Olympics 2036: ‘2036 ರ ಒಲಿಂಪಿಕ್ಸ್ ಆಯೋಜಿಸುವ ತಯಾರಿಯಲ್ಲಿ ಭಾರತ’; ಪ್ರಧಾನಿ ಮೋದಿ

Olympics 2036: ದೇಶವು ಒಲಿಂಪಿಕ್ಸ್ ಕ್ರೀಡಾಕೂಟವನ್ನು ಆಯೋಜಿಸಲು ಸಿದ್ಧತೆ ನಡೆಸುತ್ತಿದೆ. 2036ರಲ್ಲಿ ನಡೆಯಲಿರುವ ಒಲಿಂಪಿಕ್ಸ್ ಭಾರತದ ನೆಲದಲ್ಲಿ ನಡೆಯಬೇಕು ಎಂಬುದು ಭಾರತದ ಕನಸಾಗಿದೆ. ಅದಕ್ಕಾಗಿ ತಯಾರಿ ಮಾಡಿಕೊಂಡು ಮುಂದೆ ಸಾಗುತ್ತಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Olympics 2036: ‘2036 ರ ಒಲಿಂಪಿಕ್ಸ್ ಆಯೋಜಿಸುವ ತಯಾರಿಯಲ್ಲಿ ಭಾರತ’; ಪ್ರಧಾನಿ ಮೋದಿ
ಪ್ರಧಾನಿ ಮೋದಿ
Follow us
ಪೃಥ್ವಿಶಂಕರ
|

Updated on:Aug 15, 2024 | 5:29 PM

2024 ರ ಪ್ಯಾರಿಸ್ ಒಲಿಂಪಿಕ್ಸ್ ಕೊನೆಗೊಂಡಿದೆ. ಸಾಕಷ್ಟು ವಿವಾದಗಳ ನಡುವೆಯೂ ಫ್ರಾನ್ಸ್, ಈ ಮಹಾ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದೆ. 33ನೇ ಆವೃತ್ತಿಯ ಒಲಿಂಪಿಕ್ಸ್ ಕೊನೆಗೊಳ್ಳುವುದರೊಂದಿಗೆ 34ನೇ ಆವೃತ್ತಿಯ ಅಂದರೆ 2028ರಲ್ಲಿ ನಡೆಯಲ್ಲಿರುವ ಒಲಿಂಪಿಕ್ಸ್​ಗೆ ಈಗಾಗಲೇ ಸಿದ್ಧತೆಗಳು ಶುರುವಾಗಿವೆ. ಈ ಮಹಾ ಕ್ರೀಡಾಕೂಟಕ್ಕೆ ಅಮೆರಿಕದ ಲಾಸ್ ಏಂಜಲೀಸ್ ನಗರ ಆತಿಥ್ಯವಹಿಸುತ್ತಿದೆ. ನಂತರ ನಡೆಯುವ 2032 ರ ಒಲಿಂಪಿಕ್ಸ್​ಗೆ ಆಸ್ಟ್ರೇಲಿಯಾದ ಬ್ರಿಸ್ಬೇನ್ ಆತಿಥ್ಯವಹಿಸಲಿದೆ. ಸದ್ಯ ಈ ಎರಡೂ ಆವೃತ್ತಿಗಳ ಹೋಸ್ಟಿಂಗ್ ದೇಶಗಳ ಪಟ್ಟಿ ಅಧಿಕೃತವಾಗಿ ಹೊರಬಿದ್ದಿದೆ. ಆದರೆ ಆ ಬಳಿಕ ನಡೆಯಲ್ಲಿರುವ ಅಂದರೆ 2036 ರಲ್ಲಿ ನಡೆಯಲ್ಲಿರುವ ಒಲಿಂಪಿಕ್ಸ್​ಗೆ ಆತಿಥ್ಯವಹಿಸಲು ನಾನಾ ದೇಶಗಳು ಪೈಪೋಟಿಗೆ ಬಿದ್ದಿವೆ. ಇವುಗಳಲ್ಲಿ ಭಾರತವು ಒಂದಾಗಿದೆ. ಇದಕ್ಕೆ ಪೂರಕವಾಗಿ ದೇಶದ ಪ್ರಧಾನಿ ಇಂದು 2036 ರ ಒಲಿಂಪಿಕ್ಸ್ ಆಯೋಜನೆಯ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

ಭಾರತದ ಕನಸಾಗಿದೆ

78ನೇ ಸ್ವಾತಂತ್ರ್ಯ ಸಂಭ್ರಮದ ಪ್ರಯುಕ್ತ ದೆಹಲಿಯ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು 2036 ರ ಒಲಿಂಪಿಕ್ ಕ್ರೀಡಾಕೂಟವನ್ನು ಆಯೋಜಿಸುವ ಭಾರತದ ಸಂಕಲ್ಪವನ್ನು ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶವು ಒಲಿಂಪಿಕ್ಸ್ ಕ್ರೀಡಾಕೂಟವನ್ನು ಆಯೋಜಿಸಲು ಸಿದ್ಧತೆ ನಡೆಸುತ್ತಿದೆ. 2036ರಲ್ಲಿ ನಡೆಯಲಿರುವ ಒಲಿಂಪಿಕ್ಸ್ ಭಾರತದ ನೆಲದಲ್ಲಿ ನಡೆಯಬೇಕು ಎಂಬುದು ಭಾರತದ ಕನಸಾಗಿದೆ. ಅದಕ್ಕಾಗಿ ತಯಾರಿ ಮಾಡಿಕೊಂಡು ಮುಂದೆ ಸಾಗುತ್ತಿದ್ದೇವೆ ಎಂದಿದ್ದಾರೆ.

