
ಇತ್ತೀಚೆಗಷ್ಟೆ ಟೋಕಿಯೊದಲ್ಲಿ ಮುಕ್ತಾಯಗೊಂಡ ಪ್ಯಾರಾಲಿಂಪಿಕ್ಸ್ 2020ರಲ್ಲಿ ಭಾಗವಹಿಸಿದ ಭಾರತ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ಅಭಿನಂದನೆ ಸಲ್ಲಿಸಿ, ಅವರೊಂದಿಗೆ ಮಾತುಕತೆ ನಡೆಸಿದರು

ಕ್ರೀಡೆಯಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಿದ್ದರು.

ಅಭಿನಂದನಾ ಕಾರ್ಯಕ್ರಮದ ವೇಳೆ ಮೋದಿ ಕ್ರೀಡಾಪಟುಗಳ ಜೊತೆ ಕೆಲ ಕಾಲ ಚರ್ಚೆ ನಡೆಸಿದರು.

ದೆಹಲಿಯ ತಮ್ಮ ನಿವಾಸದಲ್ಲಿ ಕ್ರೀಡಾಪಟುಗಳನ್ನು ಭೇಟಿ ಮಾಡಿದ ಮೋದಿ ಅವರೊಂದಿಗೆ ಕೆಲ ಸಮಯವನ್ನು ಕಳೆದರು.

ಈ ಸಂದರ್ಭದಲ್ಲಿ ಕನ್ನಡಿಗ ಸುಹಾಸ್ ಯತಿರಾಜ್, ಅವನಿ ಲೇಖರಾ ಸೇರಿ ಹಲವು ಕ್ರೀಡಾಪಟುಗಳ ಸಾಧನೆಗೆ ಮೋದಿ ಸಂತಸ ವ್ಯಕ್ತಪಡಿಸಿದರು.

ಈ ಮೊದಲು ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಔತಣಕೂಟ ಏರ್ಪಡಿಸಿದ್ದರು.

ಪ್ಯಾರಾಲಿಂಪಿಕ್ಸ್ನಲ್ಲಿ ಭಾರತಕ್ಕೆ 5 ಚಿನ್ನ, 8 ಬೆಳ್ಳಿ ಮತ್ತು 6 ಕಂಚಿನ ಪದಕಗಳು ಬಂದಿವೆ. ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತ 12 ಪದಕವನ್ನ ಗೆದ್ದಿತ್ತು.