Cristiano Ronaldo: ದಿಗ್ಗಜ ಫುಟ್ಬಾಲಿಗ ಕ್ರಿಸ್ಟಿಯಾನೋ ರೊನಾಲ್ಡೋ ಗಂಡು ಮಗು ಸಾವು

ರೊನಾಲ್ಡೋ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಜಾರ್ಜಿನಾ ರೊಡ್ರಿಗಸ್ ಅವರೊಂದಿಗೆ ಫೋಟೋ ಹಂಚಿಕೊಂಡು ಅವಳಿ ಮಕ್ಕಳನ್ನು ನಿರೀಕ್ಷಿಸುತ್ತಿದ್ದೇವೆ ಎಂಬ ಖುಷಿ ವಿಚಾರವನ್ನು ಬಹಿರಂಗ ಪಡಿಸಿದ್ದರು. ಆದರೆ ಗಂಡು ಮಗು ಸತ್ತಿದ್ದು ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ  ಹೇಳಿಕೊಂಡಿದ್ದಾರೆ.

Cristiano Ronaldo: ದಿಗ್ಗಜ ಫುಟ್ಬಾಲಿಗ ಕ್ರಿಸ್ಟಿಯಾನೋ ರೊನಾಲ್ಡೋ ಗಂಡು ಮಗು ಸಾವು
Cristiano Ronaldo
Follow us
TV9 Web
| Updated By: Vinay Bhat

Updated on: Apr 19, 2022 | 7:26 AM

ದಿಗ್ಗಜ ಫುಟ್ಬಾಲಿಗ ಕ್ರಿಸ್ಟಿಯಾನೋ ರೊನಾಲ್ಡೋ (Cristiano Ronaldo) ತನ್ನ ನವಜಾತ ಅವಳಿಗಳಲ್ಲಿ ಒಂದು ಮಗು ಬದುಕುಳಿದಿಲ್ಲ ಎಂದು ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ (Social Media) ಬರೆದುಕೊಂಡಿರುವ ಇವರು ಈ ಕಷ್ಟದ ಸಮಯದಲ್ಲಿ ಗೌಪ್ಯತೆಯನ್ನು ವಿನಂತಿಸುತ್ತೇವೆ ಎಂದು ಹೇಳಿದ್ದಾರೆ. ಮ್ಯಾಂಚೆಸ್ಟರ್ ಯುನೈಟೆಡ್ (Manchester United) ಸ್ಟಾರ್ ಪಾಲುದಾರ ರೊನಾಲ್ಡೋ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಜಾರ್ಜಿನಾ ರೊಡ್ರಿಗಸ್ ಅವರೊಂದಿಗೆ ಫೋಟೋ ಹಂಚಿಕೊಂಡು ಅವಳಿ ಮಕ್ಕಳನ್ನು ನಿರೀಕ್ಷಿಸುತ್ತಿದ್ದೇವೆ ಎಂಬ ಖುಷಿ ವಿಚಾರವನ್ನು ಬಹಿರಂಗ ಪಡಿಸಿದ್ದರು. ಆದರೆ ಗಂಡು ಮಗು ಸತ್ತಿದ್ದು ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ  ಹೇಳಿಕೊಂಡಿದ್ದಾರೆ.

“ನಮ್ಮ ಗಂಡು ಮಗು ತೀರಿಕೊಂಡಿದೆ ಎಂದು ನಾವು ದುಃಖದಿಂದ ಘೋಷಿಸಬೇಕಾಗಿದೆ. ಇದು ಯಾವುದೇ ಪೋಷಕರು ಅನುಭವಿಸಬಹುದಾದ ದೊಡ್ಡ ನೋವು. ನಮ್ಮ ಹೆಣ್ಣು ಮಗುವಿನ ಜನನವು ಈ ಕ್ಷಣದಲ್ಲಿ ಸ್ವಲ್ಪ ಭರವಸೆ ಮತ್ತು ಸಂತೋಷದಿಂದ ಬದುಕುವ ಶಕ್ತಿಯನ್ನು ನೀಡುತ್ತಿದೆ. ವೈದ್ಯರು ಮತ್ತು ದಾದಿಯರ ಆರೈಕೆ ಮತ್ತು ಬೆಂಬಲಕ್ಕಾಗಿ ನಾವು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇವೆ. ಈ ನಷ್ಟದಿಂದ ನಾವು ದುಖಿತರಾಗಿದ್ದೇವೆ ಮತ್ತು ಈ ಕಷ್ಟದ ಸಮಯದಲ್ಲಿ ಗೌಪ್ಯತೆಯನ್ನು ವಿನಂತಿಸುತ್ತೇವೆ. ಮಗು ನೀನು ನಮ್ಮ ದೇವತೆ. ನಾವು ಯಾವಾಗಲೂ ನಿನ್ನನ್ನು ಪ್ರೀತಿಸುತ್ತೇವೆ,” ಎಂದು ರೊನಾಲ್ಡೋ ಹೇಳಿದ್ದಾರೆ.

