Neeraj Chopra: ಮೊದಲ ಭಾರತೀಯ: ಡೈಮಂಡ್ ಲೀಗ್‌ನಲ್ಲಿ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಇದೀಗ ಫಿನಿಕ್ಸ್ನಂತೆ ಎದ್ದು ಬಂದಿರುವ ನೀರಜ್ ಇತಿಹಾಸ ನಿರ್ಮಿಸಿದ್ದಾರೆ. ಚೋಪ್ರಾ ಅವರು ಲಾಸನ್‌ನಲ್ಲಿ ನಡೆದ ಡೈಮಂಡ್ ಲೀಗ್‌ನಲ್ಲಿ (Diamond League) ಅಗ್ರಸ್ಥಾನ ಪಡೆದು ಕೊಂಡಿದ್ದು, ಈ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್ ಎಂಬ ದಾಖಲೆ ಬರೆದಿದ್ದಾರೆ.
ಇತ್ತೀಚೆಗಷ್ಟೆ ಬರ್ಮಿಂಗ್ಹ್ಯಾಮ್ನಲ್ಲಿ ಮುಕ್ತಾಯಗೊಂಡ ಕಾಮನ್‌ವೆಲ್ತ್ ಗೇಮ್ಸ್ನಲ್ಲಿ (Commonwealth Games) ಭಾರತದ ಸ್ಟಾರ್ ಕ್ರೀಡಾಪಟು ಜಾವೆಲಿನ್ ದೊರೆ ನೀರಜ್ ಚೋಪ್ರಾ (Neeraj Chopra) ಇಂಜುರಿಯ ಕಾರಣದಿಂದ ಹೊರಗುಳಿಬೇಕಾಯಿತು. ಆದರೆ, ಇದೀಗ ಫಿನಿಕ್ಸ್ನಂತೆ ಎದ್ದು ಬಂದಿರುವ ನೀರಜ್ ಇತಿಹಾಸ ನಿರ್ಮಿಸಿದ್ದಾರೆ. ಚೋಪ್ರಾ ಅವರು ಲಾಸನ್‌ನಲ್ಲಿ ನಡೆದ ಡೈಮಂಡ್ ಲೀಗ್‌ನಲ್ಲಿ (Diamond League) ಅಗ್ರಸ್ಥಾನ ಪಡೆದು ಕೊಂಡಿದ್ದು, ಈ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್ ಎಂಬ ದಾಖಲೆ ಬರೆದಿದ್ದಾರೆ. ವಿಶ್ವ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಗೆದ್ದ ಬಳಿಕ ಇವರು ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಕಾಮನ್‌ವೆಲ್ತ್ ಗೇಮ್ಸ್‌ನಿಂದ ಕೂಡ ಹೊರಗುಳಿಯ ಬೇಕಾಯಿತು. ಇದೀಗ ಸ್ವಿಸ್ನ ಡೈಮಂಡ್ ಲೀಗ್‌ನಲ್ಲಿ 89.08 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಪ್ರಶಸ್ತಿ ಜಯಿಸಿಕೊಂಡಿದ್ದಾರೆ.
ಈ ಗೆಲುವಿನೊಂದಿಗೆ ನೀರಜ್ ಚೋಪ್ರಾ ಸೆಪ್ಟೆಂಬರ್ 7 ಮತ್ತು 8 ರಂದು ಸ್ವಿಟ್ಜರ್ಲೆಂಡ್‌ನ ಜ್ಯೂರಿಚ್‌ನಲ್ಲಿ ನಡೆಯಲಿರುವ ಡೈಮಂಡ್ ಲೀಗ್ ಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ, 2023 ರ ವಿಶ್ವ ಚಾಂಪಿಯನ್‌ಶಿಪ್‌ಗೆ ನೀರಜ್ ಅರ್ಹತೆ ಪಡೆದಿದ್ದಾರೆ. ಅವರ ಮೊದಲ ಪ್ರಯತ್ನದಲ್ಲೇ ಈ ಸಾಧನೆ ಮೂಡಿಬಂತು. ಜೇಕಬ್ ವಾಡ್ಲೆಚ್ (85.88 ಮೀ.) ಎರಡನೇ ಸ್ಥಾನ ಪಡೆದರೆ, ಅಮೆರಿಕದ ಕರ್ಟಿಸ್ ಥಾಂಪ್ಸನ್ (83.72 ಮೀ.) ಮೂರನೇ ಸ್ಥಾನ ಗಳಿಸಿದರು.
ಗೆದ್ದ ಬಳಿಕ ಮಾತನಾಡಿದ ನೀರಜ್, “ಈ ಫಲಿತಾಂಶದಿಂದ ಖುಷಿಯಾಗಿದೆ. ಗಾಯದಿಂದ ಚೇತರಿಸಿಕೊಂಡು 89 ಮೀಟರ್ ಎಸೆದಿರುವುದು ಸಂತಸ ತಂದಿದೆ. ಗಾಯದಿಂದಾಗಿ ಕಾಮನ್‌ವೆಲ್ತ್ ಗೇಮ್ಸ್‌ನಿಂದ ಹೊರಗುಳಿಯಬೇಕಾಯಿತು. ಇದು ನನ್ನನ್ನು ಸ್ವಲ್ಪ ಆತಂಕಕ್ಕೀಡು ಮಾಡಿತ್ತು. ಇದೀಗ ನಾನು ವಾಪಸ್ ಆಗಿದ್ದೇನೆ” ಎಂದು ಹೇಳಿದರು.
ಈ ಹಿಂದೆ ಡಿಸ್ಕಸ್ ಥ್ರೋ ಸ್ಪರ್ಧಿ ವಿಕಾಸ್ ಗೌಡ ಅವರು ಎರಡನೇ ಸ್ಥಾನ ಪಡೆದದ್ದು, ಡೈಮಂಡ್ ಲೀಗ್‌ನಲ್ಲಿ ಭಾರತದ ಅಥ್ಲೀಟ್‌ವೊಬ್ಬರ ಇದುವರೆಗಿನ ಉತ್ತಮ ಸಾಧನೆ ಎನಿಸಿತ್ತು. ಅವರು 2012 ರಲ್ಲಿ ನ್ಯೂಯಾರ್ಕ್‌ನಲ್ಲಿ ಮತ್ತು 2014 ರಲ್ಲಿ ದೋಹಾದಲ್ಲಿ ನಡೆದದ ಲೀಗ್‌ನಲ್ಲಿ ಎರಡನೇ ಸ್ಥಾನ ಗಳಿಸಿದ್ದರು. 2015 ರಲ್ಲಿ ಶಾಂಘೈ ಮತ್ತು ಯುಜೀನ್ ಲೀಗ್‌ನಲ್ಲಿ ಮೂರನೇ ಸ್ಥಾನ ಪಡೆದಿದ್ದರು. ಇದೀಗ ನೀರಜ್ ಲೀಗ್‌ನಲ್ಲಿ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
Published On - 8:07 am, Sat, 27 August 22