2022ರ ಥಾಮಸ್ ಕಪ್ನ್ನು (Thomas Cup 2022) ಮೊದಲ ಬಾರಿಗೆ ಗೆದ್ದ ಭಾರತದ ಪುರುಷರ ಬ್ಯಾಡ್ಮಿಂಟನ್ ತಂಡವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಇತ್ತೀಚೆಗಷ್ಟೆ ಬ್ಯಾಂಕಾಕ್‌ನಲ್ಲಿ 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾವನ್ನು 3-0 ಅಂತರದಿಂದ ಮಣಿಸಿದ ಟೀಮ್ ಇಂಡಿಯಾ (Team India) ಚೊಚ್ಚಲ ಚಿನ್ನದ ಪದಕಕ್ಕೆ ಮುತ್ತಿಕ್ಕುವ ಮೂಲಕ ಇತಿಹಾಸ ಸೃಷ್ಟಿಸಿತ್ತು. 43 ವರ್ಷಗಳ ಬಳಿಕ ಚೊಚ್ಚಲ ಬಾರಿಗೆ ಚಾಂಪಿಯನ್ ಆದ ಭಾರತದ ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ತಮ್ಮ ನಿವಾಸದಲ್ಲಿ ಭೇಟಿ ಮಾಡಿ ಆಟಗಾರರ ಸಾಧನೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ನಿಮ್ಮ ಈ ಸಾಧನೆಯನ್ನು ಇಡೀ ದೇಶವೇ ಸಂಭ್ರಮಿಸಿದೆ ಎಂದು ಪ್ರಧಾನಿ ಸಂಭ್ರಮ ಹಂಚಿಕೊಂಡಿದ್ದಾರೆ.
43 ವರ್ಷಗಳಿಂದಲೂ ಟೂರ್ನಿಯಲ್ಲಿ ಆಡುತ್ತಿರುವ ಭಾರತ ಈ ಬಾರಿ ಚೊಚ್ಚಲ ಟ್ರೋಫಿಯನ್ನು ಗೆದ್ದುಕೊಂಡಿತು. ಅದು 14 ಬಾರಿ ಚಾಂಪಿಯನ್ ಇಂಡೋನೇಷ್ಯಾದ ವಿರುದ್ಧ ಗೆದ್ದು ಈ ಸಾಧನೆ ಮಾಡಿದೆ ಎನ್ನುವುದು ವಿಶೇಷ. ಈ ಮೂಲಕ ಥಾಮಸ್ ಕಪ್ ಗೆದ್ದ 6ನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು. ಈ ಹಿಂದೆ 1979ರಲ್ಲಿ ಕಂಚಿನ ಪದಕ ಗೆದ್ದಿದ್ದೇ ಈವರೆಗೆ ಟೂರ್ನಿಯಲ್ಲಿ ಭಾರತದ ಶ್ರೇಷ್ಠ ಸಾಧನೆ ಎನಿಸಿತ್ತು.ಮೊದಲ ಸಿಂಗಲ್ಸ್ ಪಂದ್ಯದಲ್ಲಿ ಲಕ್ಷ್ಯ ಸೆನ್ ಜಿಂಟಿಂಗ್ ವಿರುದ್ಧ ಜಯಗಳಿಸಿದರು. ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಜಿಂಟಿಗ್ ಮೊದಲ ಪಂದ್ಯವನ್ನು 8-21 ರಿಂದ ಗೆದ್ದುಕೊಂಡರೂ ಲಕ್ಷ್ಯ ಸೆನ್ ನಂತರ ಎರಡು ಪಂದ್ಯವನ್ನು 21-17, 21-16 ಗೇಮ್‍ಗಳಿಂದ ಗೆದ್ದುಕೊಳ್ಳುವ ಮೂಲಕ ಭಾರತಕ್ಕೆ ಮೊದಲ ಮುನ್ನಡೆಯನ್ನು ತಂದುಕೊಟ್ಟರು.
