ವಿಶ್ವ ಅಥ್ಲೆಟಿಕ್ಸ್​ನಲ್ಲಿ ಕಂಚು ಗೆದ್ದ ಕನ್ನಡತಿ ಪ್ರಿಯಾ ಮೋಹನ್​ಗೆ ಬಸವರಾಜ ಬೊಮ್ಮಾಯಿ ಅಭಿನಂದನೆ

Priya Mohan: ಆಗಸ್ಟ್ 18 ರಿಂದ 22 ರ ವರೆಗೆ ನೈರೋಬಿಯಲ್ಲಿ ನಡೆದಿದ್ದ ವಿಶ್ವ ಅಥ್ಲೆಟಿಕ್​ನಲ್ಲಿ ತುಮಕೂರು ಜಿಲ್ಲೆಯ ಹಬ್ಬತ್ತನಹಳ್ಳಿಯ ನಿವಾಸಿ ಪ್ರಿಯಾ ಕಂಚಿನ ಪದಕ ಗೆದ್ದಿದ್ದರು.

ವಿಶ್ವ ಅಥ್ಲೆಟಿಕ್ಸ್​ನಲ್ಲಿ ಕಂಚು ಗೆದ್ದ ಕನ್ನಡತಿ ಪ್ರಿಯಾ ಮೋಹನ್​ಗೆ ಬಸವರಾಜ ಬೊಮ್ಮಾಯಿ ಅಭಿನಂದನೆ
ಪ್ರಿಯಾ ಮೋಹನ್
Follow us
TV9 Web
| Updated By: ganapathi bhat

Updated on:Aug 25, 2021 | 8:31 PM

ದೆಹಲಿ: ವಿಶ್ವ ಅಥ್ಲೆಟಿಕ್ಸ್​ನ ಮಿಕ್ಸ್ ರಿಲೇಯಲ್ಲಿ ಕಂಚಿನ ಪದಕ ಗೆದ್ದಿದ್ದ ಕನ್ನಡತಿ ಪ್ರಿಯಾ ಮೋಹನ್​ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಇಂದು (ಆಗಸ್ಟ್ 25) ಅಭಿನಂದಿಸಿದ್ದಾರೆ. ಕಂಚಿನ ಪದಕ ವಿಜೇತ ಓಟಗಾರ್ತಿಗೆ ನವದೆಹಲಿಯ ಕರ್ನಾಟಕ ಭವನದಲ್ಲಿ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಆಗಸ್ಟ್ 18 ರಿಂದ 22 ರ ವರೆಗೆ ನೈರೋಬಿಯಲ್ಲಿ ನಡೆದಿದ್ದ ವಿಶ್ವ ಅಥ್ಲೆಟಿಕ್​ನಲ್ಲಿ ತುಮಕೂರು ಜಿಲ್ಲೆಯ ಹಬ್ಬತ್ತನಹಳ್ಳಿಯ ನಿವಾಸಿ ಪ್ರಿಯಾ ಕಂಚಿನ ಪದಕ ಗೆದ್ದಿದ್ದರು.

ಮೊದಲ ಬಾರಿಗೆ ವಿಶ್ವ ಅಥ್ಲೆಟಿಕ್​ನಲ್ಲಿ ಭಾರತಕ್ಕೆ ಪದಕ ಲಭಿಸಿದೆ. ಆ ತಂಡದಲ್ಲಿ ಕನ್ನಡತಿ ಪ್ರಿಯಾ ಮೋಹನ್ ಸ್ಥಾನ ಪಡೆದಿದ್ದರು. ಪ್ರಿಯಾ ಮೋಹನ್ ಮೂಲತಃ ತುಮಕೂರಿನ ಹಬ್ಬತ್ತನಹಳ್ಳಿಯವರು. ಹೀಗಾಗಿ, ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಇಂದು ಕೇಂದ್ರ ಕ್ರೀಡಾ ಸಚಿವರಾದ ಅನುರಾಗ್ ಠಾಕೂರ್ ಕೂಡ ಪ್ರಿಯಾಗೆ ಅಭಿನಂದನೆ ಸಲ್ಲಿಸಿದ್ದರು. ಭಾರತೀಯ ಅಥ್ಲೆಟಿಕ್ ಫೆಡರೇಶನ್​ನಿಂದ ಅಭಿನಂದನಾ ಸಮಾರಂಭ ಆಯೋಜನೆ ಮಾಡಲಾಗಿತ್ತು. ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್​ನಲ್ಲಿ ಅಭಿನಂದನಾ ಸಮಾರಂಭ ನಡೆದಿತ್ತು. ರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಈಗಾಗಲೇ 15 ಚಿನ್ನದ ಪದಕ ಗಳಿಸಿರುವ ಪ್ರಿಯಾ ಮೋಹನ್ ಈಗ ಹೊಸದೊಂದು ಸಾಧನೆ ಮಾಡಿದ್ದಾರೆ.

ಕೇಂದ್ರ ಸಚಿವರನ್ನು ಭೇಟಿಯಾದ ಬಸವರಾಜ ಬೊಮ್ಮಯಿ ಬುಧವಾರ ದೆಹಲಿಗೆ ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಕೃಷಿ ಸಚಿವ ತೋಮರ್ ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ತೋಮರ್​ ಜೊತೆಗೆ ಸಿಎಂ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಶೋಭಾ ಕರಂದ್ಲಾಜೆ ಹಾಗೂ ಜಲಸಂಪನ್ಮೂಲ ಖಾತೆ ಸಚಿವ ಕಾರಜೋಳ ಉಪಸ್ಥಿತರಿದ್ದರು. ಬಳಿಕ, ಕೇಂದ್ರ ಜಲಶಕ್ತಿ ಸಚಿವರನ್ನು ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ಗಜೇಂದ್ರಸಿಂಗ್​ ಶೇಖಾವತ್ ಭೇಟಿಯಾಗಿ, ಮಹದಾಯಿ, ಮೇಕೆದಾಟು ಯೋಜನೆ ಕುರಿತು ಚರ್ಚೆ ನಡೆಸಿದ್ದಾರೆ.

ಬಳಿಕ ಮಾತನಾಡಿದ ಬಸವರಾಜ ಬೊಮ್ಮಾಯಿ, ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶ ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರಿಗೆ ಈ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಶೀಘ್ರದಲ್ಲೇ ಡಿಪಿಆರ್​ಗೆ ಮಾನ್ಯತೆ ಸಿಗಲಿದೆ ಎಂದು ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ ಸಮಯ ಕೇಳಿದ್ದೇನೆ. ಅವರಿಗೆ ವೈಯಕ್ತಿಕ ಕೆಲಸವಿರುವ ಹಿನ್ನೆಲೆ ಮುಂದಿನ ವಾರ ಭೇಟಿಯಾಗಲು ತಿಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ವಿಶ್ವ ಅಂಡರ್-20 ಅಥ್ಲೆಟಿಕ್ಸ್​​​ನಲ್ಲಿ ಸತತವಾಗಿ ಎರಡು ವಿಶ್ವ ದಾಖಲೆ ಸ್ಥಾಪಿಸಿ 110 ಮೀ ಹರ್ಡಲ್ಸ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಜೋಯಾ

ಖ್ಯಾತ ಓಟಗಾರ್ತಿ ಪಿಟಿ ಉಷಾ ಗುರು, ಲೆಜೆಂಡರಿ ಅಥ್ಲೆಟಿಕ್ಸ್ ತರಬೇತುದಾರ ಒ.ಎಂ. ನಂಬಿಯಾರ್ ನಿಧನ

Published On - 8:15 pm, Wed, 25 August 21

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!