ನಾವು ಹೊಸ ಗುರಿಗಳತ್ತ ಸಾಗುತ್ತೇವೆ

ಇನ್ನು ಇದೇ ಸಂದರ್ಭದಲ್ಲಿ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತೀಯ ಆಟಗಾರರನ್ನು ಅಭಿನಂದಿಸಿದ ಪ್ರಧಾನಿ ಮೋದಿ, ‘ಒಲಂಪಿಕ್ಸ್ ಜಗತ್ತಿನಲ್ಲಿ ಭಾರತದ ಧ್ವಜವನ್ನು ಹಾರಿಸಿದ ಆ ಯುವಕರು ಇಂದು ತ್ರಿವರ್ಣ ಧ್ವಜದ ಕೆಳಗೆ ನಮ್ಮೊಂದಿಗೆ ಕುಳಿತಿದ್ದಾರೆ. 140 ಕೋಟಿ ದೇಶವಾಸಿಗಳ ಪರವಾಗಿ ನಾನು ನಮ್ಮ ದೇಶದ ಎಲ್ಲಾ ಆಟಗಾರರನ್ನು ಅಭಿನಂದಿಸುತ್ತೇನೆ. ಹೊಸ ಕನಸುಗಳು, ಹೊಸ ನಿರ್ಣಯಗಳು ಮತ್ತು ಪ್ರಯತ್ನಗಳೊಂದಿಗೆ ನಾವು ಹೊಸ ಗುರಿಗಳತ್ತ ಸಾಗುತ್ತೇವೆ ಎಂದರು. ಇನ್ನು ಇದೇ ವೇಳೆ ಆಗಸ್ಟ್ 28 ರಿಂದ ಪ್ಯಾರಿಸ್​ನಲ್ಲಿ ಆರಂಭವಾಗಲಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಲಿರುವ ಭಾರತದ ಆಟಗಾರರನ್ನು ಪ್ರಧಾನಿ ಮೋದಿ ಅಭಿನಂದಿಸಿದರು.

ಒಲಿಂಪಿಕ್ಸ್​ ಆತಿಥ್ಯ ಇನ್ನೂ ಸ್ಪಷ್ಟವಾಗಿಲ್ಲ

ವಾಸ್ತವವಾಗಿ ಕಳೆದ ವರ್ಷ ಮುಂಬೈನಲ್ಲಿ ನಡೆದ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಸಮ್ಮೇಳನದಲ್ಲಿ ಭಾರತ ಒಲಿಂಪಿಕ್ಸ್ ಆತಿಥ್ಯ ವಹಿಸುವ ಇಚ್ಛೆಯನ್ನು ವ್ಯಕ್ತಪಡಿಸಿತ್ತು. ಮುಂದಿನ ವರ್ಷ ಐಒಸಿ ಅಧ್ಯಕ್ಷರ ಆಯ್ಕೆ ನಡೆಯಲಿದ್ದು, ಆ ಬಳಿಕವಷ್ಟೇ 2036ರ ಒಲಿಂಪಿಕ್ಸ್‌ ಆತಿಥ್ಯ ವಹಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಮೇಲೆ ಹೇಳಿದಂತೆ ಲಾಸ್ ಏಂಜಲೀಸ್ 2028 ರಲ್ಲಿ ನಡೆಯಲ್ಲಿರುವ ಒಲಿಂಪಿಕ್ ಕ್ರೀಡಾಕೂಟಕ್ಕೆ ಆತಿಥ್ಯವಹಿಸಲಿದೆ. ಬ್ರಿಸ್ಬೇನ್ 2032 ರ ಒಲಿಂಪಿಕ್ ಕ್ರೀಡಾಕೂಟವನ್ನು ಆಯೋಜಿಸುತ್ತದೆ. ಇದೀಗ 2036 ರ ಒಲಿಂಪಿಕ್ಸ್ ಆಯೋಜನೆಯ ಕನಸು ಹೊತ್ತಿರುವ ಭಾರತ ತನ್ನ ಯಾವ ನಗರದಲ್ಲಿ ಒಲಿಂಪಿಕ್ಸ್​ಗೆ ಆತಿಥ್ಯ ವಹಿಸುತ್ತದೆ ಎಂದು ಇನ್ನೂ ಸ್ಪಷ್ಟವಾಗಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Thu, 15 August 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