Pro Kabaddi 2021: ಮೊದಲ ಪಂದ್ಯವೇ ರೋಚಕ: ಸೋಲಿನೊಂದಿಗೆ ಅಭಿಯಾನ ಆರಂಭಿಸಿದ ಬೆಂಗಳೂರು ಬುಲ್ಸ್

U Mumba vs Bengaluru Bulls: ಯು ಮುಂಬಾಗೆ ಬಲಿಷ್ಠ ಪೈಪೋಟಿ ನೀಡಿದ್ದ ಬೆಂಗಳೂರು ಬುಲ್ಸ್​ ಕೊನೆಯ ಹಂತದಲ್ಲಿ ಸ್ಟ್ಯಾಟರ್ಜಿ ಸರಿಯಿಲ್ಲದೇ ಸೋತಿದೆ. ಪವನ್​ಕುಮಾರ್ ಆರಂಭದಲ್ಲಿ ಅಬ್ಬರಿಸಿದ್ದರೆ, ಸೆಕೆಂಡ್ ಹಾಫ್ ನಲ್ಲಿ ಅವರ ಆಟ ನಡೆಯಲಿಲ್ಲ. 

Pro Kabaddi 2021: ಮೊದಲ ಪಂದ್ಯವೇ ರೋಚಕ: ಸೋಲಿನೊಂದಿಗೆ ಅಭಿಯಾನ ಆರಂಭಿಸಿದ ಬೆಂಗಳೂರು ಬುಲ್ಸ್
U Mumba beat Bengaluru Bulls
Follow us
TV9 Web
| Updated By: Vinay Bhat

Updated on: Dec 23, 2021 | 7:17 AM

ಕೊರೋನಾದಿಂದ (Corona) ಕಳೆದ ಎರಡು ವರ್ಷಗಳಿಂದಲೂ ಸ್ಥಗಿತಗೊಂಡಿದ್ದ ಪ್ರೊ ಕಬಡ್ಡಿಗೆ (Pro Kabaddi 2021) ಬುಧವಾರ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಪ್ರೊ ಕಬಡ್ಡಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಒಂದೇ ದಿನ ಮೂರು ಪಂದ್ಯಗಳನ್ನು ಆಯೋಜಿಸಿದ್ದು ಕಬಡ್ಡಿ ಪ್ರೇಮಿಗಳ ಕುತೂಹಲ ಹೆಚ್ಚಿಸಿತು. ಈ ಹಿಂದಿನ ಆವೃತ್ತಿಗಳಲ್ಲಿ ಬೆಂಗಳೂರಿನ ಪ್ರತಿಷ್ಠಿತ ಕಂಠೀರವಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿತ್ತಾದರೂ ಇದೇ ಮೊದಲ ವೈಟ್‍ಫೀಲ್ಡ್‍ನ ಪ್ರತಿಷ್ಠಿತ ಶಾರ್ಟನ್ ಹೊಟೇಲ್‍ನಲ್ಲಿ ಕಬ್ಬಡಿ ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಗಿದೆ. ಅದರಂತೆ ನಿನ್ನೆ ನಡೆದ ಮೊದಲ ಪಂದ್ಯದಲ್ಲಿ ಅಭಿಷೇಕ್ ಸಿಂಗ್ ಅವರ ಅಮೋಘ ಆಟದ ಬಲದಿಂದ ಯು ಮುಂಬಾ (U Mumba) ತಂಡವು ಜಯಭೇರಿ ಬಾರಿಸಿತು. ಬೆಂಗಳೂರು ಬುಲ್ಸ್‌ (Bengaluru Bulls) ಸೋಲಿನ ಕಹಿಯುಂಡಿತು.

ಯು ಮುಂಬಾಗೆ ಬಲಿಷ್ಠ ಪೈಪೋಟಿ ನೀಡಿದ್ದ ಬೆಂಗಳೂರು ಬುಲ್ಸ್​ ಕೊನೆಯ ಹಂತದಲ್ಲಿ ಸ್ಟ್ಯಾಟರ್ಜಿ ಸರಿಯಿಲ್ಲದೇ ಸೋತಿದೆ. ಪವನ್​ಕುಮಾರ್ ಆರಂಭದಲ್ಲಿ ಅಬ್ಬರಿಸಿದ್ದರೆ, ಸೆಕೆಂಡ್ ಹಾಫ್ ನಲ್ಲಿ ಅವರ ಆಟ ನಡೆಯಲಿಲ್ಲ.  ಕೇವಲ ಪಂದ್ಯ ಮುಗಿಯಲು ಕೇವಲ 5 ನಿಮಿಷ ಇರುವಾಗ ಬೆಂಗಳೂರು ಬುಲ್ಸ್​ ತಂಡ ಯು ಮುಂಬಾಗೆ ಹೆಚ್ಚು ಪಾಯಿಂಟ್ಸ್​ ನೀಡಿತು.  ಹೀಗಾಗಿ ಕೊನೆಯ ಹಂತದಲ್ಲಿ ಬೆಂಗಳೂರು ಬುಲ್ಸ್​ ತಂಡ ಎಡವಿತು.  ಬೆಂಗಳೂರು ಬುಲ್ಸ್ 30 ಅಂಕ​ ಗಳಿಸಿದ್ರೆ,  ಯು ಮುಂಬಾ 46 ಅಂಕಗಳಿಸಿ ಗೆದ್ದು ಬೀಗಿತು.

