AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IBA Womens World Boxing Championships: ಬ್ರೆಜಿಲ್ ಬಾಕ್ಸರ್ ಮಣಿಸಿ ಫೈನಲ್‌ ಪ್ರವೇಶಿಸಿದ ನಿಖತ್ ಜರೀನ್..!

ಐಬಿಎ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌: ಭಾರತದ ಮಹಿಳಾ ಬಾಕ್ಸರ್ ನಿಖತ್ ಜರೀನ್ ಐಬಿಎ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಪ್ರವೇಶಿಸುವ ಮೂಲಕ 52 ಕೆಜಿ ತೂಕ ವಿಭಾಗದಲ್ಲಿ ತನ್ನ ಅದ್ಭುತ ಪ್ರದರ್ಶನವನ್ನು ಮುಂದುವರೆಸಿದ್ದಾರೆ.

IBA Womens World Boxing Championships: ಬ್ರೆಜಿಲ್ ಬಾಕ್ಸರ್ ಮಣಿಸಿ ಫೈನಲ್‌ ಪ್ರವೇಶಿಸಿದ ನಿಖತ್ ಜರೀನ್..!
ನಿಖತ್ ಜರೀನ್
TV9 Web
| Updated By: ಪೃಥ್ವಿಶಂಕರ|

Updated on:May 18, 2022 | 7:00 PM

Share

ಭಾರತದ ಮಹಿಳಾ ಬಾಕ್ಸರ್ ನಿಖತ್ ಜರೀನ್ (Nikhat Zareen) ಐಬಿಎ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ (IBA Womens World Boxing Championships)ನ ಫೈನಲ್‌ಗೆ ಪ್ರವೇಶಿಸುವ ಮೂಲಕ 52 ಕೆಜಿ ತೂಕ ವಿಭಾಗದಲ್ಲಿ ತನ್ನ ಅದ್ಭುತ ಪ್ರದರ್ಶನವನ್ನು ಮುಂದುವರೆಸಿದ್ದಾರೆ. ಅವರು ಸೆಮಿಫೈನಲ್‌ನಲ್ಲಿ ಬ್ರೆಜಿಲ್‌ನ ಕ್ಯಾರೊಲಿನಾ ಡಿ ಅಲ್ಮೇಡಾ ಅವರನ್ನು 5-0 ಅಂತರದಿಂದ ಸೋಲಿಸುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಫೈನಲ್ ತಲುಪುವ ಮೂಲಕ ನಿಖತ್ ಭಾರತಕ್ಕೆ ಕನಿಷ್ಠ ಬೆಳ್ಳಿ ಪದಕವನ್ನು ಖಚಿತಪಡಿಸಿದ್ದಾರೆ.

ಮಾಜಿ ಜೂನಿಯರ್ ವಿಶ್ವ ಚಾಂಪಿಯನ್ ನಿಖತ್ ತಾಳ್ಮೆಯ ಆಟ ಪ್ರದರ್ಶಿಸಿ, ಎದುರಾಳಿ ಆಟಗಾರ್ತಿಯ ಮೇಲೆ ತಮ್ಮ ಪ್ರಾಬಲ್ಯ ಸಾಧಿಸಿದರು. ಆದ್ದರಿಂದಲೇ ಐವರು ರೆಫರಿಗಳು ಭಾರತೀಯ ಬಾಕ್ಸರ್ ಪರವಾಗಿ ಸರ್ವಾನುಮತದಿಂದ ತೀರ್ಪು ನೀಡಿದರು.

