ಸ್ಪರ್ಧೆ ವೇಳೆ ಚೆನ್ನೈ ಟ್ರ್ಯಾಕ್‌ನಲ್ಲಿ ಅಪಘಾತ; ಬೆಂಗಳೂರಿನ ಕಿರಿಯ ರೈಡರ್ ಶ್ರೇಯಸ್ ಹರೀಶ್ ದುರ್ಮರಣ

ಟರ್ನ್-1 ನಿಂದ ನಿರ್ಗಮಿಸಿದ ಶ್ರೇಯಸ್ ಬಿದ್ದು ತಲೆಗೆ ಗಂಭೀರ ಗಾಯವಾಯಿತು. ತಕ್ಷಣವೇ ರೇಸ್‌ ನಿಲ್ಲಿಸಲಾಗಿದೆ. ಟ್ರ್ಯಾಕ್‌ನಲ್ಲಿ ಇರಿಸಲಾಗಿದ್ದ ಟ್ರಾಮಾ ಕೇರ್ ಆಂಬ್ಯುಲೆನ್ಸ್‌ನಲ್ಲಿ ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದರು

ಸ್ಪರ್ಧೆ ವೇಳೆ ಚೆನ್ನೈ ಟ್ರ್ಯಾಕ್‌ನಲ್ಲಿ ಅಪಘಾತ; ಬೆಂಗಳೂರಿನ ಕಿರಿಯ ರೈಡರ್ ಶ್ರೇಯಸ್ ಹರೀಶ್ ದುರ್ಮರಣ
ಕೊಪ್ಪರಂ ಶ್ರೇಯಸ್ ಹರೀಶ್
Follow us
|

Updated on: Aug 05, 2023 | 8:59 PM

ಚೆನ್ನೈ ಆಗಸ್ಟ್ 05: ಶನಿವಾರ ಚೆನ್ನೈನ (Chennai) ಮದ್ರಾಸ್ ಇಂಟರ್‌ನ್ಯಾಶನಲ್ ಸರ್ಕ್ಯೂಟ್‌ನಲ್ಲಿ ನಡೆದ ಎಂಆರ್‌ಎಫ್ ಎಂಎಂಎಸ್‌ಸಿ ಎಫ್‌ಎಂಎಸ್‌ಸಿಐ ಇಂಡಿಯನ್ ನ್ಯಾಷನಲ್ ಮೋಟಾರ್‌ಸೈಕಲ್ ರೇಸಿಂಗ್ ಚಾಂಪಿಯನ್‌ಶಿಪ್‌ನ (Indian National Motorcycle Racing Championship) ಮೂರನೇ ಸುತ್ತಿನ ಸ್ಪರ್ಧೆ ವೇಳೆ ಅಪಘಾತಕ್ಕೀಡಾದ ಬೆಂಗಳೂರಿನ 13 ವರ್ಷದ ರೈಡರ್ ಕೊಪ್ಪರಂ ಶ್ರೇಯಸ್ ಹರೀಶ್ (Copparam Shreyas Hareesh) ನಿಧನರಾಗಿದ್ದಾರೆ. ಹರೀಶ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮದ್ರಾಸ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ (Madras Motor Sports Club), ಶನಿವಾರ ಮತ್ತು ಭಾನುವಾರದಂದು ನಿಗದಿಯಾಗಿದ್ದ ಉಳಿದ ರೇಸ್‌ಗಳನ್ನು ರದ್ದುಗೊಳಿಸಿದೆ.

2010 ಜುಲೈ 26ರಂದು ಜನಿಸಿದ ಶ್ರೇಯಸ್,  ಬೆಂಗಳೂರಿನ ಕೆನ್ಸ್ರಿ ಶಾಲೆಯ ವಿದ್ಯಾರ್ಥಿ. ಈತ ಪೆಟ್ರೋನಾಸ್‌ ಟಿವಿಎಸ್ ಒನ್-ಮೇಕ್ ಚಾಂಪಿಯನ್‌ಶಿಪ್ ಹೊಸಬರ ವಿಭಾಗದಲ್ಲಿ ಸ್ಪರ್ಧಿಸಿ ಸತತ ನಾಲ್ಕು ಬಾರಿ ಗೆದ್ದಿದ್ದು ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ರೇಸ್‌ಗಳನ್ನು ಗೆದ್ದ ಕಾರಣ ಉದಯೋನ್ಮುಖ ತಾರೆ ಎಂದು ಪ್ರಶಂಸಿಸಲ್ಪಟ್ಟರು.

