾ, ರಾಜೇಶ್ ರಮೇಶ್ ಮತ್ತು ಮುಹಮ್ಮದ್ ಅಜ್ಮಲ್ ಅವರನ್ನೊಳಗೊಂಡ ಭಾರತ ತಂಡವು 3:01.58 ನಿಮಿಷದಲ್ಲಿ ಗುರಿ ಮುಟ್ಟುವ ಮೂಲಕ ಬಂಗಾರದ ಪದಕ ಗೆದ್ದುಕೊಂಡರು.

Published On - 6:30 pm, Wed, 4 October 23

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​