ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ: ಶೂಟಿಂಗ್ ಸ್ಪರ್ಧೆಯಲ್ಲಿ ಭಾರತದ ಪುರುಷರಿಗೆ ಬಂಗಾರ
Men’s pistol shooting team wins gold: ಕೇವಲ ಒಂದು ಅಂಕಗಳ ಅಂತರದಲ್ಲಿ ಚೀನಾವನ್ನು ಸೋಲಿಸುವ ಮೂಲಕ ಭಾರತ ಶೂಟಿಂಗ್ ಸ್ಪರ್ಧೆಯಲ್ಲಿ ಮತ್ತೊಂದು ಬಂಗಾರದ ಪದಕ ಗೆದ್ದುಕೊಂಡಿದೆ. ವಿಯೆಟ್ನಾಂ ಪ್ರಬಲ ಪ್ರದರ್ಶನ ನೀಡಿ ಒಟ್ಟು 1730 ಅಂಕಗಳೊಂದಿಗೆ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿತು.
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ (Asian Games) ಭಾರತದ ಪದಕದ ಬೇಟೆ ಮುಂದುವರೆದಿದೆ. ಸರಬ್ಜೋತ್ ಸಿಂಗ್, ಶಿವ ನರ್ವಾಲ್ ಮತ್ತು ಅರ್ಜುನ್ ಸಿಂಗ್ ಚೀಮಾ ಅವರ ಪುರುಷರ ತಂಡ 10 ಮೀಟರ್ ಏರ್ ಪಿಸ್ತೂಲ್ನಲ್ಲಿ ಒಟ್ಟು 1734 ಸ್ಕೋರ್ ಗಳಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಕೇವಲ ಒಂದು ಅಂಕಗಳ ಅಂತರದಲ್ಲಿ ಚೀನಾವನ್ನು ಸೋಲಿಸುವ ಮೂಲಕ ಭಾರತಕ್ಕೆ ಮತ್ತೊಂದು ಬಂಗಾರದ ಪದಕ ತಂದುಕೊಟ್ಟರು.
ವಿಯೆಟ್ನಾಂ ಪ್ರಬಲ ಪ್ರದರ್ಶನ ನೀಡಿ ಒಟ್ಟು 1730 ಅಂಕಗಳೊಂದಿಗೆ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿತು. 580 ಅಂಕಗಳನ್ನು ಗಳಿಸಿದ ಸರಬ್ಜೋತ್ ಐದನೇ ಸ್ಥಾನವನ್ನು ಪಡೆದುಕೊಂಡರೆ, ಅರ್ಜುನ್ 578 ಅಂಕಗಳೊಂದಿಗೆ ವೈಯಕ್ತಿಕ ಅರ್ಹತಾ ಸ್ಪರ್ಧೆಯಲ್ಲಿ ಎಂಟನೇ ಸ್ಥಾನ ಪಡೆದರು. ಇವರಿಬ್ಬರೂ ಇಂದು ನಡೆಯಲಿರುವ ಪುರುಷರ 10 ಮೀಟರ್ ಏರ್ ಪಿಸ್ತೂಲ್ ಫೈನಲ್‌ನಲ್ಲಿ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಈ ಮೂಲಕ ಪ್ರಸಕ್ತ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 24ನೇ ಪದಕ ಹಾಗೂ ಶೂಟಿಂಗ್ ಕ್ರೀಡೆಯಲ್ಲಿ ನಾಲ್ಕನೇ ಚಿನ್ನದ ಪದಕ ಲಭಿಸಿದೆ.
Asian Games: ಕುದುರೆ ಸವಾರಿಯಲ್ಲಿ 41 ವರ್ಷಗಳ ಬಳಿಕ ಚಿನ್ನ ಗೆದ್ದ ಭಾರತ
ಇನ್ನು ಭಾರತದ ರೋಶಿಬಿನಾ ದೇವಿ ನವೋರೆಮ್ ಅವರು ಮಹಿಳೆಯರ 60Kg ವುಶು ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಗೆದ್ದರು. ಚಾಂಪಿಯನ್‌ಶಿಪ್ ಕ್ರೀಡೆಯಲ್ಲಿ ಭಾರತದ ಚೊಚ್ಚಲ ಚಿನ್ನದ ಪದಕವನ್ನು ಗೆಲ್ಲುವ ಅವಕಾಶವನ್ನು ರೋಶಿಬಿನಾ ಹೊಂದಿದ್ದರು. ಆದಾಗ್ಯೂ, ರೋಶಿಬಿನಾ ಚೀನಾದ ಕ್ಸಿಯಾವೊಯಿ ವು ವಿರುದ್ಧ 0-2 ರಿಂದ ಸೋತ ನಂತರ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು.
ಇದಕ್ಕೂ ಮೊದಲು ಏಷ್ಯನ್ ಗೇಮ್ಸ್‌ನಲ್ಲಿ ಭಾರತ ವುಶುನಲ್ಲಿ ಏಳು ಪದಕಗಳನ್ನು ಗೆದ್ದುಕೊಂಡಿತ್ತು, ಆದರೆ ಪ್ರತಿ ಬಾರಿಯೂ ಫೈನಲ್‌ನಲ್ಲಿ ಸೋತಿತ್ತು. 2010 ರಲ್ಲಿ, ಸಂಧ್ಯಾರಾಣಿ ದೇವಿ ವಾಂಗ್‌ಖೇಮ್ ವುಶುನಲ್ಲಿ ನಡೆದ ಏಷ್ಯನ್ ಗೇಮ್ಸ್ ಫೈನಲ್‌ನಲ್ಲಿ ಭಾಗವಹಿಸಿದ ಕೊನೆಯ ಭಾರತೀಯರಾಗಿದ್ದರು. ಇದೀಗ ರೋಶಿಬಿನಾ ದೇವಿ ಫೈನಲ್‌ನಲ್ಲಿ ಬಂಗಾರ ಗೆಲ್ಲಲು ವಿಫಲರಾದರು. ಆದರೆ, ಬೆಳ್ಳಿ ತಮ್ಮದಾಗಿಸಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:28 am, Thu, 28 September 23