AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics: ಪ್ಯಾರಾಲಿಂಪಿಕ್ಸ್ 2020ರಲ್ಲಿ ಎರಡನೇ ಪದಕ ಗೆದ್ದ ಚಿನ್ನದ ಹುಡುಗಿ ಅವನಿ: ಶೂಟಿಂಗ್​ನಲ್ಲಿ ಕಂಚು

Avani Lekhara: ಅವನಿ ಮಹಿಳೆಯರ 50 ಮೀಟರ್​ನ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಹಾಲಿ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಗಳಿಕೆ 12ಕ್ಕೆ ಏರಿಕೆಯಾಗಿದೆ.

Tokyo Paralympics: ಪ್ಯಾರಾಲಿಂಪಿಕ್ಸ್ 2020ರಲ್ಲಿ ಎರಡನೇ ಪದಕ ಗೆದ್ದ ಚಿನ್ನದ ಹುಡುಗಿ ಅವನಿ: ಶೂಟಿಂಗ್​ನಲ್ಲಿ ಕಂಚು
Avani Lekhara
TV9 Web
| Edited By: |

Updated on:Sep 03, 2021 | 11:16 AM

Share

ಟೋಕಿಯೊ ಪ್ಯಾರಾಲಿಂಪಿಕ್ 2020ರಲ್ಲಿ (Tokyo Paralympics 2020) ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಅವನಿ ಲೆಕೇರಾ ಈಗ ಮತ್ತೊಂದು ಪದಕಕ್ಕೆ ಮುತ್ತಿಕ್ಕಿದ್ದಾರೆ. ಮಹಿಳೆಯರ 50 ಮೀಟರ್​ನ ರೈಫಲ್ 3 ಪೊಸಿಶನ್ಸ್ ಎಸ್ ಎಚ್ 1ರ ವಿಭಾಗದ ಶೂಟಿಂಗ್ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದು ಕಂಚಿನ ಪದಕ ತಮ್ಮದಾಗಿಸಿದ್ದಾರೆ. ಅವನಿ ಶೂಟಿಂಗ್​ನ​ ಈ ಫೈನಲ್​ ಪಂದ್ಯದಲ್ಲಿ 415 ಸ್ಕೋರ್ ಮಾಡಿದರು. ಇದಕ್ಕೂ ಮುನ್ನ ಇವರು 10 ಮೀಟರ್​ನ ಏರ್​ ರೈಫಲ್ ಶೂಟಿಂಗ್​ನಲ್ಲಿ ​249.6 ಸ್ಕೋರ್ ಮಾಡಿ ವಿಶ್ವ ದಾಖಲೆ ನಿರ್ಮಿಸಿ ಚಿನ್ನ ಗೆದ್ದಿದ್ದರು.

ಈ ಮೂಲಕ 19ರ ಹರೆಯದ ಜೈಪುರದ ಅವನಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಎರಡು ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಸಾಧನೆ ಮಾಡಿದ್ದಾರೆ.

ಇಂದು ಭಾರತಕ್ಕೆ ಶುಭ ಶುಕ್ರವಾರ ಎಂದೇ ಹೇಳಬಹುದು. ಆರಂಭದಲ್ಲಿ ಪುರುಷರ ಹೈ ಜಂಪ್ ಟಿ64 ವಿಭಾಗದಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದರು. ಪ್ರವೀಣ್ ಅವರು ಹೈ ಜಂಪ್​ನಲ್ಲಿ 2.07 ಮೀಟರ್ ಜಿಗಿದು ಏಷ್ಯಾದಲ್ಲೇ ಹೊಸ ದಾಖಲೆ ನಿರ್ಮಿಸಿದ್ದಾರೆ.

ಸದ್ಯ ಅವನಿ ಮಹಿಳೆಯರ 50 ಮೀಟರ್​ನ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಹಾಲಿ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಗಳಿಕೆ 12ಕ್ಕೆ ಏರಿಕೆಯಾಗಿದ್ದು, ಈ ಪೈಕಿ 2 ಚಿನ್ನ, 6 ಬೆಳ್ಳಿ ಮತ್ತು 4 ಕಂಚಿನ ಪದಕಗಳಿವೆ.

Published On - 11:05 am, Fri, 3 September 21

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?