ಬುಲ್ಸ್ ತಂಡವು ಪಂದ್ಯದಲ್ಲಿ ಉತ್ತಮ ಆರಂಭ ಮಾಡಿತ್ತು. 4-1ರ ಮುನ್ನಡೆ ಸಾಧಿಸಿತ್ತು. ಆದರೆ, ಬುಲ್ಸ್‌ ದಾಳಿಗೆ ತಕ್ಕ ರಕ್ಷಣಾ ತಂತ್ರ ಹೆಣೆದ ಮುಂಬೈನ ಅಭಿಷೇಕ್ ಒಂದರ ಹಿಂದೆ ಒಂದು ಪಾಯಿಂಟ್ ಗಳಿಸಿ ಬೆಂಗಳೂರಿನ ಮೇಲೆ ಒತ್ತಡ ಹೆಚ್ಚಿಸಿದರು. ಅವರ ಚಾಣಾಕ್ಷ ಆಟದ ಮುಂದೆ ಪವನ್ ಪಡೆಯು ಬಸವಳಿಯಿತು. ಆದರೆ, ಬುಲ್ಸ್‌ ತಂಡದ ರಂಜಿತ್ ಎರಡು ಸೂಪರ್ ರೇಡ್‌ಗಳ ಮೂಲಕ ಮಿಂಚಿದರು. ಅದಕ್ಕೂ ತಿರುಗೇಟು ನೀಡಿದ ಅಭಿಷೇಕ್ ಸೂಪರ್ ರೇಡ್‌ನಲ್ಲಿ ನಾಲ್ಕು ಪಾಯಿಂಟ್‌ಗಳನ್ನು ಜೇಬಿಗಿಳಿಸಿಕೊಂಡರು. ಇದರಿಂದಾಗಿ ಮುಂಬಾ ತಂಡವು ಮತ್ತೆ ಮುನ್ನಡೆಯತ್ತ ಹೊರಳಿತು.

ತೆಲುಗು ಟೈಟಾನ್ಸ್-ತಮಿಳ್ ತಲೈವಾಸ್ ಪಂದ್ಯ ಟೈ:

ಎರಡೂ ಅವಧಿಯ ಆಟದಲ್ಲಿ ಸ್ಥಿರ ನಿರ್ವಹಣೆ ತೋರಿದ ತೆಲುಗು ಟೈಟಾನ್ಸ್ ತಂಡ ಪಂದ್ಯದ ಕೊನೇ ಹಂತದಲ್ಲಿ ಸೋಲಿನಿಂದ ಪಾರಾಗಿ ತಮಿಳ್ ತಲೈವಾಸ್ ವಿರುದ್ಧ ಟೈ ಸಾಧಿಸುವಲ್ಲಿ ಯಶಸ್ಸು ಕಂಡಿತು. ಮೊದಲ ಅವಧಿಯ ಆಟದಲ್ಲಿ 21-23 ರಿಂದ ತಮಿಳ್ ತಲೈವಾಸ್ ಮುನ್ನಡೆ ಕಂಡಿದ್ದರೂ, 2ನೇ ಅವಧಿಯ ಆಟದಲ್ಲಿ 19 ಅಂಕ ಕಲೆಹಾಕಿತು. ತೆಲುಗು ಟೈಟಾನ್ಸ್ ಪರವಾಗಿ ಅಗ್ರ ರೈಡರ್ ಹಾಗೂ ನಾಯಕ ಸಿದ್ಧಾರ್ಥ್ ದೇಸಾಯಿ 11 ಅಂಕ ಸಂಪಾದನೆ ಮಾಡಿದರೆ, ತಮಿಳ್ ತಲೈವಾಸ್ ಪರವಾಗಿ ರೈಡರ್ ಮಂಜೀತ್ 12 ಅಂಕ ಸಂಪಾದಿಸಿದರು.

ನಿನ್ನೆ ನಡೆದ ಮೂರನೇ ಪಂದ್ಯದಲ್ಲಿ ಬಹುತೇಕ ಕರ್ನಾಟಕ ಆಟಗಾರರನ್ನೇ ಹೊಂದಿರುವ ಬೆಂಗಾಲ್ ವಾರಿಯರ್ಸ್ 38-33 ಅಂಕಗಳಿಂದ ಪ್ರದೀಪ್ ನರ್ವಾಲ್ ಇರುವ ಯುಪಿ ಯೋಧಾ ತಂಡವನ್ನು ಸೋಲಿಸಿತು.

VHT 2021: ಸರ್ವಿಸಸ್ ಎದುರು ತಲೆಬಾಗಿದ ಸಂಜು ಸ್ಯಾಮ್ಸನ್ ತಂಡ; ಕೇರಳದ ಸೆಮಿಫೈನಲ್‌ ಕನಸು ಭಗ್ನ

(Abhishek Singh shine U Mumba beat Bengaluru Bulls 46-30 in the inaugural match of Pro Kabaddi League season 8)

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