ಅಂತರರಾಷ್ಟ್ರೀಯ ಕ್ರೀಡೆಯಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಐಎಎಸ್ ಅಧಿಕಾರಿ ಸುಹಾಸ್ ಬಗ್ಗೆ ನಿಮಗೆಷ್ಟು ಗೊತ್ತು?

Suhas Lalinakere Yathiraj: ಸುಹಾಸ್‌ ಎಲ್.ವೈ. ಹಾಸನ ಮೂಲದವರಾದರೂ ಕರಾವಳಿಯ ನಂಟು ಬೆಸೆದಿದೆ. ಎನ್‌ಐಟಿಕೆ ಸುರತ್ಕಲ್‌ನಲ್ಲಿ ಇವರು ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌ ಪದವಿ ಪಡೆದಿದ್ದರು.

ಅಂತರರಾಷ್ಟ್ರೀಯ ಕ್ರೀಡೆಯಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಐಎಎಸ್ ಅಧಿಕಾರಿ ಸುಹಾಸ್ ಬಗ್ಗೆ ನಿಮಗೆಷ್ಟು ಗೊತ್ತು?
Suhas Lalinakere Yathiraj
Follow us
TV9 Web
| Updated By: Vinay Bhat

Updated on: Aug 20, 2021 | 2:36 PM

ಸುಹಾಸ್ ಲಲಿನಕೆರೆ ಯತಿರಾಜ್. ಪ್ಯಾರಾ-ಬ್ಯಾಂಡ್ಮಿಂಟನ್‌ ಆಟಗಾರನಾಗಿರುವ ಇವರು 2007ರ ಬ್ಯಾಚ್‌ನ ಐಎಎಸ್‌ ಅಧಿಕಾರಿ. ಪ್ರಯಾಗ್‌ರಾಜ್‌ ಸೇರಿದಂತೆ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಕಳೆದ ಒಂದು ವರ್ಷದಿಂದ ನೋಯ್ಡಾದ ಡಿಎಂ ಆಗಿ ಜಿಲ್ಲೆಯ ಕೋವಿಡ್‌ ವಿರುದ್ಧದ ಸಮರದ ನೇತೃತ್ವ ವಹಿಸಿದ್ದಾರೆ.

ಸುಹಾಸ್‌ ಎಲ್.ವೈ. ಹಾಸನ ಮೂಲದವರಾದರೂ ಕರಾವಳಿಯ ನಂಟು ಬೆಸೆದಿದೆ. ಎನ್‌ಐಟಿಕೆ ಸುರತ್ಕಲ್‌ನಲ್ಲಿ ಇವರು ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌ ಪದವಿ ಪಡೆದಿದ್ದರು. 2004ರ ಬ್ಯಾಚ್‌ನ ವಿದ್ಯಾರ್ಥಿಯಾಗಿದ್ದ ಸುಹಾಸ್‌ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು. 2016ರ ಬೀಜಿಂಗ್‌ ಏಶ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ, 2017ರ ಟರ್ಕಿಶ್‌ ಓಪನ್‌ ಬ್ಯಾಡ್ಮಿಂಟನ್‌ನಲ್ಲಿ ಅವಳಿ ಚಿನ್ನ ಗೆದ್ದ ಹೆಗ್ಗಳಿಕೆ ಸುಹಾಸ್‌ ಅವರದು. ಈ ಮೂಲಕ ಅಂತರಾಷ್ಟ್ರೀಯ ಕ್ರೀಡೆಯಲ್ಲಿ  ಚಿನ್ನ ಗೆದ್ದ ಭಾರತದ ಮೊದಲ ಐಎಎಸ್ ಅಧಿಕಾರಿ ಎಂಬ ಹೆಗ್ಗಳಿಕೆ ಇವರಿಗಿದೆ.

