AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Neeraj Chopra: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್ ಫೈನಲ್​​ಗೆ ನೀರಜ್ ಚೋಪ್ರಾ: ಇತಿಹಾಸ ನಿರ್ಮಿಸುತ್ತಾರ ಚಿನ್ನದ ಹುಡುಗ

World Athletics Championships: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​ನ ಅರ್ಹತಾ ಸುತ್ತಿನಲ್ಲಿ 88.39 ಮೀಟರ್ ದೂರದ ಸಾಧನೆ ಗೈದ ನೀರಜ್ ಚೋಪ್ರಾ ಮೊದಲ ಎಸೆತದಲ್ಲೇ ಫೈನಲ್ ತಲುಪಿದ ಸಾಧನೆ ಮಾಡಿದರು.

Neeraj Chopra: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್ ಫೈನಲ್​​ಗೆ ನೀರಜ್ ಚೋಪ್ರಾ: ಇತಿಹಾಸ ನಿರ್ಮಿಸುತ್ತಾರ ಚಿನ್ನದ ಹುಡುಗ
Neeraj Chopra
TV9 Web
| Updated By: Vinay Bhat|

Updated on:Jul 22, 2022 | 7:25 AM

Share

ಭಾರತದ ನೀರಜ್ ಚೋಪ್ರಾ (Neeraj Chopra) ಅವರು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​ನ (World Athletics Championships) ಪುರುಷರ ಜಾವೆಲಿನ್ ಥ್ರೋನಲ್ಲಿ (Javelin throw) ಫೈನಲ್​ಗೆ ಪ್ರವೇಶ ಪಡೆದಿದ್ದಾರೆ. ಅರ್ಹತಾ ಸುತ್ತಿನಲ್ಲಿ 88.39 ಮೀಟರ್ ದೂರದ ಸಾಧನೆ ಗೈದ ಚೋಪ್ರಾ ಮೊದಲ ಎಸೆತದಲ್ಲೇ ಫೈನಲ್ ತಲುಪಿದ ಸಾಧನೆ ಮಾಡಿದರು. ಇದೀಗ ಭಾನುವಾರ ಮುಂಜಾನೆ ನಡೆಯಲಿರುವ ಫೈನಲ್‌ನಲ್ಲಿ ಸ್ಪರ್ಧಿಸಲಿದ್ದಾರೆ. ಕಳೆದ ತಿಂಗಳು ಸ್ಟಾಕ್‌ಹೋಮ್‌ನಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್‌ನಲ್ಲಿ ನೀರಜ್ 89.94 ಮೀಟರ್‌ಗಳ ಹೊಸ ರಾಷ್ಟ್ರೀಯ ದಾಖಲೆಯನ್ನು ಸ್ಥಾಪಿಸಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದರು. ಚೋಪ್ರಾ ಈ ಬಾರಿ ಕೂಡ ಚಿನ್ನದ ಪದಕ ಗೆಲ್ಲುವ ನೆಚ್ಚಿನ ಆಟಗಾರನಾಗಿದ್ದಾರೆ.

ಈ ಋತುವಿನಲ್ಲಿ ಅದ್ಭುತ ಫಲಿತಾಂಶಗಳನ್ನು ಕಂಡಿರುವ ಸ್ಟಾರ್ ಅಥ್ಲೀಟ್ ಎರಡು ಬಾರಿ ತನ್ನ ವೈಯಕ್ತಿಕ ಸಾಧನೆಯನ್ನೇ ಮುರಿದಿದ್ದಾರೆ. ಕಳೆದ ಜೂನ್ 14 ರಂದು ಫಿನ್‌ಲ್ಯಾಂಡ್‌ನಲ್ಲಿ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ 89.30 ಮೀ. ಮತ್ತು ಕಳೆದ ತಿಂಗಳು 89.94 ಮೀ ಎಸೆದ ಸಾಧನೆ ಗೈದಿದ್ದರು. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ನೀರಜ್ ಗೆದ್ದಿದ್ದೇ ಆದಲ್ಲಿ ಪದಕ ಗೆದ್ದ ದೇಶದ ಎರಡನೇ ಮತ್ತು ಮೊದಲ ಪುರುಷ ಆಟಗಾರನಾಗುತ್ತಾರೆ.

9 ವರ್ಷಗಳ ಇತಿಹಾಸ ಹೊಂದಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​ನಲ್ಲಿ ಭಾರತ ಪದಕ ಗೆದ್ದಿದ್ದು ಕೇವಲ 1 ಬಾರಿ ಮಾತ್ರ. 2003 ರಲ್ಲಿ ಪ್ಯಾರಿಸ್​ನಲ್ಲಿ ನಡೆದ ಕೂಟದಲ್ಲಿ ಲೆಜೆಂಡರಿ ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ಅವರು 6.70 ಮೀ ಜಿಗಿತದೊಂದಿಗೆ ಕಂಚಿನ ಪದಕ ಗೆದ್ದುಕೊಂಡಿದ್ದರು. ಇದಾದ ಬಳಿಕ ಯಾವುದೇ ಕ್ರೀಡಾಪಟುವು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​ನಲ್ಲಿ ತಮ್ಮ ಸಾಮರ್ಥ್ಯವನ್ನು ತೆರೆದಿಡಲು ಸಾಧ್ಯವಾಗಿಲ್ಲ. ಇದೀಗ ಸುದೀರ್ಘ ಇತಿಹಾಸದಲ್ಲಿ ದೇಶದ ಮೊಟ್ಟಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ವಿಶ್ವ ಚಾಂಪಿಯನ್ ಆಗುವ ಗುರಿಯನ್ನು ಹೊಂದಿರುವ ನೀರಜ್ ಚೋಪ್ರಾ ಫೈನಲ್​ ಪ್ರವೇಶಿಸಿದ್ದಾರೆ.

