ಇದೇ ವರ್ಷ ಸೆಪ್ಟೆಂಬರ್ 10 ರಿಂದ 25 ರವರೆಗೆ ಚೀನಾದ ಹಾಂಗ್ಝೌನಲ್ಲಿ ನಡೆಯಬೇಕಿದ್ದ 19ನೇ ಏಷ್ಯನ್ ಕ್ರೀಡಾಕೂಟವನ್ನು (Asian Games 2022) ನಂತರದ ದಿನಾಂಕಕ್ಕೆ ಮುಂದೂಡಲಾಗುವುದು ಎಂದು ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾದ ಮಹಾನಿರ್ದೇಶಕರು ತಿಳಿಸಿದ್ದಾರೆ. ಏಷ್ಯನ್ ಗೇಮ್ಸ್ ವಿಳಂಬಕ್ಕೆ ಯಾವುದೇ ಅಧಿಕೃತ ಕಾರಣವನ್ನು ನೀಡಲಾಗಿಲ್ಲ. ಆದರೆ ಕೋವಿಡ್ (Covid) ಪ್ರಕರಣಗಳ ಸೋಂಕು ಹೆಚ್ಚಳದ ಕಾರಣ, ಚೀನಾದಲ್ಲಿ (China) ಈಗ ಅದರ ವಿರುದ್ಧದ ಹೋರಾಟ ಮುಂದುವರೆದಿದೆ. ಈ ಹಿನ್ನಲೆಯ್ಲಲಿಯೇ, ಸೆಪ್ಟೆಂಬರ್‌ನಲ್ಲಿ ಆರಂಭವಾಗಬೇಕಿದ್ದಂತ ಏಷ್ಯಾನ್ ಕ್ರೀಡಾಕೂಟವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ವರದಿಯಾಗಿದೆ. ನೂತನ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಹಾಂಗ್ಝೌ ಶಾಂಘೈ ಸಮೀಪದಲ್ಲಿಯೇ ಇದ್ದು, ಆದರೆ ಶಾಂಘೈನಲ್ಲಿ ಕೊರೊನಾ ಹಾವಳಿ ಮಿತಿಮೀರಿದೆ. ಈ ಹಿನ್ನೆಲೆಯಲ್ಲಿ ಶಾಂಘೈನಲ್ಲಿ ಈಗಾಗಲೇ ಭಾಗಶಃ ಲಾಕ್ ಡೌನ್ ಹೇರಲಾಗಿದೆ.
ಏಷ್ಯನ್ ಗೇಮ್ಸ್‌ನಲ್ಲಿ ಭಾರತ: ಏಷ್ಯನ್ ಗೇಮ್ಸ್ ಟೂರ್ನಿ ಭಾರತೀಯ ಹಾಕಿ ತಂಡಕ್ಕೆ ಕಠಿಣ ಸವಾಲೊಡ್ಡುವದರಲ್ಲಿ ಅನುಮಾನವಿಲ್ಲ. ಪದಕ ಗೆಲ್ಲುವ ನೆಚ್ಚಿನ ತಂಡವಾಗಿ ಭಾರತ ಗುರುತಿಸಿಕೊಂಡಿದ್ದರೂ ಜಪಾನ್, ದಕ್ಷಿಣ ಕೊರಿಯಾ, ಮಲೇಶಿಯಾ ಮತ್ತು ಪಾಕಿಸ್ತಾನದಂತಾ ತಂಡಗಳ ಸವಾಲು ಮೀರಿ ನಿಲ್ಲಬೇಕಿದೆ. ಭಾರತ ಏಷ್ಯನ್ ಗೇಮ್ಸ್‌ನಲ್ಲಿ ಕೊನೆಯ ಬಾರಿ ಚಿನ್ನ ಗೆದ್ದುಕೊಂಡಿದ್ದು 2014ರಲ್ಲಿ.
ಹೆಚ್ಚಿನ ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:32 pm, Fri, 6 May 22