ಸದ್ಯ ಮೆನ್ಸ್​ ಸಿಂಗಲ್ಸ್​ನಲ್ಲಿ ಮೂರನೇ ರಾಂಕ್​ ಗಳಿಸಿದ ಅವರ ಸಾಧನೆಯ ಆಧಾರದ ಮೇಲೆ ಅವರನ್ನು ಪ್ಯಾರಾಲಿಂಪಿಕ್ಸ್​ಗೆ ಆಯ್ಕೆ ಮಾಡಲಾಗಿದೆ. ಬ್ಯಾಡ್ಮಿಂಟನ್ ವರ್ಲ್ಡ್​ ಫೆಡರೇಶನ್​ನ ಆಹ್ವಾನದ ಮೇರೆಗೆ, ಟೋಕಿಯೋದಲ್ಲಿ ನಡೆಯಲಿರುವ ಪ್ಯಾರಾಲಿಂಪಿಕ್ಸ್‌ ಬ್ಯಾಡ್ಮಿಂಟನ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

“ದೇಶವನ್ನು ಪ್ರತಿನಿಧಿಸುವುದು ಗೌರವದ ವಿಷಯ. ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವ ಹಿಸುತ್ತಿರುವ ಮೂಲಕ ನನ್ನ ಕನಸು ನನಸಾಗುತ್ತಿದೆ. ಕರ್ತವ್ಯದ ಜತೆಯಲ್ಲೇ ಕ್ರೀಡಾಕೂಟದಲ್ಲಿ ಭಾಗವಹಿಸಲು ನಿತ್ಯ ಅಭ್ಯಾಸದಲ್ಲಿ ತೊಡಗಿಕೊಳ್ಳುತ್ತೇನೆ. ಪ್ಯಾರಾಲಿಂಪಿಕ್ಸ್‌ಗಾಗಿ ಒಂದು ವಾರವಷ್ಟೇ ರಜೆಯಲ್ಲಿ ತೆರಳಲಿದ್ದೇನೆ. ಇದರಿಂದ ತನ್ನ ಆಡಳಿತಾತ್ಮಕ ಕರ್ತವ್ಯಕ್ಕೆ ಅಡ್ಡಿಯಾಗದು’ ಎಂದು ಸುಹಾಸ್‌ ಹೇಳಿದ್ದಾರೆ.

“ಭಗವದ್ಗೀತೆಯ ಶ್ಲೋಕಗಳನ್ನು ನಾನು ನಂಬುತ್ತೇನೆ. ನಿಮ್ಮ ಕಾರ್ಯವನ್ನು ಮಾಡಿ ಮತ್ತು ನೀವು ಫಲಾಪೇಕ್ಷಗಳನ್ನು ಪಡೆಯುತ್ತೀರಿ. ನಾನು ಯಾವುದೇ ಒತ್ತಡಕ್ಕೆ ಒಳಗಾಗುತ್ತಿಲ್ಲ. ದೇವರು ನನ್ನನ್ನು ಈ ಮಟ್ಟಕ್ಕೆ ಕರೆತಂದಿದ್ದರೆ, ನನ್ನ ಎಲ್ಲ ಪ್ರಯತ್ನಗಳನ್ನು ನಾನು ಮಾಡಲಿದ್ದೇನೆ ”ಎಂದು ಹೇಳಿದರು.

ಪ್ಯಾರಾಲಿಂಪಿಕ್ಸ್‌ ಬ್ಯಾಡ್ಮಿಂಟನ್‌ಗಾಗಿ ಭಾರತ 7 ಸದಸ್ಯರ ಬಲಿಷ್ಠ ತಂಡವನ್ನು ರವಾನಿಸಲಿದೆ. ಸುಹಾಸ್‌ ಎಸ್‌ಎಲ್‌4 ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ.

Cricket Match: 1900ರ ಒಲಿಂಪಿಕ್ಸ್‌ನಲ್ಲಿ ಈ ದಿನದಂದು ನಡೆದಿತ್ತು ಏಕೈಕ ಕ್ರಿಕೆಟ್ ಪಂದ್ಯ: ಯಾರಿಗೆ ಗೆಲುವು?

IPL 2021: ಆರ್​ಸಿಬಿಗೆ ಬಿಗ್ ಶಾಕ್: ತಂಡದ ಸ್ಟಾರ್ ಆಟಗಾರ ಐಪಿಎಲ್ 2021 ರಿಂದಲೇ ಹೊರಕ್ಕೆ

(Meet Suhas LY who is Indias first IAS officer to win gold at an international sporting event)

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