ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆಗೆ ಬಂದ ವಿಜೇಂದರ್ ಸಿಂಗ್​​ಗೂ ವೇದಿಕೆಯಿಂದ ಕೆಳಗಿಳಿಯುವಂತೆ ಹೇಳಿದ ಕುಸ್ತಿಪಟುಗಳು

ಆ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕೆಂದು ನಾನು ಬಯಸುತ್ತೇನೆ, ಕುಸ್ತಿಪಟುಗಳು ಮಾಡಿರುವ ಆರೋಪಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು ಮ ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಸಿಬಿಐ ತನಿಖೆಯಾಗಬೇಕು" ಎಂದು ವಿಜೇಂದರ್ ಸಿಂಗ್ ಎಎನ್‌ಐಗೆ ತಿಳಿಸಿದ್ದಾರೆ.

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆಗೆ ಬಂದ ವಿಜೇಂದರ್ ಸಿಂಗ್​​ಗೂ ವೇದಿಕೆಯಿಂದ ಕೆಳಗಿಳಿಯುವಂತೆ ಹೇಳಿದ ಕುಸ್ತಿಪಟುಗಳು
ಪ್ರತಿಭಟನೆಯಲ್ಲಿ ಭಾಗಿಯಾದ ಬಾಕ್ಸರ್ ವಿಜೇಂದರ್ ಸಿಂಗ್Image Credit source: Vijender Singh Twitter Handle
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jan 20, 2023 | 8:49 PM

ಶುಕ್ರವಾರ ದೆಹಲಿಯ ಜಂತರ್ ಮಂತರ್‌ನಲ್ಲಿ (Jantar Mantar) ಕುಸ್ತಿ ಫೆಡರೇಶನ್ ಇಂಡಿಯಾ (WFI) ಅಧ್ಯಕ್ಷ ಬ್ರಿಜ್ ಭೂಷಣ್ ಸರಣ್ ಸಿಂಗ್ (Brij Bhushan Saran Singh) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಒಲಿಂಪಿಯನ್ ಬಾಕ್ಸರ್, ಕಾಂಗ್ರೆಸ್ಸಿಗ ವಿಜೇಂದರ್ ಸಿಂಗ್ ಬೆಂಬಲ ಸೂಚಿಸಿದ್ದಾರೆ. ಎಎನ್‌ಐ ವರದಿಯ ಪ್ರಕಾರ, ಪ್ರತಿಭಟನೆಯ ಸಮಯದಲ್ಲಿ ಕುಸ್ತಿಪಟುಗಳು ಈ ವಿಷಯವನ್ನು ರಾಜಕೀಯಗೊಳಿಸಲು ಬಯಸುವುದಿಲ್ಲವಾದ್ದರಿಂದ ವೇದಿಕೆಯಿಂದ ವಿಜೇಂದರ್ ಸಿಂಗ್ ಅವರಲ್ಲಿ ವೇದಿಕೆಯಿಂದ ಕೆಳಗಿಳಿಯುವಂತೆ ಹೇಳಿದ್ದಾರೆ. ಜಂತರ್ ಮಂತರ್ ಪ್ರತಿಭಟನಾ ಸ್ಥಳದ ದೃಶ್ಯಗಳು 2008 ರ ಬೀಜಿಂಗ್ ಒಲಿಂಪಿಕ್ ಕಂಚಿನ ಪದಕ ವಿಜೇತ ಸಿಂಗ್, ವೇದಿಕೆಯ ಕೆಳಗಿನ ನೆಲದ ಮೇಲೆ ಕುಳಿತಿರುವುದನ್ನು ತೋರಿಸಿದೆ.ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಸಬೇಕೆಂದು ವಿಜೇಂದರ್ ಒತ್ತಾಯಿಸಿದ್ದಾರೆ.

