AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi League 2021: ಮದಗಜಗಳ ಕಾಳಗ ಪ್ರೋ ಕಬಡ್ಡಿ ಲೀಗ್ ಹರಾಜಿಗೆ ಡೇಟ್ ಫಿಕ್ಸ್

pro kabaddi league 2021 starting date: ಪ್ರೋ ಕಬಡ್ಡಿ ಹರಾಜು ನಿಯಮಗಳ ಪ್ರಕಾರ, ಪ್ರತಿ ಫ್ರಾಂಚೈಸಿ 4.4 ಕೋಟಿ ರೂ. ನಲ್ಲಿ ಆಟಗಾರರನ್ನು ಖರೀದಿಸಬೇಕಾಗುತ್ತದೆ. ಈ ಬಾರಿ 500 ಕ್ಕೂ ಅಧಿಕ ಆಟಗಾರರು ಹೆಸರು ನೋಂದಾಯಿಸಿಕೊಳ್ಳಲಿದ್ದಾರೆ

Pro Kabaddi League 2021: ಮದಗಜಗಳ ಕಾಳಗ ಪ್ರೋ ಕಬಡ್ಡಿ ಲೀಗ್ ಹರಾಜಿಗೆ ಡೇಟ್ ಫಿಕ್ಸ್
ಇನ್ನು ಮೊದಲಾರ್ಧದಲ್ಲಿ ಒಟ್ಟು ಏಳು ಟ್ರಿಪಲ್ ಹೆಡರ್‌ಗಳು ನಡೆಯಲಿದ್ದು, ಮೊದಲ ದಿನದ ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ಮುಖಾಮುಖಿಯಾಗಲಿವೆ. ಎರಡನೇ ಪಂದ್ಯದಲ್ಲಿ ತೆಲುಗು ಟೈಟಾನ್ಸ್ ತಂಡವು ತಮಿಳ್ ತಲೈವಾಸ್ ವಿರುದ್ಧ ಸೆಣಸಲಿದೆ. ಹಾಗೆಯೇ ಮೂರನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಬೆಂಗಾಲ್ ವಾರಿಯರ್ಸ್ ಯುಪಿ ಯೋಧಾ ವಿರುದ್ಧ ಆಡಲಿದೆ. ಪ್ರೊ ಕಬಡ್ಡಿ ಲೀಗ್ ವೇಳಾಪಟ್ಟಿ ಈ ಕೆಳಗಿನಂತಿವೆ.
TV9 Web
| Edited By: |

Updated on: Aug 07, 2021 | 2:45 PM

Share

ಕಬಡ್ಡಿ ಅಂಗಳದ ಮದಗಜಗಳ ಕಾಳಗ ಎಂದೇ ಬಿಂಬಿತವಾಗಿರುವ ಪ್ರೋ ಕಬಡ್ಡಿ ಲೀಗ್ (Pro Kabaddi League Season 8 ) ಸೀಸನ್ 8ಗೆ ವೇದಿಕೆ ಸಿದ್ದವಾಗುತ್ತಿದೆ. ಇದರ ಮೊದಲ ಹೆಜ್ಜೆ ಎಂಬಂತೆ ಪಿಕೆಎಲ್​ ಆಟಗಾರರ ಹರಾಜಿಗಾಗಿ ದಿನಾಂಕ ನಿಗದಿಯಾಗಿದೆ. ಅದರಂತೆ ಇದೇ ತಿಂಗಳ ಆಗಸ್ಟ್ 29 ರಿಂದ 31ರ ನಡುವೆ ಪ್ರೋ ಕಬಡ್ಡಿ ಲೀಗ್ (PKL 8) ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಹರಾಜಿಗಾಗಿ ಆಟಗಾರರನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದ್ದು, ಅದರಂತೆ ದೇಶೀಯ ಸ್ಟಾರ್ ಆಟಗಾರರು, ವಿದೇಶಿ ಮತ್ತು ಯುವ ಹಾಗೂ ಹೊಸ ಆಟಗಾರನ್ನು ಎ, ಬಿ, ಸಿ ಮತ್ತು ಡಿ ಗುಂಪುಗಳಾಗಿ ವಿಭಾಗಿಸಲಾಗುತ್ತದೆ. ಎ ಗುಂಪಿನಲ್ಲಿರುವ ಆಟಗಾರರ ಮೂಲ ಬೆಲೆ 30 ಲಕ್ಷ ರೂ, ಬಿ ಗುಂಪಿನಲ್ಲಿ ಆಟಗಾರರ ಮೂಲ ಬೆಲೆ 20 ಲಕ್ಷ ರೂ, ಸಿ ಗ್ರೂಪ್ ಆಟಗಾರರಿಗೆ 10 ಲಕ್ಷ ರೂ. ಮತ್ತು ಡಿ ಗುಂಪಿನಲ್ಲಿರುವ ಆಟಗಾರರಿಗೆ 6 ಲಕ್ಷ ರೂ. ಮೂಲ ಬೆಲೆ ನಿಗದಿಪಡಿಸಲಾಗಿದೆ. ಅದರಂತೆ ಮೂಲ ಬೆಲೆಯೊಂದಿಗೆ ಆಟಗಾರರ ಹರಾಜು ನಡೆಯಲಿದೆ.

