Novak Djokovic: ವೀಸಾ ರದ್ದು: ಅಭಿಮಾನಿಗಳಿಗೆ ಧನ್ಯವಾದ ಹೇಳಿ ಮೌನ ಮುರಿದ ನೊವಾಕ್ ಜೊಕೋವಿಚ್
ಜೊಕೊವಿಚ್ ಈ ಬಗ್ಗೆ ಮೌನ ಮುರಿದ್ದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೇಟಸ್ ಹಾಕುವ ಮೂಲಕ, ನನಗೆ ಸಹಕರಿಸಿದ ಎಲ್ಲ ಅಭಿಮಾನಿಗಳಿಗೆ ಧನ್ಯವಾದ ಎಂದು ಹೇಳಿದ್ದಾರೆ.
ಟೆನಿಸ್ ಲೋಕದ ನಂ.1 ಆಟಗಾರ ಸರ್ಬಿಯಾದ ನೊವಾಕ್ ಜೊಕೊವಿಕ್ (Novak Djokovic) ಆಸ್ಟ್ರೇಲಿಯನ್ ಓಪನ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿ ಆಡಲು ಹೋಗಿ ಈಗ ಸೆರೆಯಲ್ಲಿದ್ದಾರೆ. ಕೋವಿಡ್-19 (Covid 19) ಕಾರಣ ಆಸ್ಟ್ರೇಲಿಯಾದಲ್ಲಿ ಕಟ್ಟು ನಿಟ್ಟಿನ ನಿಯಮಗಳು ಜಾರಿಯಲ್ಲಿವೆ. ಈ ಹಿನ್ನೆಲೆಯಲ್ಲಿ ನೊವಾಕ್ ಜೊಕೊವಿಕ್ ಸರಿಯಾದ ದಾಖಲಾತಿಗಳನ್ನು ಒದಗಿಸುವಲ್ಲಿ ವಿಫಲರಾದ ಕಾರಣ ಅವರ ವೀಸಾ ತಿರಸ್ಕರಿಸಲಾಗಿದೆ. ಆಸ್ಟ್ರೇಲಿಯನ್ ಓಪನ್ ಟೆನಿಸ್ (Australian Open) ಟೂರ್ನಿಯಲ್ಲಿ ಪಾಲ್ಗೊಳ್ಳುವ ಆಟಗಾರರು ಮತ್ತು ಕೋಚಿಂಗ್ ಹಾಗೂ ಸಹಾಯಕ ಸಿಬ್ಬಂದಿ ಎಲ್ಲರೂ ವ್ಯಾಕ್ಸಿನೇಟೆಡ್ ಆಗಿರಬೇಕು ಎಂಬ ನಿಯಮ ಇದೆ. ಆದರೆ, ಪ್ರಬಲ ವೈದ್ಯಕೀಯ ಕಾರಣಗಳಿಂದ ಲಸಿಕೆ ಹಾಕಿಸಿಕೊಳ್ಳಲು ಸಾಧ್ಯವಾಗದೇ ಹೋದ ಸಂದರ್ಭಗಳಲ್ಲಿ ಮಾತ್ರ ಕಡ್ಡಾಯ ವ್ಯಾಕ್ಸಿನ್ನಿಂದ ವಿನಾಯಿತಿ ನೀಡಲಾಗುತ್ತದೆ.
ಮೂಲಗಳ ಪ್ರಕಾರ ಜೋಕೋವಿಚ್ ಅವರು ಲಸಿಕೆ ಹಾಕಿಸಿಕೊಂಡಿರುವ ಮಾಹಿತಿ ನೀಡಿಲ್ಲ. ಅಥವಾ ಲಸಿಕೆ ಹಾಕಿಸಿಕೊಳ್ಳಲು ಇರುವ ತೊಂದರೆಯ ಬಗ್ಗೆ ಮಾಹಿತಿ ನೀಡಿಲ್ಲ ಎಂಬುದು ಆಸ್ಟ್ರೇಲಿಯಾದ ಅಧಿಕಾರಿಗಳವಾದವಂತೆ. ಹೀಗಾಗಿ, ಅವರನ್ನ ಏರ್ಪೋರ್ಟ್ ಬಳಿಯೇ ಜ. 6 ಬೆಳಗ್ಗೆ ಡಿಟೆನ್ಷನ್ನಲ್ಲಿ ಇಡಲಾಗಿತ್ತು. ಅವರ ವೀಸಾವನ್ನು ರದ್ದು ಮಾಡಲಾಗಿದೆ.
ಆದರೆ, ಸದ್ಯ ನೊವಾಕ್ ಜೊಕೊವಿಚ್ ಅವರಂಥ ಶ್ರೇಷ್ಠ ಆಟಗಾರರ ಮೇಲೆ ನಿರ್ಬಂಧ ಹೇರಲು ಸಾಧ್ಯವಿಲ್ಲ. ಆಸ್ಟ್ರೇಲಿಯಾದಲ್ಲಿ ಇರುವಂಥ ನಿರ್ಬಂಧಗಳು ಫ್ರಾನ್ಸ್‌ನಲ್ಲಿ ಇಲ್ಲ ಎಂದು ಅಲ್ಲಿನ ಸಚಿವರು ತಿಳಿಸಿದ್ದಾರೆ. ಜೊತೆಗೆ ಸ್ವತಃ ಜೊಕೊವಿಚ್ ಈ ಬಗ್ಗೆ ಮೌನ ಮುರಿದ್ದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೇಟಸ್ ಹಾಕುವ ಮೂಲಕ, ನನಗೆ ಸಹಕರಿಸಿದ ಎಲ್ಲ ಅಭಿಮಾನಿಗಳಿಗೆ ಧನ್ಯವಾದ ಎಂದು ಹೇಳಿದ್ದಾರೆ.