ಇಂದು ಬೆಳಗ್ಗೆ ಪೋಲ್ ಪೊಸಿಷನ್‌ಗೆ ಅರ್ಹತೆ ಪಡೆದಿದ್ದ ರೈಡಿಂಗ್ ನಂತರ ಈ ಘಟನೆ ನಡೆದಿದೆ. ಟರ್ನ್-1 ನಿಂದ ನಿರ್ಗಮಿಸಿದ ಶ್ರೇಯಸ್ ಬಿದ್ದು ತಲೆಗೆ ಗಂಭೀರ ಗಾಯವಾಯಿತು.  ತಕ್ಷಣವೇ ರೇಸ್‌ ನಿಲ್ಲಿಸಲಾಗಿದೆ. ಟ್ರ್ಯಾಕ್‌ನಲ್ಲಿ ಇರಿಸಲಾಗಿದ್ದ ಟ್ರಾಮಾ ಕೇರ್ ಆಂಬ್ಯುಲೆನ್ಸ್‌ನಲ್ಲಿ ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದರು ಎಂದು ಎನ್​​ಡಿಟಿವಿ ವರದಿ ಮಾಡಿದೆ.

ಯುವ ಮತ್ತು ಪ್ರತಿಭಾವಂತ ರೈಡರ್ ಅನ್ನು ಕಳೆದುಕೊಂಡಿರುವುದು ದುರಂತ. ತನ್ನ ಅದ್ಭುತ ರೇಸಿಂಗ್ ಪ್ರತಿಭೆಯಿಂದ ಮಿಂಚುತ್ತಿದ್ದ ಶ್ರೇಯಸ್‌ಗೆ ಘಟನೆಯ ನಂತರ ತಕ್ಷಣವೇ ಸ್ಥಳದಲ್ಲೇ ವೈದ್ಯಕೀಯ ನೆರವು ಒದಗಿಸಲಾಯಿತು. ಆನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತ ಎಂದು MMSC ಅಧ್ಯಕ್ಷ ಅಜಿತ್ ಥಾಮಸ್ ಹೇಳಿದ್ದಾರೆ. ನಾವು ಈ ವಾರಾಂತ್ಯದ ಉಳಿದ ಕಾರ್ಯಕ್ರಮಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ. MMSC ಸಂತಾಪ ವ್ಯಕ್ತಪಡಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: IND vs WI 1st ODI: ಭಾರತದ ಸ್ಪಿನ್ ಬಿರುಗಾಳಿಗೆ ವೆಸ್ಟ್ ಇಂಡೀಸ್ ತತ್ತರ: ಇಂಡೋ-ವಿಂಡೀಸ್ ಮೊದಲ ಏಕದಿನದ ರೋಚಕ ಫೋಟೋ ನೋಡಿ

ಈ ವರ್ಷದ ಮೇ ತಿಂಗಳಲ್ಲಿ, MiniGP India ಪ್ರಶಸ್ತಿಯನ್ನು ಗೆದ್ದ ಶ್ರೇಯಸ್, ಸ್ಪೇನ್‌ನಲ್ಲಿ ನಡೆದ ಮಿನಿಜಿಪಿ ರೇಸ್‌ಗಳಲ್ಲಿ ಭಾಗವಹಿಸಿದ್ದರು, ಎರಡೂ ರೇಸ್‌ಗಳನ್ನು ಕ್ರಮವಾಗಿ ಐದು ಮತ್ತು ನಾಲ್ಕನೇ ಸ್ಥಾನಗಳಲ್ಲಿ ಗಳಿಸಿದ್ದರು. ಈತ ಆಗಸ್ಟ್‌ನಲ್ಲಿ ಮಲೇಷ್ಯಾದ ಸೆಪಾಂಗ್ ಸರ್ಕ್ಯೂಟ್‌ನಲ್ಲಿ MSBK ಚಾಂಪಿಯನ್‌ಶಿಪ್ 2023 ನಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದರು. 250cc ವಿಭಾಗದಲ್ಲಿ (ಗುಂಪು B) ತಂಡ CRA ಮೋಟಾರ್‌ಸ್ಪೋರ್ಟ್‌ಗಳನ್ನು ಪ್ರತಿನಿಧಿಸುತ್ತಾರೆ.

ಮತ್ತಷ್ಟು ಕ್ರೀಡಾ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