ಪ್ರೋ ಕಬಡ್ಡಿ ಹರಾಜು ನಿಯಮಗಳ ಪ್ರಕಾರ, ಪ್ರತಿ ಫ್ರಾಂಚೈಸಿ 4.4 ಕೋಟಿ ರೂ. ನಲ್ಲಿ ಆಟಗಾರರನ್ನು ಖರೀದಿಸಬೇಕಾಗುತ್ತದೆ. ಈ ಬಾರಿ 500 ಕ್ಕೂ ಅಧಿಕ ಆಟಗಾರರು ಹೆಸರು ನೋಂದಾಯಿಸಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಅದರಲ್ಲೂ ಮುಖ್ಯವಾಗಿ ಈ ಬಾರಿ ಹೆಚ್ಚಿನ ಹೊಸ ಆಟಗಾರರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

2019ರ ಬಳಿಕ ಕೊರೋನಾ ಕಾರಣದಿಂದ ಪ್ರೋ ಕಬಡ್ಡಿ ಲೀಗ್ ನಡೆಸಲಾಗಿರಲಿಲ್ಲ. ಇದೀಗ 8ನೇ ಸೀಸನ್​ಗೆ ವೇದಿಕೆ ರೂಪಿಸಲಾಗಿದ್ದು, ಅದರಂತೆ ಕಟ್ಟುನಿಟ್ಟಾದ ಸರ್ಕಾರಿ ನಿಯಮಗಳು ಮತ್ತು ಸುರಕ್ಷತಾ ಪ್ರೋಟೋಕಾಲ್‌ಗಳ ಟೂರ್ನಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಮಾಶಾಲ್ ಸ್ಪೋರ್ಟ್ಸ್ ಮತ್ತು ಲೀಗ್ ಆಯುಕ್ತ ಅನುಪಮ್ ಗೋಸ್ವಾಮಿ ತಿಳಿಸಿದ್ದಾರೆ.

ಕೆಲ ಮೂಲಗಳ ಪ್ರಕಾರ ಹರಾಜು ಪ್ರಕ್ರಿಯೆ ಬೆನ್ನಲ್ಲೇ ಪ್ರೋ ಕಬಡ್ಡಿ ಲೀಗ್ ಶುರುವಾಗಲಿದ್ದು, ಅದರಂತೆ ಸೆಪ್ಟೆಂಬರ್ 2ನೇ ವಾರದೊಳಗೆ ಲೀಗ್​ಗೆ ( pro kabaddi league 2021 starting date ) ಚಾಲನೆ ಸಿಗುವ ಸಾಧ್ಯತೆ ಹೆಚ್ಚಿದೆ. ಒಟ್ಟಿನಲ್ಲಿ ಕಬಡ್ಡಿ ಅಂಗಳದ ಮದಗಜಗಳ ಕಾಳಗವನ್ನು ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ಈ ಬಾರಿ ಪ್ರೋ ಕಬಡ್ಡಿ ಲೀಗ್ ನಡೆಯಲಿದೆ ಎಂಬ ಸಿಹಿ ಸುದ್ದಿ ನೀಡಿದ್ದಾರೆ ಪಿಕೆಎಲ್ ಆಯೋಜಕರು.

ಇದನ್ನೂ ಓದಿ:-

Tokyo Olympics: ಒಲಿಂಪಿಕ್ಸ್​ನಲ್ಲಿ ವಿಶ್ವ ದಾಖಲೆ ಬರೆದ ಭಾರತ..!

Tokyo Olympics: ಪದಕ ಗೆಲ್ಲುತ್ತಿದ್ದಂತೆ ಟೀಮ್ ಇಂಡಿಯಾಗೆ ಕಾದಿತ್ತು ಸರ್​ಪ್ರೈಸ್..!

ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