ಖೇಲೋ ಇಂಡಿಯಾದಲ್ಲಿ ಮಿಂಚಲು ಬಡತನ ಅಡ್ಡಿ: ಬಾಲಕಿಗೆ ಎಲ್ಲ ಸೌಲಭ್ಯ ಒದಗಿಸುತ್ತೇವೆ ಎಂದ ಸಿಎಂ ಬೊಮ್ಮಾಯಿ

ಟಿವಿ9ಗೆ ಸೈಕ್ಲಿಂಗ್ ಕ್ರೀಡಾಪಟು ಪವಿತ್ರಾ ಕುರ್ತಕೋಟಿ ಬಡತನದಿಂದ ತನ್ನ ಸಾಧನೆಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಅಳಲು ತೋಡಿಕೊಂಡಿದ್ದು, ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣ ಪ್ರತಿಕ್ರಿಯಿಸಿ ನೆರವಿನ ಭರವಸೆ ನೀಡಿದ್ದಾರೆ.

ಖೇಲೋ ಇಂಡಿಯಾದಲ್ಲಿ ಮಿಂಚಲು ಬಡತನ ಅಡ್ಡಿ: ಬಾಲಕಿಗೆ ಎಲ್ಲ ಸೌಲಭ್ಯ ಒದಗಿಸುತ್ತೇವೆ ಎಂದ ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
TV9 Web
| Updated By: Vinay Bhat

Updated on: Sep 09, 2021 | 12:10 PM

ಬೆಂಗಳೂರು (ಸೆ. 09): ಮಾಧ್ಯಮ ಲೋಕದ ಇತಿಹಾಸದಲ್ಲೇ ಟಿವಿ9 ವಿಶಿಷ್ಟ ಪ್ರಯತ್ನ ನಡೆಸಿದ್ದು, ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಅಲ್ಲೇ ಪರಿಹಾರ ಕಲ್ಪಿಸಲು ಕಾಮನ್ ಮ್ಯಾನ್​ಗೂ-CMಗೂ ಟಿವಿ9 ವೇದಿಕೆ ಸೃಷ್ಟಿಸಿದೆ. ಇದು ಮಾಧ್ಯಮ ಲೋಕದ ಇತಿಹಾಸದಲ್ಲೇ ವಿಶಿಷ್ಟ ಪ್ರಯತ್ನವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಟಿವಿ9 (Tv9) ಸ್ಟುಡಿಯೋದಲ್ಲಿ ಕಾಮನ್​ಮ್ಯಾನ್ ಜೊತೆ ಮುಕ್ತವಾಗಿ ಮಾತನಾಡುತ್ತಿದ್ದಾರೆ. ನೇರವಾಗಿ ಜನರ ಸಮಸ್ಯೆ ನೇರವಾಗಿ ಆಲಿಸಿ, ಸ್ಥಳದಲ್ಲೇ ಪರಿಹಾರ ನೀಡುವ ವ್ಯವಸ್ಥೆಗೆ ಟಿವಿ9 ವೇದಿಕೆ ಕಲ್ಪಿಸಿಕೊಟ್ಟಿದೆ. ಟಿವಿ9 ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ವೀಕ್ಷಕರು ಮುಕ್ತ ಮಾತುಕತೆ ನಡೆಸಿದ್ದಾರೆ. ವಿಪಕ್ಷಗಳ ಟೀಕೆಗೂ ಉತ್ತರ ನೀಡುತ್ತಾ, ತಜ್ಞರ ಸಲಹೆಗೂ ಮನ್ನಣೆ ನೀಡುತ್ತಾ CM ಸ್ಪೀಕಿಂಗ್ ಇದೀಗ ಟಿವಿ9ನಲ್ಲಿ ನಡೆದಿದೆ.

