ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಉದ್ಘಾಟಿಸಲಿರುವ ಉಪರಾಷ್ಟ್ರಪತಿ; 8 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಭಾಗಿ

ಏಪ್ರಿಲ್ 24 ರಿಂದ ಮೇ 3 ವರೆಗೆ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾ ಕೂಟದಲ್ಲಿ ದೇಶದ 200ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಿಂದ 8 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು, ಸಿಬ್ಬಂದಿಗಳು ಪಾಲ್ಗೊಳ್ಳಲಿದ್ದಾರೆ. ಜೈನ್ ವಿ.ವಿ ಕ್ಯಾಂಪಸ್, ಕಂಠೀರವ ಕ್ರೀಡಾಂಗಣದಲ್ಲಿ ಸ್ಪರ್ಧೆಗಳು ನಡೆಯಲಿವೆ.

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಉದ್ಘಾಟಿಸಲಿರುವ ಉಪರಾಷ್ಟ್ರಪತಿ; 8 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಭಾಗಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on:Mar 30, 2022 | 3:00 PM

‘ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್’ (Khelo India) ಎರಡನೇ ಆವೃತ್ತಿಯ ಆಯೋಜನೆ ಕರ್ನಾಟಕಕ್ಕೆ ಸಿಕ್ಕಿರುವುದು ಹೆಮ್ಮೆಯ ವಿಷಯ ಎಂದು ಕ್ರೀಡಾ ಸಚಿವ ನಾರಾಯಣ ಗೌಡ ನುಡಿದಿದ್ದಾರೆ. ವಿಧಾನಸೌಧದಲ್ಲಿ ನಡೆದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಏಪ್ರಿಲ್ 24 ರಿಂದ ಮೇ 3 ವರೆಗೆ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾ ಕೂಟದಲ್ಲಿ ದೇಶದ 200ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಿಂದ 8 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು, ಸಿಬ್ಬಂದಿಗಳು ಪಾಲ್ಗೊಳ್ಳಲಿದ್ದಾರೆ. ಜೈನ್ ವಿ.ವಿ ಕ್ಯಾಂಪಸ್, ಕಂಠೀರವ ಕ್ರೀಡಾಂಗಣದಲ್ಲಿ ಗೇಮ್ಸ್‌ಗಳು ನಡೆಯಲಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಏಪ್ರಿಲ್ 1 ರಂದು ಕ್ರೀಡಾಕೂಟದ ಲೋಗೋ, ಥೀಮ್ ಸಾಂಗ್, ಜೆರ್ಸಿ, ಮೊಬೈಲ್ ಆ್ಯಪ್ ಅನ್ನು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವ ನಾರಾಯಣ ಗೌಡ ಮಾಹಿತಿ ನೀಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಯುವಜನ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್, ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ ಸಚಿವ ನಿಶಿತ್ ಪ್ರಾಮಾಣಿಕ್, ಉನ್ನತ ಶಿಕ್ಷಣ ಸಚಿವ ಡಾ.‌ ಅಶ್ವಥ್ ನಾರಾಯಣ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಏಪ್ರಿಲ್ 24 ರಂದು ‘ಖೇಲೊ ಇಂಡಿಯಾ ಯೂನಿವರ್ಸಿಟಿ ಗೇಮ್ಸ್’ ಉದ್ಘಾಟನೆಗೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮಿಸಲಿದ್ದಾರೆ. 10 ದಿನಗಳ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಜೂಡೋ,‌ ವಾಲಿಬಾಲ್, ಕಬಡ್ಡಿ, ಬಾಸ್ಕೆಟ್ ಬಾಲ್ , ಕರಾಟೆ ಸೇರಿದಂತೆ 20 ಕ್ರೀಡಾ ಸ್ಪರ್ಧೆಗಳು ನಡೆಯಲಿವೆ.

Narayana gowda

ಸಚಿವ ನಾರಾಯಣ ಗೌಡ ಸುದ್ದಿಗೋಷ್ಠಿ

‘‘ಈ ಕ್ರೀಡಾಕೂಟವನ್ನು ಅದ್ದೂರಿಯಾಗಿ ಆಯೋಜಿಸಲು ಆರು ತಿಂಗಳಿನಿಂದ ಸಿದ್ದತೆ ನಡೆಸುತ್ತಿದ್ದು, ಕಳೆದ ಎರಡು ತಿಂಗಳಿಂದ ಪ್ರತಿನಿತ್ಯ ವಿಶೇಷ ನಿಗಾವಹಿಸಿ ಸಿದ್ದತೆ ಮಾಡಿಕೊಳ್ಳಲಾಗಿದೆ. ಕ್ರೀಡೆ ಜೊತೆಯಲ್ಲಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸುವುದು ಸರಕಾರದ ಉದ್ದೇಶ. ಈ ಕಾರಣಕ್ಕಾಗಿ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಅನ್ನು ಹಸಿರು ಕ್ರೀಡಾಕೂಟ, ಗ್ರೀನ್ ಗೇಮ್ಸ್ ಎಂದು ಘೋಷಣೆ ಮಾಡಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಾಧನೆ ಕುರಿತ ಕಾರ್ಯಪಥ ಪುಸ್ತಕವನ್ನು ಅನುರಾಗ್ ಠಾಕೂರ್ ಬಿಡುಗಡೆಗೊಳಿಸಲಿದ್ದಾರೆ’’ ಎಂದು ಸಚಿವ ನಾರಾಯಣ ಗೌಡ ಮಾಹಿತಿ ನೀಡಿದ್ದಾರೆ.

ಖೇಲೋ ಇಂಡಿಯಾ ಯೋಜನೆಯಡಿ ವಿವಿಧ ರಾಜ್ಯಗಳ 9 ಶಾಲೆ ಮತ್ತು 28 ಸೇನಾ ಬಾಲಕರ ಕ್ರೀಡಾ ಘಟಕಗಳನ್ನು ರಾಜ್ಯಮಟ್ಟದ ಖೇಲೋ ಇಂಡಿಯಾ ಕೇಂದ್ರಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವಾಲಯ ಇತ್ತೀಚೆಗಷ್ಟೇ ತಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ:

Pak Vs Aus: ಮಿಸ್​ಫೀಲ್ಡಿಂಗ್​ ಮಾಡಿದ ಪಾಕ್ ಆಟಗಾರ; ಆದರೂ ರನ್​ ಔಟ್ ಆದ ಆಸ್ಟ್ರೇಲಿಯಾ ಬ್ಯಾಟರ್- ಹೇಗೆ? ವಿಡಿಯೋ ಇಲ್ಲಿದೆ

Devon Conway: ‘ನಿಮ್ಮ ನಾಯಕತ್ವದಲ್ಲಿ ನಾನು ಆಡಬೇಕು’; ಕಿವೀಸ್ ಆಟಗಾರನ ಕೋರಿಕೆಗೆ ಧೋನಿ ಉತ್ತರ ಏನಿತ್ತು?

Published On - 2:58 pm, Wed, 30 March 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್