Neeraj Chopra: ಮೊದಲ ಪ್ರಯತ್ನದಲ್ಲೇ 86.69 ಮೀ.: ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಮತ್ತೊಂದು ಚಿನ್ನ
Kuortane Games: ಫಿನ್‌ಲ್ಯಾಂಡ್‌ನಲ್ಲಿ ಈ ವಾರದ ಆರಂಭದಲ್ಲಿ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ ನೀರಜ್ ಚೋಪ್ರಾ 89.30 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಬೆಳ್ಳಿ ಪದಕ ಗೆದ್ದಿದ್ದರು. ಇದು ಅವರ ತಮ್ಮದೇ ಆದ ರಾಷ್ಟ್ರೀಯ ದಾಖಲೆಯನ್ನೇ ಮುರಿದಿದ್ದರು.
ಒಲಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ (Neeraj Chopra) ಫಿನ್‌ಲ್ಯಾಂಡ್‌ನಲ್ಲಿ ನಡೆದ ಕುರ್ಟೇನ್ ಗೇಮ್ಸ್‌ನಲ್ಲಿ (Kuortane Games) ತಮ್ಮ ಮೊದಲ ಪ್ರಯತ್ನದಲ್ಲೇ 86.69 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ನೀರಜ್ ಚೋಪ್ರಾ ಟ್ರಿನಿಡಾಡ್ ಮತ್ತು ಟೊಬಾಗೋದ ಕೆಶೋರ್ನ್ ವಾಲ್ಕಾಟ್ ಮತ್ತು ಗ್ರೆನಡಾದ ವಿಶ್ವ ಚಾಂಪಿಯನ್ ಆಂಡರ್ಸನ್ ಪೀಟರ್ಸ್‌ಗಿಂತ ಮೊದಲು ಗುರಿ ತಲುಪಿದರು. ಫಿನ್‌ಲ್ಯಾಂಡ್‌ನಲ್ಲಿ (Finland) ಈ ವಾರದ ಆರಂಭದಲ್ಲಿ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ ನೀರಜ್ ಚೋಪ್ರಾ 89.30 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಬೆಳ್ಳಿ ಪದಕ ಗೆದ್ದಿದ್ದರು. ಇದು ಅವರ ತಮ್ಮದೇ ಆದ ರಾಷ್ಟ್ರೀಯ ದಾಖಲೆಯನ್ನೇ ಮುರಿದಿದ್ದರು.
ಟೋಕಿಯೋ ಒಲಿಂಪಿಕ್ಸ್‌ನ ನಂತರ ಇದು ನೀರಜ್ ಚೋಪ್ರಾರ ಎರಡನೇ ಸ್ಪರ್ಧೆಯಾಗಿದೆ. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚೋಪ್ರಾ ಅಥ್ಲೆಟಿಕ್ಸ್‌ನಲ್ಲಿ ಚಿನ್ನದ ಪದಕವನ್ನು ಗೆದ್ದ ಮೊದಲ ಭಾರತೀಯರಾದರು. ಇನ್ನು ಕೆಶೋರ್ನ್ ವಾಲ್ಕಾಟ್ 86.64 ಮೀ. ಎಸೆದು ಎರಡನೇ ಸ್ಥಾನ ಪಡೆದರೆ, ಆಂಡರ್ಸನ್ ಪೀಟರ್ಸ್ 84.75ರ ಅತ್ಯುತ್ತಮ ಪ್ರಯತ್ನದೊಂದಿಗೆ ಮೂರನೇ ಸ್ಥಾನ ಪಡೆದರು.
Olympic gold medallist Neeraj Chopra wins gold at Kuortane Games too with a throw of 86.69m
(file pic) pic.twitter.com/LXOo9FQpAF
— ANI (@ANI) June 18, 2022
ಮಳೆಗಾಲದ ಪರಿಸ್ಥಿತಿಯಲ್ಲಿ ನೀರಜ್ ಚೋಪ್ರಾ ಉತ್ತಮವಾಗಿ ಪ್ರಾರಂಭಿಸಿದರು, ಆದರೆ ಅವರ ಎರಡನೇ ಎಸೆತದಲ್ಲಿ ಉದ್ದೇಶಪೂರ್ವಕ ಫೌಲ್ ಮಾಡಿದರು. ನಂತರ ಅವರು ತಮ್ಮ ಮೂರನೇ ಎಸೆತಕ್ಕೆ ಹೋದಾಗ ಅಸಹ್ಯ ಸ್ಲಿಪ್ ಹೊಂದಿದ್ದರು, ನಂತರ ಅವರು ಇನ್ನು ಮುಂದೆ ಜಾವೆಲಿನ್ ಎಸೆಯಲಿಲ್ಲ.
ಪ್ರಣಯ್ ಸವಾಲು ಅಂತ್ಯ:
ಇನ್ನು ಭಾರತದ ಎಚ್.ಎಸ್.ಪ್ರಣಯ್ ಅವರು ಇಂಡೊನೇಷ್ಯಾ ಸೂಪರ್ ಸೀರಿಸ್ ಬ್ಯಾಡ್ಮಿಂಟನ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಸೋತು ಹೊರಬಿದ್ದರು. ಶನಿವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಹಣಾಹಣಿಯಲ್ಲಿ ವಿಶ್ವ ರ‍್ಯಾಂಕಿಂಗ್‌ನಲ್ಲಿ 23ನೇ ಸ್ಥಾನದಲ್ಲಿರುವ ಪ್ರಣಯ್ 16-21, 15-21 ರಲ್ಲಿ ಚೀನಾದ ಜುನ್ ಪೆಂಗ್ ಎದುರು ಪರಾಭವಗೊಂಡರು. ಇದಕ್ಕೂ ಮೊದಲು ಪ್ರಣಯ್ 40 ನಿಮಿಷಗಳ ಕಾಲ ನಡೆದ ಕ್ವಾರ್ಟರ್ ಫೈನಲ್‌ನಲ್ಲಿ ಜೆಮ್ಕೆ ವಿರುದ್ಧ 21-14, 21-12 ಅಂತರದ ಜಯ ದಾಖಲಿಸಿದ್ದರು.
ಕ್ರಿಕೆಟ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:41 am, Sun, 19 June 22