“ಆ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕೆಂದು ನಾನು ಬಯಸುತ್ತೇನೆ, ಕುಸ್ತಿಪಟುಗಳು ಮಾಡಿರುವ ಆರೋಪಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು ಮ ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಸಿಬಿಐ ತನಿಖೆಯಾಗಬೇಕು” ಎಂದು ವಿಜೇಂದರ್ ಸಿಂಗ್ ಎಎನ್‌ಐಗೆ ತಿಳಿಸಿದ್ದಾರೆ.

ಗುರುವಾರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸ್ಥಳಕ್ಕೆ ಆಗಮಿಸಿದ ಸಿಪಿಐ (ಎಂ) ನ ಬೃಂದಾ ಕಾರಟ್‌ಗೆ ವೇದಿಕೆಯಿಂದ ಕೆಳಗಿಳಿಯುವಂತೆ ಕುಸ್ತಿಪಟುಗಳು ಮನವಿ ಮಾಡಿದ್ದರು.

ಇದನ್ನೂ ಓದಿ: Pee-Gate: ಏರ್ ಇಂಡಿಯಾಗೆ ₹30 ಲಕ್ಷ ದಂಡ, ಪೈಲಟ್ ಪರವಾನಗಿ 3 ತಿಂಗಳವರೆಗೆ ಅಮಾನತು ಮಾಡಿದ ಡಿಜಿಸಿಎ

ರಾಜೀನಾಮೆ ನೀಡಲ್ಲ: ಬ್ರಿಜ್ ಭೂಷಣ್ ಸರಣ್ ಸಿಂಗ್

ಆಪಾದಿತ ಲೈಂಗಿಕ ಕಿರುಕುಳದ (ವಿರುದ್ಧ ಪ್ರತಿಭಟಿಸುವ ಕುಸ್ತಿಪಟುಗಳು ತಮ್ಮ ರಾಜೀನಾಮೆಯ ಬೇಡಿಕೆಯ ಮೇಲೆ ದೃಢವಾಗಿ ಉಳಿದುಕೊಂಡಿರುವಂತೆಯೇ, ಕುಸ್ತಿ ಸಂಸ್ಥೆಯ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್  ನಾನು ಹೇಳಿಕೆ ನೀಡಿದರೆ ಸುನಾಮಿ ಉಂಟಾಗುತ್ತದೆ. ನಾನು ಯಾರ ಸಹಾಯಾರ್ಥವಾಗಿ ಇಲ್ಲಿಲ್ಲ. ನಾನು ಚುನಾಯಿತ ಪ್ರತಿನಿಧಿ ಎಂದಿದ್ದಾರೆ. ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಹಲವಾರು ಪ್ರಸಿದ್ಧ ಭಾರತೀಯ ಕುಸ್ತಿಪಟುಗಳು ದೆಹಲಿಯಲ್ಲಿ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು,ಭಾರತ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥರು ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ.

ಸಿಂಗ್ ವಿರುದ್ಧ ಕುಸ್ತಿಪಟುಗಳು #MeToo ಆರೋಪ ಹೊರಿಸಿದ್ದು, ತಮಗೆ ಜೀವ ಭಯವಿದೆ ಎಂದಿದ್ದಾರೆ. ಮೀಟೂ ಆರೋಪ ಹೊಂದಿರುವ ಸಿಂಗ್ ಅವರನ್ನು ಕುಸ್ತಿ ಸಂಸ್ಥೆಯ ಮುಖ್ಯಸ್ಥ ಸ್ಥಾನದಿಂದ ತಕ್ಷಣವೇ ವಜಾಗೊಳಿಸಬೇಕೆಂದು ಕುಸ್ತಿಪಟುಗಳು ಒತ್ತಾಯಿಸುತ್ತಿದ್ದಾರೆ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಾನು ಪ್ರಧಾನಿ ಕಾರ್ಯಾಲಯ ಮತ್ತು ಗೃಹ ಸಚಿವರೊಂದಿಗೆ ಮಾತನಾಡಿಲ್ಲ” ಎಂದು ಸಿಂಗ್ ಹೇಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:45 pm, Fri, 20 January 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್