Tokyo Olympics: ನಿಮ್ಮ ಶಾಲೆಗೆ ಭೇಟಿ ನೀಡಲಿದ್ದಾರೆ ಟೊಕಿಯೋ ಒಲಿಂಪಿಕ್ಸ್​ನ ಸ್ಟಾರ್ ಕ್ರೀಡಾಪಟುಗಳು

ಒಟ್ಟು 75 ಶಾಲೆಗಳಿಗೆ 75 ಕ್ರೀಡಾಪಟುಗಳು ಮುಂದಿನ ಎರಡು ವರ್ಷಗಳಲ್ಲಿ ಫಿಟ್ ಇಂಡಿಯಾ ಮಿಷನ್​ನಡಿಯಲ್ಲಿ ಭೇಟಿ ನೀಡಲಿದ್ದಾರೆ. ಈ ಸಂದರ್ಭ ಫಿಟ್ ಇಂಡಿಯಾ ಕ್ವಿಜ್​ನಲ್ಲೂ ಭಾಗವಹಿಸಲಿದ್ದಾರೆ. ಇದಕ್ಕೆ ಮುಂದಿನ ವರ್ಷ ಜನವರಿಯಿಂದ ಚಾಲನೆ ಸಿಗಲಿದೆ.

Tokyo Olympics: ನಿಮ್ಮ ಶಾಲೆಗೆ ಭೇಟಿ ನೀಡಲಿದ್ದಾರೆ ಟೊಕಿಯೋ ಒಲಿಂಪಿಕ್ಸ್​ನ ಸ್ಟಾರ್ ಕ್ರೀಡಾಪಟುಗಳು
Olympians Players
Follow us
TV9 Web
| Updated By: Vinay Bhat

Updated on: Nov 20, 2021 | 11:37 AM

ನೀರಜ್ ಚೋಪ್ರಾ (Neeraj Chopra), ಪಿವಿ ಸಿಂಧೂ (PV Sindhu), ಲವ್ಲಿನಾ ಬೊರ್ಗೊಹೈನ್, ರವಿ ದಹಿಯಾ (Ravi Dahiya), ಭಾರತ ಹಾಕಿ ತಂಡದ ಆಟಗಾರರು ಸೇರಿದಂತೆ ಟೋಕಿಯೋ ಒಲಿಂಪಿಕ್ಸ್​ನಲ್ಲಿ (Tokyo Olympics) ಸಾಧನೆ ಮಾಡಿದ ಭಾರತ ಒಟ್ಟು 75 ಸ್ಟಾರ್ ಕ್ರೀಡಾಪಟುಗಳು ನಿಮ್ಮ ಶಾಲೆಗೆ ಭೇಟಿ ನೀಡಲಿದ್ದಾರೆ. ಭಾರತ ಒಲಿಂಪಿಕ್ಸ್ ತಂಡದ ಎಲ್ಲ ಕ್ರೀಡಾಪಟುಗಳು 2023ರ ಆಗಸ್ಟ್ 15ರೊಳಗೆ 75 ಶಾಲೆಗಳಿಗೆ ಭೇಟಿ ನೀಡಬೇಕೆಂದು ಮೋದಿ (Narendra Modi) ಈ ಹಿಂದೆ ಮನವಿ ಸಲ್ಲಿಸಿದ್ದರು. ಅದರಂತೆ 75 ಕ್ರೀಡಾಪಟುಗಳು ಶಾಲೆಗಳಲ್ಲಿ ವಿದ್ಯಾರ್ಥಿಗಳ ಜತೆಗೆ ಸುಮಾರು 1 ಗಂಟೆ ಸಮಯ ಕಳೆಯಲಿದ್ದಾರೆ. ಜೊತೆಗೆ ಕ್ರೀಡೆಯಲ್ಲಿ ತೊಡಗಿಕೊಳ್ಳುವಂತೆ ಅವರಿಗೆ ಸ್ಫೂರ್ತಿ ತುಂಬಲಿದ್ದಾರೆ. ಅಪೌಷ್ಟಿಕತೆಯ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.

ಒಟ್ಟು 75 ಶಾಲೆಗಳಿಗೆ 75 ಕ್ರೀಡಾಪಟುಗಳು ಮುಂದಿನ ಎರಡು ವರ್ಷಗಳಲ್ಲಿ ಫಿಟ್ ಇಂಡಿಯಾ ಮಿಷನ್​ನಡಿಯಲ್ಲಿ ಭೇಟಿ ನೀಡಲಿದ್ದಾರೆ. ಈ ಸಂದರ್ಭ ಫಿಟ್ ಇಂಡಿಯಾ ಕ್ವಿಜ್​ನಲ್ಲೂ ಭಾಗವಹಿಸಲಿದ್ದಾರೆ. ಇದಕ್ಕೆ ಮುಂದಿನ ವರ್ಷ ಜನವರಿಯಿಂದ ಚಾಲನೆ ಸಿಗಲಿದೆ. ಇದಕ್ಕೂ ಮುನ್ನ ಡಿಸೆಂಬರ್​ನಲ್ಲಿ ದೊಡ್ಡ ಕಾರ್ಯಕ್ರಮವೊಂದು ನಡೆಯಲಿದೆ. ಯುವ ವ್ಯವಹಾರ ಮತ್ತು ಕ್ರೀಡಾ ಸಚಿವರು ಮತ್ತು ಶಿಕ್ಷಣ ಸಚಿವರ ಅಡಿಯಲ್ಲಿ ಇಂದಿರಾ ಗಾಂಧಿ ಸ್ಟೇಡಿಯಂನಲ್ಲಿ ಸುಮಾರು ಒಂದು ಸಾವಿರ ಶಾಲಾ ವಿದ್ಯಾರ್ಥಿಗಳು ಹಾಗೂ ಟೊಕಿಯೋ ಒಲಿಂಪಿಕ್ಸ್​ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಜೊತೆಯಾಗಲಿದ್ದಾರೆ.