“ಥಾಮಸ್ ಕಪ್ ಟೂರ್ನಿಯಲ್ಲಿ ತ್ರಿವರ್ಣ ಧ್ವಜ ರಾರಾಜಿಸುವಂತೆ ಮಾಡಬೇಕು ಎನ್ನುವ ದಶಕದ ಕನಸನ್ನು ಭಾರತೀಯ ಬ್ಯಾಡ್ಮಿಂಟನ್ ತಂಡವು ನನಸು ಮಾಡಿರುವುದು ಸಣ್ಣ ಸಾಧನೆಯೇನಲ್ಲ. ಇಡೀ ದೇಶವೇ ನಿಮ್ಮ ಸಾಧನೆಯನ್ನು ಕೊಂಡಾಡಿದೆ. ಥಾಮಸ್ ಕಪ್ ಟೂರ್ನಿಯಲ್ಲಿ ನಿಮ್ಮ ಪ್ರದರ್ಶನವನ್ನು ಇಡೀ ದೇಶವೇ ಮೆಚ್ಚಿಕೊಂಡಿದೆ. ಇದು ಭಾರತ ಬ್ಯಾಡ್ಮಿಂಟನ್ ತಂಡದ ಇತಿಹಾಸ. ನಮ್ಮ ಬಲಿಷ್ಠ ತಂಡಕ್ಕೆ ಅಭಿನಂದನೆಗಳು ಮತ್ತು ಅವರ ಮುಂದಿನ ಸಾಧನೆಗಳಿಗೆ ಶುಭಾಶಯಗಳು. ಈ ಗೆಲುವು ಮುಂಬರುವ ಹಲವು ಕ್ರೀಡಾ ಪಟುಗಳಿಗೆ ಪ್ರೇರಣೆ ನೀಡಲಿದೆ,” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
Interacted with our badminton champions, who shared their experiences from the Thomas Cup and Uber Cup. The players talked about different aspects of their game, life beyond badminton and more. India is proud of their accomplishments. https://t.co/sz1FrRTub8
— Narendra Modi (@narendramodi) May 22, 2022
RCB: ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ ಎದುರಾಳಿ ಯಾರು?, ಪಂದ್ಯ ಯಾವಾಗ?, ಎಲ್ಲಿ: ಇಲ್ಲಿದೆ ಮಾಹಿತಿ
ಇನ್ನು ಪ್ರಧಾನಿಯವರನ್ನು ಭೇಟಿಯಾದ ಬಳಿಕ ಮಾತನಾಡಿದ, ಥಾಮಸ್ ಕಪ್ ಗೆಲುವಿನ ಹೀರೋ ಕಿದಂಬಿ ಶ್ರೀಕಾಂತ್, ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸದಾ ಕಾಲ ಅಥ್ಲೀಟ್‌ಗಳ ಬೆಂಬಲಕ್ಕೆ ನಿಲ್ಲುತ್ತಿರುವುದು ಅವರ ಬಗ್ಗೆ ಯಾವಾಗಲೂ ಹೆಮ್ಮೆಯ ಭಾವ ಮೂಡುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ. ಇನ್ನು ಭಾರತೀಯ ಪುರುಷರ ತಂಡದ ಬ್ಯಾಡ್ಮಿಂಟನ್ ಕೋಚ್ ಮಥಿಯಾಸ್ ಬೋ, ನಾನು ಓರ್ವ ಆಟಗಾರನಾಗಿ ನನ್ನ ದೇಶಕ್ಕೆ ಹಲವು ಪ್ರಶಸ್ತಿ ಹಾಗೂ ಪದಕಗಳನ್ನು ಜಯಿಸಿದ್ದೇನೆ, ಆದರೆ ಯಾವತ್ತೂ ನನ್ನ ದೇಶದ ಪ್ರಧಾನಿ ಈ ರೀತಿ ಗೌರವಿಸಿಲ್ಲ ಎಂದು ಹೇಳಿದ್ದಾರೆ.
ಹಾಗೆಯೆ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡಕ್ಕೆ ಕ್ರೀಡಾ ಸಚಿವಾಲಯವು ಒಂದು ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ. ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಭಾನುವಾರ 1 ಕೋಟಿ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. ಬ್ಯಾಡ್ಮಿಂಟನ್ ಸಾಧಕರಿಗೆ ದೇಶಾದ್ಯಂತ ಅಭಿನಂದನೆ ವ್ಯಕ್ತವಾಗಿದ್ದು, ಹಲವು ಕ್ರೀಡಾ ದಿಗ್ಗಜರು, ಪ್ರಮುಖ ರಾಜಕೀಯ ಮುಖಂಡರು ಸೇರಿದಂತೆ ಹಲವರು ಟ್ವೀಟ್ ಮೂಲಕ ಶ್ಲಾಘಿಸಿದ್ದಾರೆ.
ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:44 pm, Sun, 22 May 22