ಏಷ್ಯನ್ ಗೇಮ್ಸ್‌ನ (Asian Games) 14 ನೇ ದಿನವನ್ನು ಭಾರತವು ಅತ್ಯುತ್ತಮವಾಗಿ ಆರಂಭಿಸಿದೆ. ಯಾಕೆಂದರೆ ಬಿಲ್ಲುಗಾರಿಕೆಯಲ್ಲಿ ಭಾರತ ನಾಲ್ಕು ಪದಕಗಳನ್ನು ಬಾಚಿಕೊಂಡಿದೆ. ಜ್ಯೋತಿ ವೆನ್ನಮ್ ಅವರು ಮಹಿಳೆಯರ ಕಾಂಪೌಂಡ್ ಬಿಲ್ಲುಗಾರಿಕೆಯಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಅಂತೆಯೆ ಅದಿತಿ ಸ್ವಾಮಿ ಅವರು ಇದೇ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಇದು 2023 ರ ಏಷ್ಯನ್ ಗೇಮ್ಸ್‌ನಲ್ಲಿ ಜ್ಯೋತಿ ಅವರ ಮೂರನೇ ಚಿನ್ನದ ಪದಕವಾಗಿದೆ. ಈ ಹಿಂದೆ ಮಹಿಳಾ ಕಾಂಪೌಂಡ್ ಮತ್ತು ಮಿಶ್ರ ಸಂಯುಕ್ತ ತಂಡಗಳ ಈವೆಂಟ್‌ಗಳಲ್ಲಿ ಪದಕ ಬಾಚಿಕೊಂಡಿದ್ದರು.
ಅಂತೆಯೆ ಓಜಸ್ ಪ್ರವೀಣ್ 2023 ರ ಏಷ್ಯನ್ ಗೇಮ್ಸ್‌ನಲ್ಲಿ ಪುರುಷರ ಕಾಂಪೌಂಡ್ ಫೈನಲ್ ಅನ್ನು ಗೆಲ್ಲುವ ಮೂಲಕ ತಮ್ಮ ಮೂರನೇ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಅಭಿಷೇಕ್ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು. ಈ ಮೂಲಕ 2023 ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕಗಳ ಸಂಖ್ಯೆ 99ಕ್ಕೆ ಏರಿದೆ.
ಬಲಿಷ್ಠ ಪಾಕ್ ಬೌಲರ್ಗಳ ಎದುರು ಗೆಲುವಿಗಾಗಿ ಹೋರಾಡಿ ಸೋತ ಡಚ್ಚರು..!
ಜ್ಯೋತಿ ತನ್ನ ಮೊದಲ ಪ್ರಯತ್ನದಲ್ಲಿ ಒಂಬತ್ತು ರನ್ ಬಾರಿಸಿದ ನಂತರ ಕೊರಿಯಾದ ಚೈವಾನ್ ಸೋ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಮುನ್ನಡೆ ಸಾಧಿಸಿದರು. ಅಂತಿಮವಾಗಿ 149-145 ಅಂಕಗಳೊಂದಿಗೆ ಗೆದ್ದುಕೊಂಡರು. ಇದಕ್ಕೂ ಮುನ್ನ ಮಹಿಳೆಯರ ಕಾಂಪೌಂಡ್ ಸ್ಪರ್ಧೆಯಲ್ಲಿ ಇಂಡೋನೇಷ್ಯಾದ ಝಿಲಿಜಾಟಿ ಫಧ್ಲಿ ವಿರುದ್ಧ ಅದಿತಿ ಕಂಚಿನ ಪದಕ ಗೆದ್ದಿದ್ದರು. ಅಂತಿಮ ಎರಡು ಪಂದ್ಯಗಳು ಕ್ರಮವಾಗಿ 30 ಮತ್ತು 29 ಸ್ಕೋರ್ಗಳೊಂದಿಗೆ ಕೊನೆಗೊಂಡು ಅದಿತಿ 146-140 ಅಂಕಗಳೊಂದಿಗೆ ಸ್ಪರ್ಧೆಯಲ್ಲಿ ಜಯಗಳಿಸಿದರು.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:43 am, Sat, 7 October 23