AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics: ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಚೊಚ್ಚಲ ಪದಕ: ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ ಭಾವಿನಾ

Bhavina Patel: ಟೇಬಲ್ ಟೆನಿಸ್​ನ ಫೈನಲ್‌ ಪಂದ್ಯದಲ್ಲಿ ಚೀನಾದ ಝೋ ಯಿಂಗ್ ವಿರುದ್ಧ 3-4 ಅಂಕಗಳ ಅಂತರದಿಂದ ಸೋಲು ಕಾಣುವ ಮೂಲಕ ಭಾವಿನಾ ಚಿನ್ನ ಗೆಲ್ಲುವಲ್ಲಿ ಎಡವಿದರು.

Tokyo Paralympics: ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಚೊಚ್ಚಲ ಪದಕ: ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ ಭಾವಿನಾ
Bhavina Patel
TV9 Web
| Edited By: |

Updated on:Aug 29, 2021 | 8:19 AM

Share

ಟೋಕಿಯೊ ಪ್ಯಾರಾಲಿಂಪಿಕ್ಸ್ 2020 (Tokyo Paralympics 2020) ಕ್ರೀಡಾಕೂಟದಲ್ಲಿ ಭಾರತಕ್ಕೆ ಚೊಚ್ಚಲ ಪದಕ ದಕ್ಕಿದೆ. ಭಾರತದ ಪ್ಯಾರಾ ಟೇಬಲ್‌ ಟೆನಿಸ್‌ ಆಟಗಾರ್ತಿ ಭಾವಿನಾ ಪಟೇಲ್‌ (Bhavina Patel) ಅವರು ಬೆಳ್ಳೆ ಪದಕಕ್ಕೆ ಕೊರಳೊಡ್ಡಿದ್ದಾರೆ. ಟೇಬಲ್ ಟೆನಿಸ್​ನ ಫೈನಲ್‌ ಪಂದ್ಯದಲ್ಲಿ ಚೀನಾದ ಝೋ ಯಿಂಗ್ ವಿರುದ್ಧ 0-3 ಅಂತರದಿಂದ ಸೋಲು ಕಾಣುವ ಮೂಲಕ ಭಾವಿನಾ ಚಿನ್ನ ಗೆಲ್ಲುವಲ್ಲಿ ಎಡವಿದರು. ಆದರೆ, ಪ್ಯಾರಾಲಿಂಪಿಕ್ಸ್​ನ ಟೇಬಲ್ ಟೆನಿಸ್​ನಲ್ಲಿ ಭಾರತ ಈವರೆಗೆ ಫೈನಲ್​ಗೆ ಲಗ್ಗೆಯಿಟ್ಟಿದ್ದೇ ಇಲ್ಲ. ಇದೇ ಮೊದಲ ಬಾರಿಗೆ ಫೈನಲ್​ಗೆ ತಲುಪಿ ಪದಕ ಗೆದ್ದಿರುವುದು ಐತಿಹಾಸಿಕ ಸಾಧನೆಯಾಗಿದೆ.

ಸಾಕಷ್ಟು ರೋಚಕತೆಯಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ಮೊದಲ ಪಂದ್ಯ 11-7 ಪಾಯಿಂಟ್​ನಿಂದ ಭಾರತ ಕಳೆದುಕೊಂಡಿತು. ಎರಡನೇ ಸೆಟ್​ನಲ್ಲೂ ಝೋ ಯಿಂಗ್ ಗೆಲುವು ಸಾಧಿಸಿ 2-0 ಯಿಂದ ಮುನ್ನಡೆ ಪಡೆದುಕೊಂಡರು. ಮೂರನೇ ಸೆಟ್​ನಲ್ಲೂ ಭಾರತಕ್ಕೆ ಕಮ್​ಬ್ಯಾಕ್ ಮಾಡಲು ಸಾಧ್ಯವಾಗಲಿಲ್ಲ.

ಅಂತಿಮವಾಗಿ ಚೀನಾದ ಝೋ ಯಿಂಗ್ -3-0 ಅಂತರದಿಂದ ಗೆದ್ದು ಚಿನ್ನದ ಪದಕ ತಮ್ಮದಾಗಿಸಿದರು. ಭಾವಿನಾ ಬೆಳ್ಳಿಗೆ ತೃಪ್ತಿಪಡಬೇಕಾಯಿತು.

ಇದಕ್ಕೂ ಮುನ್ನ ಶನಿವಾರ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಭಾವಿನಾ ಅವರು 2016ರ ರಿಯೋ ಒಲಿಂಪಿಕ್ ಪದಕ ವಿಜೇತೆ ಚೀನಾದ ಮಿಯಾ ಝಂಗ್ ಅವರನ್ನು3-2 ಅಂಕಗಳ ಅಂತರದಿಂದ ಸೋಲಿಸಿ ಫೈನಲ್​ಗೆ ಪ್ರವೇಶಿಸಿದ್ದರು. ಮೊದಲ ಸೆಟ್​ನಲ್ಲಿ ಭಾವಿನಾ 7-11ರ ಹಿನ್ನಡೆ ಅನುಭವಿಸಿದರೆ, ನಂತರ ಭರ್ಜರಿ ಕಮ್​ಬ್ಯಾಕ್ ಮಾಡಿದರು. ಎರಡನೇ ಸೆಟ್​ನಲ್ಲಿ 11-7, 11-4, 9-11 ಮತ್ತು ಅಂತಿಮ ಸೆಟ್​ನಲ್ಲಿ 11-8 ಅಂತರದಲ್ಲಿ ಗೆದ್ದು ಫೈನಲ್​ಗೆ ಪ್ರವೇಶ ಪಡೆದರು.

ತನ್ನ 12ನೇ ವಯಸ್ಸಿನಲ್ಲಿ ಪೋಲಿಯೊ ಪತ್ತೆಯಾದ 34 ರ ಹರೆಯದ ಭಾವಿನಾ ಪಂದ್ಯ ಮುಗಿದ ಬಳಿಕ ಮಾತನಾಡಿದ್ದು, “ನಾನು ನನ್ನನ್ನು ಅಂಗವಿಕಲೆ ಎಂದು ಪರಿಗಣಿಸುವುದಿಲ್ಲ, ನಾನು ಏನು ಬೇಕಾದರೂ ಮಾಡಬಲ್ಲೆ ಎಂದು ನನಗೆ ಯಾವಾಗಲೂ ವಿಶ್ವಾಸವಿದೆ. ನಾವು ಹಿಂದೆ ಇಲ್ಲ ಎಂಬುದನ್ನು ಸಾಬೀತುಪಡಿಸಿದ್ದೇನೆ. ಟೋಕಿಯೊದ ಪ್ಯಾರಾಲಿಂಪಿಕ್ಸ್ ಪ್ಯಾರಾ ಟೇಬಲ್ ಟೆನಿಸ್ ನಲ್ಲಿ ಪದಕ ಗೆದ್ದಿರುವುದು ಖುಷಿ ತಂದಿದೆ” ಎಂದು ಹೇಳಿದ್ದಾರೆ.

Published On - 7:52 am, Sun, 29 August 21

Follow Us
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!