ಈವೇಳೆ ಟಿವಿ9ಗೆ ಸೈಕ್ಲಿಂಗ್ ಕ್ರೀಡಾಪಟು ಪವಿತ್ರಾ ಕುರ್ತಕೋಟಿ ಬಡತನದಿಂದ ತನ್ನ ಸಾಧನೆಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಅಳಲು ತೋಡಿಕೊಂಡಿದ್ದು, ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣ ಪ್ರತಿಕ್ರಿಯಿಸಿ ನೆರವಿನ ಭರವಸೆ ನೀಡಿದ್ದಾರೆ.

ಸಾಧನೆ ಶಿಖರವೇರಲು ಹೊರಟ ಛಲಗಾರ್ತಿ ಪವಿತ್ರಾ ಕುರ್ತಕೋಟಿ ಅವರಿಗೆ ಬಡತನ ಶಾಪವಾಗಿ ಪರಿಣಮಿಸಿದೆ. ಇವರಿಗೆ ಖೇಲೋ ಇಂಡಿಯಾದಲ್ಲಿ ಮಿಂಚಲು ತುಂಬಾನೆ ಆಸೆ. ಹೀಗಾಗಿ ಮುಖ್ಯಮಂತ್ರಿ ಬಳಿ ಸೈಕಲ್ ಕೊಡಿಸಿ ಸಾಧನೆಗೆ ಕೈಜೋಡಿ ಎಂದು ಕೇಳಿಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಲಕಿಗೆ ಸೈಕಲ್​ ಕೊಡಿಸುವ ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಕ್ರೀಡಾ ಇಲಾಖೆಯವರೊಂದಿಗೆ ಚರ್ಚಿಸಿ ಹಣಕಾಸು ನೆರವು ನೀಡುತ್ತೇವೆ. ನಿಮಗೆ ಯಾವ ಮಾಡೆಲ್ ಬೇಕೆಂದು ಕೇಳಿ ಸೈಕಲ್ ಕೊಡಿಸ್ತೇವೆ.  ಕೇವಲ ಸೈಕಲ್ ಮಾತ್ರವಲ್ಲ, ಎಲ್ಲ ಸೌಲಭ್ಯ ಒದಗಿಸುತ್ತೇವೆ ಎಂದು ಟಿವಿ9 ಸ್ಟುಡಿಯೋದಲ್ಲಿ ಸಿಎಂ ಹೇಳಿದ್ದಾರೆ.

ಇನ್ನೂ ಇದೇವೇಳೆ ಸಿಎಂ ಪರಿಹಾರ ನಿಧಿ ಬಾಬತ್ತಿನಲ್ಲಿ 2019ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ಪರಿಹಾರ ಚೆಕ್​ ಅನ್ನು ತಹಸೀಲ್ದಾರ್ ಚಾಮರಸ ಪಾಟೀಲ್​ ಅವರು ಫಲಾನುಭವಿಗೆ ನೀಡದೆ ಕಾಟಕೊಡುತ್ತಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನ ಸೆಳೆದಾಗ ಇದು ದುರದೃಷ್ಟಕರ ಸಂಗತಿ. ಅಧಿಕಾರಿಯಿಂದ ಲೋಪವಾಗಿದೆ. ರಾಯಚೂರು ಜಿಲ್ಲಾಧಿಕಾರಿಗೆ ಮಾತನಾಡಿ 24 ಗಂಟೆಯಲ್ಲಿ ಬಿಡುಗಡೆ ಮಾಡುವಂತೆ ಸೂಚಿಸುತ್ತೇನೆ. ಚೆಕ್​ ಲ್ಯಾಪ್ಸ್​  ​ಆಗಿದ್ದರೆ ಹೊಸದಾಗಿ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗೆ ಆದೇಶ ನೀಡಿರುವೆ ಎಂದು ಭರವಸೆ ನೀಡಿದರು. ಇದೇ ವೇಳೆ ಫಲಾನುಭವಿ ಜೊತೆಯೂ ಮಾತನಾಡಿದರು.

CM Bommai Interview LIVE: ಟಿವಿ9 ಸ್ಟುಡಿಯೋದಲ್ಲಿ ಸಿಎಂ ಬೊಮ್ಮಾಯಿ; ಕಾಮನ್​ಮ್ಯಾನ್ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