AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟಗಾರರಿಗೆ ಕೊರೊನಾ ಸೋಂಕು, ದಕ್ಷಿಣ ಆಫ್ರಿಕಾ-ಇಂಗ್ಲೆಂಡ್ ಒಡಿಐ ಸರಣಿ ಮುಂದೂಡಿಕೆ

ಕೆಲ ಆಟಗಾರರು ಮತ್ತು ಅವರು ಕೇಪ್​ಟೌನ್​ನಲ್ಲಿ ತಂಗಿದ್ದ ಹೊಟೆಲ್ ಸಿಬ್ಬಂದಿ ವರ್ಗದ ಇಬ್ಬರಿಗೆ ಕೊವಿಡ್-19 ಸೋಂಕು ತಾಕಿರುವುದು ದೃಢಪಟ್ಟಿರುವುದರಿಂದ ದಕ್ಷಿಣ ಆಫ್ರಿಕ ಮತ್ತು ಪ್ರವಾಸಿ ಇಂಗ್ಲೆಂಡ್​ ನಡುವೆ ಜಾರಿಯಲ್ಲಿದ್ದ ಒಂದು ದಿನ ಪಂದ್ಯಗಳ ಸರಣಿಯನ್ನು ಮುಂದೂಡಲಾಗಿದೆ.

ಆಟಗಾರರಿಗೆ ಕೊರೊನಾ ಸೋಂಕು, ದಕ್ಷಿಣ ಆಫ್ರಿಕಾ-ಇಂಗ್ಲೆಂಡ್ ಒಡಿಐ ಸರಣಿ ಮುಂದೂಡಿಕೆ
ಅರುಣ್​ ಕುಮಾರ್​ ಬೆಳ್ಳಿ
|

Updated on:Dec 07, 2020 | 9:30 PM

Share

ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕ ಆಟಗಾರರು

ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ಮಧ್ಯೆ ದಕ್ಷಿಣ ಆಫ್ರಿಕಾದಲ್ಲಿ ಜಾರಿಯಲ್ಲಿದ್ದ ಒಂದು ದಿನದ ಪಂದ್ಯಗಳ ಸರಣಿಯನ್ನು ಕೊವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿರುವ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಈಸಿಬಿ) ಎರಡೂ ಕ್ರಿಕೆಟ್​ ಮಂಡಳಿಗಳ ಪರಸ್ಪರ ಒಪ್ಪಿಗೆಯ ಮೇರೆಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆಯೆಂದು ತಿಳಿಸಿದೆ.

ಟಾಮ್ ಹ್ಯಾರಿಸನ್

ಜೈವಿಕ-ಸುರಕ್ಷತೆ ಶಿಷ್ಟಾಚಾರ ಪಾಲಿಸುವಲ್ಲಿ ಅಗಿರುವ ಉಲ್ಲಂಘನೆಯಿಂದಾಗಿ ಅಟಗಾರರು ಮತ್ತು ಅವರು ಕೇಪ್​ಟೌನ್​ನಲ್ಲಿ ಉಳಿದುಕೊಂಡಿರುವ ಹೊಟೆಲ್ ಸಿಬ್ಬಂದಿ ಪೈಕಿ ಇಬ್ಬರಿಗೆ ಸೋಂಕು ತಗುಲಿರುವುದು ಖಚಿತವಾದ ನಂತರ ಸರಣಿಯನ್ನು ಮುಂದೂಡಲಾಗಿದೆಯೆಂದು ಈಸಿಬಿ ಪ್ರಕಟಣೆ ತಿಳಿಸಿದೆ.

ಮೂಲಗಳ ಪ್ರಕಾರ ಅತಿಥೇಯ ತಂಡದ ಒಬ್ಬ ಆಟಗಾರನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೆಯೇ ಪ್ರವಾಸಿ ಇಂಗ್ಲೆಂಡ್ ತಂಡದ ಇಬ್ಬರು ಆಟಗಾರರಲ್ಲಿ ಖಚಿತವಲ್ಲದ ಸೋಂಕು ಕಾಣಿಸಿಕೊಂಡಿರುವುದು ವರದಿಯಾಗಿದೆ.

