ಟೋಕಿಯೊ ಪ್ಯಾರಾಲಿಂಪಿಕ್ಸ್ 2020 (Tokyo Paralympics 2020) ಕ್ರೀಡಾಕೂಟದಲ್ಲಿ ಭಾರತಕ್ಕೆ ಚೊಚ್ಚಲ ಪದಕ ದಕ್ಕಿದೆ. ಭಾರತದ ಪ್ಯಾರಾ ಟೇಬಲ್ ಟೆನಿಸ್ ಆಟಗಾರ್ತಿ ಭಾವಿನಾ ಪಟೇಲ್ (Bhavina Patel) ಅವರು ಬೆಳ್ಳೆ ಪದಕಕ್ಕೆ ಕೊರಳೊಡ್ಡಿದ್ದಾರೆ. ಟೇಬಲ್ ಟೆನಿಸ್ನ ಫೈನಲ್ ಪಂದ್ಯದಲ್ಲಿ ಚೀನಾದ ಝೋ ಯಿಂಗ್ ವಿರುದ್ಧ 0-3 ಅಂತರದಿಂದ ಸೋಲು ಕಾಣುವ ಮೂಲಕ ಭಾವಿನಾ ಚಿನ್ನ ಗೆಲ್ಲುವಲ್ಲಿ ಎಡವಿದರು. ಆದರೆ, ಪ್ಯಾರಾಲಿಂಪಿಕ್ಸ್ನ ಟೇಬಲ್ ಟೆನಿಸ್ನಲ್ಲಿ ಭಾರತ ಈವರೆಗೆ ಫೈನಲ್ಗೆ ಲಗ್ಗೆಯಿಟ್ಟಿದ್ದೇ ಇಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ತಲುಪಿ ಪದಕ ಗೆದ್ದಿರುವುದು ಐತಿಹಾಸಿಕ ಸಾಧನೆಯಾಗಿದೆ.
ಸಾಕಷ್ಟು ರೋಚಕತೆಯಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ಮೊದಲ ಪಂದ್ಯ 11-7 ಪಾಯಿಂಟ್ನಿಂದ ಭಾರತ ಕಳೆದುಕೊಂಡಿತು. ಎರಡನೇ ಸೆಟ್ನಲ್ಲೂ ಝೋ ಯಿಂಗ್ ಗೆಲುವು ಸಾಧಿಸಿ 2-0 ಯಿಂದ ಮುನ್ನಡೆ ಪಡೆದುಕೊಂಡರು. ಮೂರನೇ ಸೆಟ್ನಲ್ಲೂ ಭಾರತಕ್ಕೆ ಕಮ್ಬ್ಯಾಕ್ ಮಾಡಲು ಸಾಧ್ಯವಾಗಲಿಲ್ಲ.
Outstanding debut appearance from #IND Bhavina Patel at #Paralympics Bhavina Patel has created history by winning #Silver medal for #IND pic.twitter.com/Yv7AI347p1
— Doordarshan Sports (@ddsportschannel) August 29, 2021
ಅಂತಿಮವಾಗಿ ಚೀನಾದ ಝೋ ಯಿಂಗ್ -3-0 ಅಂತರದಿಂದ ಗೆದ್ದು ಚಿನ್ನದ ಪದಕ ತಮ್ಮದಾಗಿಸಿದರು. ಭಾವಿನಾ ಬೆಳ್ಳಿಗೆ ತೃಪ್ತಿಪಡಬೇಕಾಯಿತು.
ಇದಕ್ಕೂ ಮುನ್ನ ಶನಿವಾರ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಭಾವಿನಾ ಅವರು 2016ರ ರಿಯೋ ಒಲಿಂಪಿಕ್ ಪದಕ ವಿಜೇತೆ ಚೀನಾದ ಮಿಯಾ ಝಂಗ್ ಅವರನ್ನು3-2 ಅಂಕಗಳ ಅಂತರದಿಂದ ಸೋಲಿಸಿ ಫೈನಲ್ಗೆ ಪ್ರವೇಶಿಸಿದ್ದರು. ಮೊದಲ ಸೆಟ್ನಲ್ಲಿ ಭಾವಿನಾ 7-11ರ ಹಿನ್ನಡೆ ಅನುಭವಿಸಿದರೆ, ನಂತರ ಭರ್ಜರಿ ಕಮ್ಬ್ಯಾಕ್ ಮಾಡಿದರು. ಎರಡನೇ ಸೆಟ್ನಲ್ಲಿ 11-7, 11-4, 9-11 ಮತ್ತು ಅಂತಿಮ ಸೆಟ್ನಲ್ಲಿ 11-8 ಅಂತರದಲ್ಲಿ ಗೆದ್ದು ಫೈನಲ್ಗೆ ಪ್ರವೇಶ ಪಡೆದರು.
ತನ್ನ 12ನೇ ವಯಸ್ಸಿನಲ್ಲಿ ಪೋಲಿಯೊ ಪತ್ತೆಯಾದ 34 ರ ಹರೆಯದ ಭಾವಿನಾ ಪಂದ್ಯ ಮುಗಿದ ಬಳಿಕ ಮಾತನಾಡಿದ್ದು, “ನಾನು ನನ್ನನ್ನು ಅಂಗವಿಕಲೆ ಎಂದು ಪರಿಗಣಿಸುವುದಿಲ್ಲ, ನಾನು ಏನು ಬೇಕಾದರೂ ಮಾಡಬಲ್ಲೆ ಎಂದು ನನಗೆ ಯಾವಾಗಲೂ ವಿಶ್ವಾಸವಿದೆ. ನಾವು ಹಿಂದೆ ಇಲ್ಲ ಎಂಬುದನ್ನು ಸಾಬೀತುಪಡಿಸಿದ್ದೇನೆ. ಟೋಕಿಯೊದ ಪ್ಯಾರಾಲಿಂಪಿಕ್ಸ್ ಪ್ಯಾರಾ ಟೇಬಲ್ ಟೆನಿಸ್ ನಲ್ಲಿ ಪದಕ ಗೆದ್ದಿರುವುದು ಖುಷಿ ತಂದಿದೆ” ಎಂದು ಹೇಳಿದ್ದಾರೆ.
Published On - 7:52 am, Sun, 29 August 21