ಕ್ರಿಸ್ಟಿಯಾನೋ ರೊನಾಲ್ಡೋ ಅವರು, ನಾವು 6ನೇ ಮಗುವನ್ನು ಸ್ವಾಗತಿಸಲು ತುದಿಗಾಲಿನಲ್ಲಿ ನಿಂತಿದ್ದೇವೆ ಎಂದು ಕಳೆದ ಅಕ್ಟೋಬರ್​​ನಲ್ಲಿ ತಿಳಿಸಿದ್ದರು. ತನ್ನ ಗೆಳತಿ ಜಾರ್ಜಿನಾ ರೋರ್ಡ್ರಿಗಸ್‌ ಅವರೊಂದಿಗೆ ಅವಳಿ ಮಗು ಪಡೆಯುವ ವಿಚಾರವನ್ನು ಸಾಮಾಜಿಕ ಜಾಲತಾಣವಾದ ಮೂಲಕ ಖಚಿತಪಡಿಸಿದ್ದರು. ಅಂದಹಾಗೆ, ಜಾರ್ಜಿನಾ ರೋರ್ಡ್ರಿಗಸ್‌ ರೊನಾಲ್ಡೋ ಅವರ ಗರ್ಲ್‌ ಫ್ರೆಂಡ್‌. ಇದಕ್ಕೂ ಮೊದಲೇ ರೊನಾಲ್ಡೋ ತಮ್ಮ ಬೇರೆ ಬೇರೆ ಗರ್ಲ್‌ ಫ್ರೆಂಡ್‌ಗಳಿಂದ 4 ಮಕ್ಕಳಿಗೆ ತಂದೆಯಾಗಿದ್ದಾರೆ.

ರೊನಾಲ್ಡೋ ಇದುವರೆಗೆ ಯಾರನ್ನೂ ವಿವಾಹವಾಗಿಲ್ಲ. ರೊನಾಲ್ಡೋ ಜಾರ್ಜಿನಾ ರೋಡ್ರಿಗಸ್‌ ಜೊತೆಗೂ ಕೆಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ. ಈ ಜೋಡಿಗೆ ಈಗಾಗಲೇ 3 ವರ್ಷದ ಒಬ್ಬಳು ಮಗಳಿದ್ದಾಳೆ. ಆಕೆಗೆ ಮಾರ್ಟಿನಾ ಎಂದು ಹೆಸರಿಟ್ಟಿದ್ದಾರೆ. ಕ್ರಿಸ್ಟಿಯಾನೋ ರೊನಾಲ್ಡೋ 2010ರಲ್ಲಿ ಬಾಡಿಗೆ ತಾಯಿಯ ಮೂಲಕ ಕ್ರಿಸ್ಟಿಯಾನೋ ಜೂನಿಯರ್ ಎನ್ನುವ ಮಗನನ್ನು ಪಡೆದರು. ಇದಾದ 7 ವರ್ಷಗಳ ಬಳಿಕ ರೊನಾಲ್ಡೋ ಇಬ್ಬರು ಅವಳಿ ಮಕ್ಕಳಿಗೆ ತಂದೆಯಾದರು. ಜಾರ್ಜಿನಾ ಓರ್ವ ಮಾಡೆಲ್ ಆಗಿದ್ದಾರೆ. 2016ರಲ್ಲಿ ಸ್ಪೇನ್‌ನಲ್ಲಿ ರೊನಾಲ್ಡೋ ಹಾಗೂ ಜಾರ್ಜಿನಾ ಮೊದಲ ಬಾರಿಗೆ ಭೇಟಿಯಾಗಿದ್ದರು. ಭೇಟಿ ಪರಿಚಯಕ್ಕೆ ತಿರುಗಿ ಆನಂತರ ಡೇಟಿಂಗ್ ನಡೆಸಲಾರಂಭಿಸಿದರು.  ಇದಕ್ಕೂ ಮೊದಲು ರೊನಾಲ್ಡೋ ಮಾಜಿ ಮಿಸ್‌ ಸ್ಪೇನ್‌ ಜತೆ ಡೇಟಿಂಗ್ ನಡೆಸುತ್ತಿದ್ದರು. ಜಾರ್ಜಿನಾ ಪರಿಚಯದ ಬಳಿಕ ಹಳೆಯ ಗೆಳತಿಯ ಜತೆ ರೊನಾಲ್ಡೋ ಬ್ರೇಕ್ ಅಪ್ ಮಾಡಿಕೊಂಡರು. ಇದೀಗ ಜಾರ್ಜಿನಾ ಜತೆ 5 ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ.

IPL 2022: ಎಲ್ಲಾ ಆಟಗಾರರ ಕೋವಿಡ್ ಟೆಸ್ಟ್ ವರದಿ ಪ್ರಕಟ: ಒಬ್ಬ ಆಟಗಾರ ಔಟ್

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