‘‘ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಹಾಗೂ ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್​ಎ) ಪರಸ್ಪರ ಒಪ್ಪಿಕೊಂಡು ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿದ್ದ ಪುರುಷರ ಒಂದು ದಿನದ ಪಂದ್ಯಗಳ ಸರಣಿಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಎರಡು ಮಂಡಳಿಗಳಿಗೂ ತಮ್ಮ ತಮ್ಮ ಟೀಮಿನ ಆಟಗಾರರ ದೈಹಿಕ ಮತ್ತು ಮಾನಸಿಕ ಆರೋಗ್ಯ ಬಹಳ ಮುಖ್ಯ. ಈ ಸರಣಿಯು ಐಸಿಸಿ ಪುರುಶರ ಕ್ರಿಕೆಟ್​ ಸೂಪರ್ ಲೀಗ್​ನ ಭಾಗವಾಗಿರುವುದರಿಂದ, ಸರಣಿಯನ್ನು ಯಾವಾಗ ಆಯೋಜಿಲಾಗುವುದೆಂದು ಮುಂಬರುವ ದಿನಗಳಲ್ಲಿ ತಿಳಿಸಲಾಗುತ್ತದೆ,’’ ಎಂದು ಈಸಿಬಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕುಗಂಡ್ರಿ ಗೊವೆಂಡರ್

‘‘ಆಟಗಾರರ ಹಿತಾಸಕ್ತಿ ನಮ್ಮ ಪ್ರಮುಖ ಆದ್ಯತೆಯೆನ್ನುವುದನ್ನು ಈಸಿಬಿ ಯಾವಾಗಲೂ ಪ್ರತಿಪಾದಿಸಿದೆ. ಅಲ್ಲಿನ ವಿದ್ಯಮಾನಗಳು ಆಟಗಾರರ ಮೇಲೆ ತೀವ್ರ ಸ್ವರೂಪದ ಪರಿಣಾಮವನ್ನು ಬೀರಬಹುದು. ವಿಷಯದ ಗಂಭೀರತೆಯನ್ನು ಗ್ರಹಿಸಿಕೊಂಡು ಸರಣಿ ಮುಂದೂಡುವ ನಮ್ಮ ಮನವಿಗೆ ಸ್ಪಂದಿಸಿದ ಸಿಎಸ್​ಎಗೆ ನಾವು ಆಭಾರಿಯಾಗಿದ್ದೆವೆ,’’ ಎಂದು ಈಸಿಬಿ ಮುಖ್ಯ ನಿರ್ವಹಣಾಧಿಕಾರಿ ಟಾಮ್ ಹ್ಯಾರಿಸನ್ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಸ್ಎ ಹಂಗಾಮಿ ಸಿಈಒ ಕುಗಂಡ್ರಿ ಗೊವೆಂಡರ್, ಈಸಿಬಿ ತಮ್ಮ ಮಂಡಳಿಯೊಂದಿಗೆ ಹೊಂದಿರುವ ಉತ್ತಮ ಬಾಂಧವ್ಯಕ್ಕಾಗಿ ಧನ್ಯವಾದಗಳನ್ನು ಹೇಳುತ್ತಾ, ಸರಣಿಯನ್ನು ಆದಷ್ಟು ಬೇಗನೆ ಆಯೋಜನೆಗೊಳ್ಳುವ ಬಗ್ಗೆ ತಮ್ಮ ಮಂಡಳಿ ನಿರೀಕ್ಷೆಯಿಟ್ಟುಕೊಂಡಿದೆ ಎಂದು ಹೇಳಿದ್ದಾರೆ.

Published On - 9:26 pm, Mon, 7 December 20

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​