ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ ಎಂಬುದನ್ನು ಊಹಿಸಲಾಗುತ್ತಿಲ್ಲ.. ಬಡ ಜನರಿಗೆ ನನ್ನ ನೆರವು; ಹನುಮಾ ವಿಹಾರಿ

ನಾನು ನನ್ನನ್ನು ಹೊಗಳಿಕೊಳಲ್ಲು ಬಯಸುವುದಿಲ್ಲ. ಈ ಕಷ್ಟದ ಸಮಯದಲ್ಲಿ ಸಾಧ್ಯವಿರುವ ಎಲ್ಲ ಸಹಾಯದ ಅಗತ್ಯವಿರುವ ಬಡ ಜನರಿಗೆ ಸಹಾಯ ಮಾಡಲು ನಾನು ಈ ಕೆಲಸವನ್ನು ಮಾಡುತ್ತಿದ್ದೇನೆ.

ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ ಎಂಬುದನ್ನು ಊಹಿಸಲಾಗುತ್ತಿಲ್ಲ.. ಬಡ ಜನರಿಗೆ ನನ್ನ ನೆರವು; ಹನುಮಾ ವಿಹಾರಿ
ಹನುಮಾ ವಿಹಾರಿ
Follow us
ಪೃಥ್ವಿಶಂಕರ
|

Updated on: May 14, 2021 | 7:38 PM

ಕೊರೊನಾ ವೈರಸ್​ನ ಎರಡನೇ ಅಲೆಯಿಂದ ಭಾರತ ಸಂಪೂರ್ಣವಾಗಿ ನಲುಗಿ ಹೋಗಿದೆ. ಈ ಸಾಂಕ್ರಾಮಿಕ ರೋಗದಿಂದ ಪ್ರತಿದಿನ ಹಲವಾರು ಸಾವಿರ ಜನರು ಸೋಂಕಿಗೆ ಒಳಗಾಗುತ್ತಿದ್ದಾರೆ. ಅಗತ್ಯ ಔಷಧಿಗಳು ಮತ್ತು ಆಮ್ಲಜನಕದ ಕೊರತೆಯಿಂದ ಈ ಬಿಕ್ಕಟ್ಟು ಉಲ್ಬಣಗೊಂಡಿದೆ. ಈ ಕಾರಣದಿಂದಾಗಿ, ಪ್ರತಿದಿನ ಸಾವಿರಾರು ಜನರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಏತನ್ಮಧ್ಯೆ, ಜನರಿಗೆ ಸಹಾಯ ಮಾಡಲು ಅನೇಕ ಜನರು ಮುಂದೆ ಬಂದಿದ್ದಾರೆ. ಕ್ರೀಡಾ ಜಗತ್ತಿನಲ್ಲಿ ಹಲವಾರು ಆಟಗಾರರು ತಮ್ಮ ಸಾಮಥ್ರ್ಯಕ್ಕೆ ತಕ್ಕಂತೆ ಸಹಾಯ ಮಾಡುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ. ಭಾರತದ ಬ್ಯಾಟ್ಸ್‌ಮನ್ ಹನುಮಾ ವಿಹಾರಿ ಕೂಡ ಅವರಲ್ಲಿ ಒಬ್ಬರು ವಿಹಾರಿ ಬಡ ಜನರಿಗೆ ಸಹಾಯ ಮಾಡುತ್ತಿದ್ದಾರೆ.

ಇಂಗ್ಲಿಷ್ ಕೌಂಟಿ ವಾರ್ವಿಕ್‌ಷೈರ್ ಪರ ಆಡಲು ವಿಹಾರಿ ಏಪ್ರಿಲ್ ಆರಂಭದಲ್ಲಿ ಇಂಗ್ಲೆಂಡ್‌ಗೆ ತೆರಳಿದ್ದರು. ಅದೇ ಸಮಯದಲ್ಲಿ, ಭಾರತದಲ್ಲಿ ಕೊರೊನಾ ಪ್ರಕರಣಗಳು ಸಹ ಕ್ರಮೇಣ ಹೆಚ್ಚಾಗಲು ಪ್ರಾರಂಭಿಸಿದವು. ಹನುಮಾ ವಿಹಾರಿ ತನ್ನ ಟ್ವಿಟ್ಟರ್ ಹ್ಯಾಂಡಲ್ ಸಹಾಯದಿಂದ 100 ಸ್ವಯಂಸೇವಕರ ತಂಡವನ್ನು ಸಿದ್ಧಪಡಿಸಿದ್ದಾರೆ. ಇವರಲ್ಲಿ ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ಸ್ನೇಹಿತರು ಸೇರಿದ್ದಾರೆ. ನಾನು ನನ್ನನ್ನು ಹೊಗಳಿಕೊಳಲ್ಲು ಬಯಸುವುದಿಲ್ಲ. ಈ ಕಷ್ಟದ ಸಮಯದಲ್ಲಿ ಸಾಧ್ಯವಿರುವ ಎಲ್ಲ ಸಹಾಯದ ಅಗತ್ಯವಿರುವ ಬಡ ಜನರಿಗೆ ಸಹಾಯ ಮಾಡಲು ನಾನು ಈ ಕೆಲಸವನ್ನು ಮಾಡುತ್ತಿದ್ದೇನೆ. ಇದು ಪ್ರಾರಂಭ ಮಾತ್ರ ಎಂದು ವಿಹಾರಿ ಹೇಳಿದ್ದಾರೆ.