ಟೊಕಿಯೋ ಒಲಿಂಪಿಕ್ಸ್‌ನಲ್ಲಿ ದಾಖಲೆಯ 7 ಪದಕ ಗೆದ್ದು ಇತಿಹಾಸ ನಿರ್ಮಿಸಿದ ಭಾರತ ತಂಡದ ಎಲ್ಲ ಸದಸ್ಯರ ಜತೆಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ನಿವಾಸದಲ್ಲಿ ಮನಬಿಚ್ಚಿ ಮಾತನಾಡಿದ್ದರು. ಈ ವೇಳೆ ಗೆದ್ದ ಕ್ರೀಡಾಪಟುಗಳ ಸಾಧನೆಗೆ ಬೆನ್ನುತಟ್ಟಿ ಪ್ರಶಂಸಿಸಿದ್ದ ಅವರು, ಸೋತ ಕ್ರೀಡಾಪಟುಗಳಿಗೂ ಕುಗ್ಗದಿರುವಂತೆ ಪ್ರೇರಣೆಯ ಮಾತುಗಳನ್ನು ನುಡಿದರು.

ಈ ಬಾರಿಯ ಟೊಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಒಟ್ಟು 7 ಪದಕಗಳನ್ನು ಗೆಲ್ಲುವುದರೊಂದಿಗೆ ಭಾರತ ಒಲಿಂಪಿಕ್ಸ್‌ನಲ್ಲಿ ಹಿಂದೆಂದಿಗಿಂತಲೂ ಗರಿಷ್ಠ ಪದಕ ಜಯಿಸಿದ ಸಾಧನೆ ಮಾಡಿತು. ಈ ಮೊದಲು 2012ರ ಲಂಡನ್‌ ಒಲಿಂಪಿಕ್ಸ್‌ನಲ್ಲಿ ಭಾರತ 6 ಪದಕಗಳನ್ನು ಜಯಿಸಿತ್ತು. ಆದರೆ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಒಂದು ಚಿನ್ನ, ಎರಡು ಬೆಳ್ಳಿ ಸೇರಿದಂತೆ ಒಟ್ಟು 7 ಪದಕಗಳನ್ನು ಜಯಿಸಿ ಉತ್ತಮ ಸಾಧನೆಯನ್ನೇ ತೋರಿತು.

ಅದರಲ್ಲೂ ವೇಟ್‌ಲಿಫ್ಟಿಂಗ್, ಹಾಕಿ ಹಾಗೂ ಜಾವಲಿನ್‌ ಥ್ರೋನಲ್ಲಿ ಭಾರತ ಪದಕಗಳ ಬೇಟೆಯಾಗಿದ್ದು ಹೆಚ್ಚು ಟಾಕ್‌ ಆಫ್‌ ದಿ ಟೌನ್ ಎನಿಸಿಕೊಂಡಿತು. ಮಹಿಳಾ ವೇಟ್‌ಲಿಫ್ಟರ್‌ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಪದಕಗಳ ಖಾತೆ ತೆರೆದರೆ, ಬರೋಬ್ಬರಿ 41 ವರ್ಷಗಳ ಬಳಿಕ ಭಾರತೀಯ ಹಾಕಿ ತಂಡವು ಒಲಿಂಪಿಕ್ಸ್‌ನಲ್ಲಿ ಪದಕದ ಬೇಟೆಯಾಡಿತು. ಇನ್ನು ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ನೀರಜ್ ಚೋಪ್ರಾ ಶತಮಾನಗಳ ಬಳಿಕ ಪದಕ ಗೆದ್ದುಕೊಟ್ಟು ಚಿನ್ನದ ಹುಡುಗ ಎನಿಸಿದರು.

Rohit Sharma Records: ಒಂದಲ್ಲ ಎರಡಲ್ಲ ಬರೋಬ್ಬರಿ 3 ದಾಖಲೆ ಬರೆದ ರೋಹಿತ್ ಶರ್ಮಾ: ಹಿಟ್​ಮ್ಯಾನ್ ನೂತನ ರೆಕಾರ್ಡ್ ಏನು?

Harshal Patel: ಪದಾರ್ಪಣೆ ಪಂದ್ಯದಲ್ಲೇ ಪಂದ್ಯಶ್ರೇಷ್ಠ ಸ್ವೀಕರಿಸುವಾಗ ಹರ್ಷಲ್ ಪಟೇಲ್ ಹೇಳಿದ್ದೇನು ಗೊತ್ತಾ?

(75 Star Olympians to Take PM Fit India Mission to Schools Across India)

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?