ಇದನ್ನೂ ಓದಿ
Image
Asia Cup2022: ಏಷ್ಯಾ ಕಪ್ ಆಯೋಜನೆಗೆ ಅಧಿಕೃತ ಸ್ಥಳ ನಿಗದಿ! ಗಂಗೂಲಿ ನೀಡಿದ್ರು ಬಿಗ್​ ಅಪ್​ಡೇಟ್
Image
Virat Kohli: ಕ್ರಿಕೆಟ್​ಗೆ ಬ್ರೇಕ್; ಮಡದಿಯೊಂದಿಗೆ ಈ ರೊಮ್ಯಾಂಟಿಕ್ ಸಿಟಿಯಲ್ಲಿ ಒಂದು ತಿಂಗಳು ಕಳೆಯಲಿದ್ದಾರೆ ಕೊಹ್ಲಿ
Image
CWG 2022: ಕಾಮನ್‌ವೆಲ್ತ್ ಗೇಮ್ಸ್ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ; ಮಹಿಳಾ ಸ್ಟಾರ್ ಕ್ರಿಕೆಟರ್​ಗೆ ಕೊರೊನಾ
Image
IND vs WI: ಕನ್ನಡಿಗ ಕೆಎಲ್ ರಾಹುಲ್​ಗೆ ಕೊರೊನಾ ಸೋಂಕು..! ವಿಂಡೀಸ್ ಪ್ರವಾಸಕ್ಕೆ ಗೈರು?

ಇನ್ನು ಭಾರತದ ಜಾವೆಲಿನ್‌ ಎಸೆತಗಾರ್ತಿ ಅನ್ನುರಾಣಿ ಸತತ ಎರಡನೇ ಸಲ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಫೈನಲ್‌ ಪ್ರವೇಶಿಸಿದ್ದಾರೆ. ಅರ್ಹತಾ ಸುತ್ತಿನಲ್ಲಿ ಅವರು 59.60 ಮೀ. ದೂರದ ಸಾಧನೆಗೈದರು. ಫೌಲ್‌ನೊಂದಿಗೆ ಸ್ಪರ್ಧೆ ಆರಂಭಿಸಿದ ಅನ್ನು ರಾಣಿ, ದ್ವಿತೀಯ ಪ್ರಯತ್ನದಲ್ಲಿ 55.35 ಮೀ. ದೂರಕ್ಕೆಸೆದರು. ಬಳಿಕ ಈ ದೂರವನ್ನು 59.60 ಮೀಟರ್‌ಗೆ ಹೆಚ್ಚಿಸಿಕೊಂಡು “ಬಿ’ ವಿಭಾಗದ 5ನೇ ಸ್ಥಾನಿಯಾದರು. ಒಟ್ಟಾರೆಯಾಗಿ 8ನೇ ಸ್ಥಾನ ಪಡೆದರು. ಇದೇನೂ ಅವರ ಶ್ರೇಷ್ಠ ಸಾಧನೆಯೇನಲ್ಲ. ಆದರೆ ಫೈನಲ್‌ ಪ್ರವೇಶಕ್ಕೆ ಇದು ಸಾಕಾಯಿತು. ಶನಿವಾರ ಬೆಳಗ್ಗೆ 6.50ಕ್ಕೆ ನಡೆಯುವ ಫೈನಲ್‌ನಲ್ಲಿ ಅನ್ನು ಪದಕವೊಂದರ ರಾಣಿ ಆಗಬಲ್ಲರೇ ಎಂಬುದು ನೋಡಬೇಕಿದೆ.

ಕಾಮನ್​ವೆಲ್ತ್​ ಕ್ರೀಡಾಕೂಟಕ್ಕೆ ಕ್ಷಣಗಣನೆ:

ಜುಲೈ 28 ರಿಂದ ಇಂಗ್ಲೆಂಡ್​ನ ಬರ್ಮಿಂಗ್​ಹ್ಯಾಮ್​ನಲ್ಲಿ ಶುರುವಾಗಲಿರುವ ಕಾಮನ್‌ವೆಲ್ತ್ ಗೇಮ್ಸ್​ ನಲ್ಲಿ (CWG 2022) ಈ ಬಾರಿ 5 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಅದರಲ್ಲೂ ಭಾರತವನ್ನು 300 ಕ್ಕೂ ಹೆಚ್ಚು ಕ್ರೀಡಾಪಟುಗಳು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿಯೇ ಈ ಸಲ ಪದಕಗಳ ನಿರೀಕ್ಷೆ ಹೆಚ್ಚಿದೆ.

Published On - 7:25 am, Fri, 22 July 22

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್