ದೇಶದ ಪರಿಸ್ಥಿತಿಯಿಂದ ಆಘಾತಕ್ಕೊಳಗಾಗಿದ್ದೇನೆ ಕೊರೊನಾದ ಎರಡನೇ ಅಲೆಯಲ್ಲಿ, ಜನರು ಆಸ್ಪತ್ರೆಯಲ್ಲಿ ಹಾಸಿಗೆ ಪಡೆಯಲು ಕಷ್ಟವಾಗುತ್ತಿದೆ. ಎರಡನೇ ಅಲೆ ಎಷ್ಟು ಪ್ರಬಲವಾಗಿದೆ ಎಂದರೆ ಆಸ್ಪತ್ರೆಯಲ್ಲಿ ಹಾಸಿಗೆ ಪಡೆಯುವುದು ತುಂಬಾ ಕಷ್ಟಕರವಾಗುತ್ತಿದೆ. ಅದಕ್ಕಾಗಿಯೇ ನಾನು ಹೆಚ್ಚು ಹೆಚ್ಚು ಜನರಿಗೆ ಸಹಾಯ ಮಾಡಲು ನನ್ನ ಅನುಯಾಯಿಗಳನ್ನು ಸ್ವಯಂಸೇವಕರಾಗಿ ಬಳಸುತ್ತಿದ್ದೇನೆ. ವಿಶೇಷವಾಗಿ ಪ್ಲಾಸ್ಮಾ, ಹಾಸಿಗೆ ಅಥವಾ ಅಗತ್ಯವಾದ ಔಷಧಿಗಳನ್ನು ಪಡೆಯಲು ಸಾಧ್ಯವಾಗದವರನ್ನು ತಲುಪುವುದು ನನ್ನ ಗುರಿ. ಆದರೆ ಇದು ಸಾಕಾಗುವುದಿಲ್ಲ. ಭವಿಷ್ಯದಲ್ಲಿ ಹೆಚ್ಚಿನ ಸೇವೆಗಳನ್ನು ಮಾಡಲು ನಾನು ಬಯಸುತ್ತೇನೆ ಎಂದರು.

ಹನುಮಾ ವಿಹಾರಿ ಇಂಗ್ಲೆಂಡ್ ಪ್ರವಾಸಕ್ಕೆ ಸಿದ್ಧ ಭಾರತದ ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕಾಗಿ ವಿಹಾರಿ ಶೀಘ್ರದಲ್ಲೇ ತಂಡವನ್ನು ಸೇರಿಕೊಳ್ಳಲಿದ್ದಾರೆ. ಐದು ಟೆಸ್ಟ್ ಸರಣಿಯ ಸಮಯದಲ್ಲಿ ಇನ್ನಿಂಗ್ಸ್ ಪ್ರಾರಂಭಿಸಲು ನಾನು ಸಿದ್ದ ಎಂದು ವಿಹಾರಿ ಹೇಳಿದರು. ಆಸ್ಟ್ರೇಲಿಯಾ ವಿರುದ್ಧದ ಸಿಡ್ನಿ ಟೆಸ್ಟ್‌ನಲ್ಲಿ ಗಾಯಗೊಂಡಿದ್ದರೂ ಮೂರೂವರೆ ಗಂಟೆಗಳ ಕಾಲ ಬ್ಯಾಟಿಂಗ್ ಮಾಡಿದ ವಿಹಾರಿ, ತಂಡವು ನನಗೆ ವಹಿಸುವ ಯಾವುದೇ ಪಾತ್ರವನ್ನು ನಿರ್ವಹಿಸಲು ನಾನು ಸಿದ್ಧನಾಗುತ್ತೇನೆ ಎಂದು ಹೇಳಿದರು. ನಾನು ಹೆಚ್ಚಿನ ಸಮಯ ಟಾಪ್ ಆರ್ಡರ್‌ನಲ್ಲಿ ಬ್ಯಾಟಿಂಗ್ ಮಾಡಿದ್ದೇನೆ, ಆದ್ದರಿಂದ ಈ ಸವಾಲಿನ ಬಗ್ಗೆ ನನಗೆ ತಿಳಿದಿದೆ ಎಂದರು.

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?