ಈ ಪಟ್ಟಿಯಲ್ಲಿ ಸೇರ್ತಾರ? ಆರು ಬಾರಿಯ ವಿಶ್ವ ಚಾಂಪಿಯನ್ ಮತ್ತು ಒಲಿಂಪಿಕ್ ಪದಕ ವಿಜೇತೆ ಮೇರಿ ಕೋಮ್, ಸರಿತಾ ದೇವಿ, ಜನೈನ್ ಆರ್‌ಎಲ್ ಮತ್ತು ಲೇಖಾ ಸಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಆಟಗಾರರ್ತಿಯರ ಪಟ್ಟಿಯಲ್ಲಿ ಸೇರಿದ್ದಾರೆ. ಈಗ ನಿಖತ್ ಈ ಪಟ್ಟಿಗೆ ಸೇರ್ಪಡೆಗೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ. ಏಷ್ಯನ್ ಚಾಂಪಿಯನ್‌ಶಿಪ್‌ನ ಕಂಚಿನ ಪದಕ ವಿಜೇತೆ ನಿಖತ್ ಇಂಗ್ಲೆಂಡ್‌ನ ಚಾರ್ಲಿ-ಸೀನ್ ಡೇವಿಸನ್ ಅವರನ್ನು 5-0 ಅಂತರದಿಂದ ಸೋಲಿಸಿ ಸೆಮಿಫೈನಲ್ ತಲುಪಿದ್ದರು.

ಇದನ್ನೂ ಓದಿ
Image
RCB vs GT Prediction Playing XI: ಆರ್​ಸಿಬಿ ತಂಡದಿಂದ ಸಿರಾಜ್​ಗೆ ಕೋಕ್? ಉಭಯ ತಂಡಗಳ ಸಂಭಾವ್ಯ XI
Image
IPL 2022: ಟಿ20 ಕ್ರಿಕೆಟ್​ನಲ್ಲಿ ಈ ದಾಖಲೆ ಬರೆದ ಭಾರತದ ಮೊದಲ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ..!
Image
IPL 2022 RCB vs GT live streaming: ಆರ್​ಸಿಬಿ ಮುಂದೆ ಟೇಬಲ್ ಟಾಪರ್ ಗುಜರಾತ್; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ

ಇದನ್ನೂ ಓದಿ:ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಪ್ರಿಯಕರ ಆತನ ಸ್ನೇಹಿತನನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ ಪೊಲೀಸ್

ಮನೀಶಾಗೆ ಸೋಲು ನಿಖತ್ ಹೊರತಾಗಿ, ಮನಿಶಾ ಮೌನ್ ಸಹ ಸೆಮಿಫೈನಲ್‌ಗೆ ಪ್ರಯಾಣಿಸಿದ್ದರು. ಆದರೆ ಅವರು 57 ಕೆಜಿ ತೂಕ ವಿಭಾಗದಲ್ಲಿ ಇಟಲಿಯ ಒಲಿಂಪಿಕ್ ಪದಕ ವಿಜೇತೆ ಇರ್ಮಾ ಟೆಸ್ಟಾ ವಿರುದ್ಧ 5-0 ಅಂತರದಲ್ಲಿ ಸೋಲನುಭವಿಸಬೇಕಾಯಿತು. ಮನೀಶಾ ಅವರು ಮಂಗೋಲಿಯಾದ ನಮುನ್ ಮೊಂಖೋರ್ ಅವರನ್ನು 4-1 ಅಂತರದಿಂದ ಸೋಲಿಸಿ ಸೆಮಿಫೈನಲ್ ತಲುಪಿದ್ದರು.

2006 ರಲ್ಲಿ ಅತ್ಯುತ್ತಮ ಪ್ರದರ್ಶನ ಈ ಸ್ಪರ್ಧೆಯಲ್ಲಿ 2006 ರಂದು ಭಾರತವು ನಾಲ್ಕು ಚಿನ್ನ, ಒಂದು ಬೆಳ್ಳಿ ಮತ್ತು ಮೂರು ಕಂಚು ಸೇರಿದಂತೆ ಎಂಟು ಪದಕಗಳನ್ನು ಗೆದ್ದಿತ್ತು. ಇದು ಈ ಸ್ಪರ್ಧೆಯಲ್ಲಿ ಭಾರತದ ಅತ್ಯುತ್ತಮ ಪ್ರದರ್ಶನವಾಗಿತ್ತು.

Published On - 6:59 pm, Wed, 18 May 22

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