ವಿಶ್ವದ ನಂ.1 ಆಟಗಾರ ಹಾಗೂ ಆಸ್ಟ್ರೇಲಿಯನ್ ಓಪನ್ ಟೂರ್ನಿಯಲ್ಲಿ ದಾಖಲೆಯ 9 ಬಾರಿ ಟ್ರೋಫಿ ಗೆದ್ದಿರುವ ನೊವಾಕ್‌ಗೆ ಕೋವಿಡ್-19 ಲಸಿಕೆ ಪಡೆಯದೇ ಇದ್ದರೂ ವೈದ್ಯಕೀಯ ಕಾರಣ ಹಿನ್ನೆಲೆಯಲ್ಲಿ ಟೂರ್ನಿಗೆ ಪ್ರವೇಶ ಲಭ್ಯವಾಗಿತ್ತು. ಆದರೆ, ವೈದ್ಯಕೀಯ ಕಾರಣ ಕೊಟ್ಟು ಪಡೆಯಬೇಕಾದ ವೀಸಾ ತೆಗೆದುಕೊಳ್ಳದೇ ಇದ್ದ ಕಾರಣ ಈ ಗೊಂದಲಕ್ಕೆ ಸಿಲುಕಿದ್ದಾರೆ. ಆಸ್ಟ್ರೇಲಿಯಾದಲ್ಲಿ ಲಸಿಕೆಗಳಿಗೆ ಬಹಳ ಒತ್ತು ಕೊಡಲಾಗಿದೆ. ಅಲ್ಲಿನ ಬಹುತೇಕ ರಾಜ್ಯಗಳಲ್ಲಿ 12 ವರ್ಷಕ್ಕಿಂತ ಮೇಲ್ಪಟ್ಟ ಜನರಲ್ಲಿ ಬಹುತೇಕರು ಲಸಿಕೆ ಹಾಕಿಸಿಕೊಂಡಿದ್ದಾರೆ. ಅಂಥ ಆಸ್ಟ್ರೇಲಿಯಾ ದೇಶದಲ್ಲಿ ನಿಂತು ಲಸಿಕೆ ವಿರುದ್ಧ ಜೋಕೊವಿಚ್ ಮಾತನಾಡುತ್ತಿದ್ದಾರೆ ಎಂಬುದು ಅಲ್ಲಿನ ಸರ್ಕಾರದಲ್ಲಿರುವವರ ಆಕ್ರೋಶ.
ರೆನಾಟ ಒರಕೋವಗೂ ನಿರ್ಬಂಧ:
ಜೆಕ್ ಗಣರಾಜ್ಯದ ಮಹಿಳಾ ಟೆನಿಸ್ ಪಟು ರೆನಾಟ ವೊರಕೋವ ಅವರನ್ನು ಕೂಡ ಆಸ್ಟ್ರೇಲಿಯಾ ವಶಕ್ಕೆ ಪಡೆದಿರುವುದು ವರದಿಯಾಗಿದೆ. ಇ ಆಸ್ಟ್ರೇಲಿಯನ್ ಓಪನ್ ಟೂರ್ನಿಯಲ್ಲಿ ಆಡಲು ಬಂದಿದ್ದ ವೊರಕೋವ ಅವರನ್ನು ಶುಕ್ರವಾರ ವಶಕ್ಕೆ ಪಡೆದು ಜೊಕೊವಿಚ್ ಇರುವ ಹೋಟೆಲ್‌ನಲ್ಲೇ ಇರಿಸಲಾಗಿದೆ. 38 ವರ್ಷದ ಆಟಗಾರ್ತಿಯನ್ನು ಆಸ್ಟ್ರೇಲಿಯಾದ ಗಡಿ ರಕ್ಷಣಾ ಪಡೆಯ ಅಧಿಕಾರಿಗಳು ವಶಕ್ಕೆ ಪಡೆದು ಮೆಲ್ಬರ್ನ್‌ನ ಪಾರ್ಕ್ ಹೋಟೆಲ್ ಕಟ್ಟಡದೊಳಗೆ ಕರೆದುಕೊಂಡು ಹೋಗಿರುವ ಚಿತ್ರಗಳು ಮತ್ತು ವಿಡಿಯೊಗಳು ಬಹಿರಂಗವಾಗಿವೆ. ಅವರು ಕೂಡ ಲಸಿಕೆ ಹಾಕಿಸಿಕೊಳ್ಳದೆ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ ಎಂದು ಹೇಳಲಾಗಿದ್ದು ತವರಿಗೆ ಮರಳುವಂತೆ ಸೂಚಿಸಲಾಗಿದೆ.
KSCA Recruitment 2022: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ 5 ಹುದ್ದೆಗಳು ಖಾಲಿ: ಇಂದೇ ಅರ್ಜಿ ಸಲ್ಲಿಸಿ
BCCI: ಬಿಸಿಸಿಐ ಆಫೀಸ್ಗೆ ಬೀಗ: ಮೂವರು ಅಧಿಕಾರಿಗಳಿಗೆ ಕೊರೊನಾ ಪಾಸಿಟಿವ್